ಚಾಮರಾಜನಗರ: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಚಾಮರಾಜನಗರ ಜಿಲ್ಲಾ ಸ್ಕೇಟಿಂಗ್ ಅಸೋಸಿಯೇಷನ್ ವತಿಯಿಂದ ನಗರದ ಖಾಸಗಿ ಬಸ್ ನಿಲ್ದಾಣದ ಆವರಣದಲ್ಲಿ ಮೂರು ಕಿಲೋಮೀಟರ್ ಸ್ಕೇಟಿಂಗ್ ಮ್ಯಾರಥಾನ್ ಆಯೋಜಿಸಲಾಗಿತ್ತು.
ಹಿರಿಯ ಕ್ರೀಡಾಪಟು ಶ್ರೀನಿವಾಸ್ ಪ್ರಸಾದ್ ಅವರು ಗಿಡಕ್ಕೆ ನೀರೆರೆಯುವ ಮೂಲಕ ಮ್ಯಾರಥಾನ್‍ಗೆ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಚಾಮರಾಜನಗರ ಜಿಲ್ಲೆಯಲ್ಲಿ ಸ್ಕೇಟಿಂಗ್ ಕ್ರೀಡೆ ಅತ್ಯಂತ ಜನಪ್ರಿಯವಾಗುತ್ತಿದ್ದು, ವೇಗವಾಗಿ ಅಭಿವೃದ್ಧಿ ಹೊಂದುತ್ತಿದೆ. ಗ್ರಾಮೀಣ ಕ್ರೀಡೆಗಳು ನಶಿಸುತ್ತಿರುವ ಇಂದಿನ ಸಂದರ್ಭದಲ್ಲಿ ಜಿಲ್ಲಾ ಕೇಂದ್ರದಲ್ಲಿ ಸ್ಕೇಟಿಂಗ್ ಕ್ರೀಡೆ ಹೆಸರುವಾಸಿಯಾಗುತ್ತಿರುವುದು ಸಂತಸದ ಸಂಗತಿ ಎಂದರು.
ಸ್ಕೇಟಿಂಗ್ ಸೇರಿದಂತೆ ವಿವಿಧ ಕ್ರೀಡೆಗಳಿಗೆ ಎಲ್ಲರೂ ಹೆಚ್ಚಿನ ಪೆÇ್ರೀತ್ಸಾಹ ನೀಡಬೇಕಾಗಿದೆ. ಮಕ್ಕಳನ್ನು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಲು ಪ್ರೋತ್ಸಾಹಿಸುತ್ತಿರುವ ಪ್ರೋಷಕರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಜಿಲ್ಲಾಡಳಿತ ಕ್ರೀಡಾ ಕ್ಷೇತ್ರಕ್ಕೆ ಹೆಚ್ಚಿನ ಉತ್ತೇಜನ ನೀಡಬೇಕು ಎಂದು ಹೇಳಿದರು.
ಸರ್ಕಾರದಿಂದ ಅಗತ್ಯ ನೆರವು ಹಾಗೂ ಪ್ರೋತ್ಸಾಹ ದೊರೆತರೆ ಮಾತ್ರ ಕ್ರೀಡಾಪಟುಗಳು ಉತ್ತಮ ತರಬೇತಿ ಪಡೆದು ಉನ್ನತ ಮಟ್ಟದಲ್ಲಿ ಸಾಧನೆ ಮಾಡಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಸರ್ಕಾರ ಹಾಗೂ ಸಂಬಂಧಪಟ್ಟ ಇಲಾಖೆಗಳು ಕ್ರೀಡಾಪಟುಗಳಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕುಜಿಲ್ಲೆಯಲ್ಲೂ ವಿವಿಧ ಕ್ರೀಡೆಗಳನ್ನಾಡುವ ಕ್ರೀಡಾಪಟುಗಳಿದ್ದು, ಅವರನ್ನು ಗುರುತಿಸಿ, ಮೇಲೆತ್ತುವ ಪ್ರಯತ್ನ ಮಾಡಬೇಕು ಎಂದು ಸಲಹೆ ನೀಡಿದರು. ಎಂದು ಮನವಿ ಮಾಡಿದರು.
ನಗರಸಭಾ ಹಿರಿಯ ಆರೋಗ್ಯೆಧಿಕಾರಿ ಮಂಜು, ಜಿಲ್ಲಾ ಸ್ಕೇಟಿಂಗ್ ಅಸೋಸಿಯೇಷನ್ ಅಧ್ಯಕ್ಷ ಪುರ್ಖಾನ್‍ಪಾಷ,ು ಹಿರಿಯ ಕ್ರೀಡಾಪಟು ಅಭಿಷಕ್, ಹಾಗೂ ಕ್ರೀಡಾ ವಿಧ್ಯಾರ್ಥಿಗಳು ಪೂಷಕರು ಇದ್ದರು.
