ಚಾಮರಾಜನಗರ: ಕೆಂಪನಂಜಾಂಬಾ ಅಮ್ಮನವರ ಸಮೇತ ಶ್ರೀ ಚಾಮರಾಜೇಶ್ವರಸ್ವಾಮಿಯವರ ಮಹಾರಥೋತ್ಸವ ಜುಲೈ 10 ರಂದು ನಡೆಯಲಿದ್ದು, ಇದರ ಅಂಗವಾಗಿ ವಿವಿಧ ಪೂಜಾ ಕೈಂಕರ್ಯಗಳು ನಡೆಯಲಿವೆ.
ಜುಲೈ 5ರಂದು ಚಂದ್ರಮಂಡಲಾರೋಹಣೋತ್ಸವ, 6ರಂದು ಅನಂತ ಪೀಠಾರೋಹಣೋತ್ಸವ, 7ರಂದು ಪುಷ್ಪಮಂಟಪಾರೋಹಣೋತ್ಸವ, 8ರಂದು ವೃಷಭಾರೋಹಣೋತ್ಸವ, 9ರಂದು ವಸಂತೋತ್ಸವ ಪೂರ್ವಕ ಗಜವಾಹನೋತ್ಸವ ನಡೆಯಲಿದೆ.
ಆμÁಢ ಪೌರ್ಣಿಮೆಯ ಜುಲೈ 10ರಂದು ಪೂರ್ವಾμÁಢ ನಕ್ಷತ್ರದಲ್ಲಿ ಬೆಳಿಗ್ಗೆ 11.30 ರಿಂದ 12.15ರೊಳಗೆ ಸಲ್ಲುವ ಶುಭ ಕನ್ಯಾ ಲಗ್ನದಲ್ಲಿ ಶ್ರೀಮನ್ಮಹಾರಥಾರೋಹಣ ನಡೆಯಲಿದೆ. ಆ ನಂತರ ಹಂಸಾರೋಹಣಾನಂತರ ನಟೇಶೋತ್ಸವ ಜರುಗಲಿವೆ.
ಜುಲೈ 11ರಂದು ಮೃಗಯಾತ್ರಾ ಪೂರ್ವಕ ಅಶ್ವಾರೋಹಣ ನಂತರ ಮಹಾಭೂತಾರೋಹಣ, ದೇವಿ ಪ್ರಣಯ ಕಲಪ ಸಂಧಾನೋತ್ಸವ, 12ರಂದು ಹಗಲುಚೂರ್ಣೋತ್ಸವ ಪೂರ್ವಕ ಅವಭೃತ ತೀರ್ಥಸ್ನಾನ, ದ್ವಜಾವರೋಹಣ, ಮೌನಬಲಿ, 13ರಂದು ಪುಷ್ಪಯೋಗ ಪೂರ್ವಕ ಕೈಲಾಸಯಾನಾರೋಹಣೋತ್ಸವ ಹಾಗೂ 14ರಂದು ಮಹಾಸಂಪೆÇ್ರೀಕ್ಷಣಾ ಪೂರ್ವಕ ನಂದಿವಾಹನೋತ್ಸವ ನಡೆಯಲಿವೆ ಎಂದು ಪ್ರಕಟಣೆ ತಿಳಿಸಿದೆ.
Like this:
Like Loading...
Related