ಶ್ರೀ ಭಗವದ್ಗೀತಾ ಅಭಿಯಾನ ಕಾರ್ಯಕ್ರಮ

ಚಾಮರಾಜನಗರ : ಶ್ರೀ ಸರ್ವಜ್ಞೆಂದ್ರ ಸರಸ್ವತಿ ಪ್ರತಿಷ್ಠಾನ, ಶ್ರೀ ಸೋಂದ ಸ್ವರ್ಣವಲ್ಲಿ ಮಹಾಸಂಸ್ಥಾನ, ಶಿರಸಿ, ಉತ್ತರ ಕನ್ನಡ. ಶ್ರೀ ಭಗವದ್ಗೀತಾ ಅಭಿಯಾನ 2026 ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಸೇವಾ ಭಾರತಿ ಶಾಲಾ ಆವರಣದಲ್ಲಿ ಇಂದು ಜರಗಿತು.

ಚಾಮರಾಜನಗರ ಜಿಲ್ಲಾ ಶ್ರೀ ಭಗವದ್ಗೀತಾ ಅಭಿಯಾನ ಸಮಿತಿಯ ಗೌರವಾಧ್ಯಕ್ಷರಾದ ಶ್ರೀ ಜಿ.ಎಂ. ಹೆಗಡೆ ರವರು ಶ್ರೀ ಕೃಷ್ಣನ ವಿಗ್ರಹಕ್ಕೆ ಪುಷ್ಪಅರ್ಪಿಸಿ ಉದ್ಘಾಟನೆ ನೆರವೇರಿಸಿ ಮಾತನಾಡಿ ಸೊಂದ ಸ್ವರ್ಣವಲ್ಲಿ ಮಹಾಸಂಸ್ಥಾನ ಕಳೆದ 21 ವರ್ಷಗಳಿಂದ ಶ್ರೀ ಭಗವದ್ಗೀತಾ ಅಭಿಯಾನ ಕಾರ್ಯಕ್ರಮವನ್ನು ರಾಜ್ಯದ ಎಲ್ಲಾ ಕಡೆ ಆಚರಿಸಿಕೊಂಡು ಬರುತ್ತಿದೆ. ಸಾವಿರಾರು ಸಂಖ್ಯೆಯಲ್ಲಿ ಏಕಕಾಲದಲ್ಲಿ ಶ್ರೀ ಭಗವದ್ಗೀತೆಯ ಪಠಣವನ್ನು ಮಾಡುವ ಮೂಲಕ ಭಗವದ್ಗೀತೆಯ ಅರ್ಥ ಮತ್ತು ಶ್ಲೋಕ ವಾಚನದ ಮೂಲಕ ಮನುಷ್ಯ ತನ್ನ ಏಕಾಗ್ರತೆ, ಶಕ್ತಿ, ಸಾಮರ್ಥ್ಯ, ಮೌಲ್ಯಗಳನ್ನು ಹೆಚ್ಚಿಸಿಕೊಳ್ಳಲು ಸಹಾಯಕವಾಗುತ್ತದೆ. 2026 ಶ್ರೀ ಭಗವದ್ಗೀತಾ ಅಭಿಯಾನದಲ್ಲಿ ಶ್ರೀ ಭಗವದ್ಗೀತೆಯ ಎರಡನೇ ಅಧ್ಯಾಯ ಸಾಂಖ್ಯಯೋಗೋ ನಾಮ ಕಂಠಪಾಠ ಮಾಡುವ ಮೂಲಕ ಜಿಲ್ಲಾ ಮತ್ತು ರಾಜ್ಯಮಟ್ಟದ ಸ್ಪರ್ಧೆಗಳನ್ನು ಸಹ ಏರ್ಪಡಿಸಲಾಗಿದೆ. ಪ್ರಾಥಮಿಕ, ಪ್ರೌಢ ಮತ್ತು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಕಂಠಪಾಠ ಮತ್ತು ಭಾಷಣ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ. ಇದರ ಉದ್ಘಾಟನಾ ಸಮಾರಂಭ ನೆರವೇರುತ್ತಿರುವುದು ಸಂತೋಷವನ್ನು ತಂದಿದೆ ಎಂದರು.

ಪ್ರಾಸ್ತಾವಿಕವಾಗಿ ಸೇವಾ ಭಾರತಿ ಶಿಕ್ಷಣ ಸಂಸ್ಥೆಯ ಅಧ್ಯಾಪಕರಾದ ಅಭಿಲಾಶ್ ರವರು ಮಾತನಾಡಿ ಎರಡನೆಯ ಅಧ್ಯಾಯದಲ್ಲಿ 72 ಶ್ಲೋಕಗಳು ಇವೆ. ಪ್ರತಿಯೊಬ್ಬರು ಶ್ರದ್ಧೆಯಿಂದ ಭಗವದ್ಗೀತೆಯ ಶ್ಲೋಕಗಳನ್ನು ಹೇಳುವ ಮತ್ತು ಅರ್ಥ ವಿವರಣೆಯನ್ನು ತಿಳಿದುಕೊಳ್ಳಬೇಕು. ಭಗವದ್ಗೀತೆಯನ್ನು ಹೇಳಿಕೊಡುವುದು ಎಷ್ಟು ಮುಖ್ಯವೋ, ಅಷ್ಟೇ ಕಲಿಯುವುದು ಬಹಳ ಮುಖ್ಯ. ಎರಡು ತಿಂಗಳ ಅವಕಾಶದಲ್ಲಿ ನಾವೆಲ್ಲರೂ ಕಲಿತು ಭಗವದ್ಗೀತಾ ಅಭಿಯಾನದ ಸಮಾರೋಪ ಸಮಾರಂಭದಲ್ಲಿ ರಾಷ್ಟ್ರಭಾರತಿಗೆ ಅರ್ಪಿಸೋಣ ಎಂದರು.

ಶ್ರೀ ಭಗವದ್ ಗೀತಾ ಅಭಿಯಾನದ ಪ್ರಧಾನ ಕಾರ್ಯದರ್ಶಿ ಹಾಗೂ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಸುರೇಶ್ ಎನ್ ಋಗ್ವೇದಿ, ಶ್ರೀ ಭಗವದ್ಗೀತಾ ಅಭಿಯಾನ ಸಮಿತಿಯ ಖಜಾಂಚಿಗಳು ಹಾಗೂ ಸೇವಾ ಭಾರತಿ ಸಂಸ್ಥೆಯ ಸದಸ್ಯರಾದ ಶ್ರೀ ಎಸ್ ಬಾಲಸುಬ್ರಹ್ಮಣ್ಯಂ , ಮುಖ್ಯ ಶಿಕ್ಷಕರು, ಅಧ್ಯಾಪಕರು ಸಾವಿರಾರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸೇವಾಭಾರತಿ ಸಂಸ್ಥೆಯ ಆಡಳಿತಾಧಿಕಾರಿಗಳಾದ ಎಸ್ ರಮೇಶ್ ಅಧ್ಯಕ್ಷತೆ ವಹಿಸಿದ್ದರು.

Leave a Reply

Your email address will not be published. Required fields are marked *