ಛಾಯಾಗ್ರಾಹಕ ಎಸ್.ಚರಣ್ ಬಿಳಿಗಿರಿಗೆ ರಾಜ್ಯಮಟ್ಟದ ಬಹುಮಾನ

ಚಾಮರಾಜನಗರ: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಮೈಸೂರು ಪತ್ರಿಕಾ ಛಾಯಾಗ್ರಹಕರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ರಾಜ್ಯಮಟ್ಟದ ಛಾಯಾಗ್ರಾಹಕ ಸ್ಪರ್ಧೆಯಲ್ಲಿ ಚಾಮರಾಜನಗರದ ಯುವ ಛಾಯಾಗ್ರಾಹಕ ಎಸ್.ಚರಣ್ ಬಿಳಿಗಿರಿ ಅವರು ಸಮಾಧಾನಕರ ಬಹುಮಾನವನ್ನು ತಮ್ಮದಾಗಿಸಿಕೊಂಡಿದ್ದಾರೆ.

ದಸರಾ ಮಹೋತ್ಸವ ಅಂಗವಾಗಿ ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ಸುದ್ದಿ ಛಾಯಾಚಿತ್ರ ಸ್ಪರ್ಧೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಪತ್ರಿಕಾ ಛಾಯಾಗ್ರಾಹಕರು ತಮ್ಮ ಸುದ್ದಿ ಛಾಯಾಚಿತ್ರಗಳನ್ನು ಕಳುಹಿಸಿದ್ದರು.

ಈ ಸ್ಪರ್ಧೆಯಲ್ಲಿ ಎಸ್ ಚರಣ್ ಬಿಳಿಗಿರಿ ಚಾಮರಾಜನಗರ ಇವರು ಸಮಾಧಾನಕರ ಬಹುಮಾನವನ್ನು ತಮ್ಮದಾಗಿಸಿಕೊಂಡಿದ್ದಾರೆ. ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯನವರ ಹೆಸರಿನಲ್ಲಿ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರಗಳನ್ನು ವಿತರಿಸಲಾಗುವುದು.

ಬಹುಮಾನ ವಿಜೇತರಿಗೆ ಮೈಸೂರು ಪತ್ರಿಕಾ ಛಾಯಾಗ್ರಾಹಕರ ಸಂಘವು ದಸರಾ ಮಹೋತ್ಸವದ ನಂತರ ಹಮ್ಮಿಕೊಳ್ಳುವ ಕಾರ್ಯಕ್ರಮದಲ್ಲಿ ಮುಖ್ಯ ಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ನವರಿಂದ ಪ್ರಶಸ್ತಿಗಳನ್ನು ವಿತರಿಸಲಾಗುವುದು.

ಸ್ಪರ್ಧೆಯ ತೀರ್ಪುಗಾರರಾಗಿ ಹಿರಿಯ ಪತ್ರಕರ್ತ ಕೃಷ್ಣಪ್ರಸಾದ್, ಹಿರಿಯ ಛಾಯಾಗ್ರಹಕ ಎಸ್ ತಿಪ್ಪೇಸ್ವಾಮಿ ಹಾಗೂ ಹಲೋ ಮೈಸೂರು ಪತ್ರಿಕೆಯ ಸಂಪಾದಕರಾದ ಟಿ.ಜಿ.ಗುರುರಾಜ್ ಅವರು ಆಗಮಿಸಿದ್ದರು.

Leave a Reply

Your email address will not be published. Required fields are marked *