ಫೆ.28 ರಂದು ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಶೈಕ್ಷಣಿಕ ಮಹಾ ಸಮ್ಮೇಳನ:  ಸಿ.ಕೆ.ರಾಮಸ್ವಾಮಿ

ಚಾಮರಾಜನಗರ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಫೆ.28 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುವ ರಾಜ್ಯ ಮಟ್ಟದ ಶೈಕ್ಷಣಿಕ ಮಹಾ ಸಮ್ಮೇಳನ, ಧನ್ಯತಾ ಸಮಾರಂಭ, ಸಂಘದ ಸುವರ್ಣ ಮಹೋತ್ಸವ ಹಾಗೂ ಗುರುವಂದನಾ ಸಮಾರಂಭಕ್ಕೆ ತಾಲೂಕಿನಿಂದ ಶಿಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿಕೊಡಬೇಕು  ಎಂದು ಸಂಘದ ತಾಲೂಕು ಅಧ್ಯಕ್ಷ ಸಿ.ಕೆ.ರಾಮಸ್ವಾಮಿ ಮನವಿ ಮಾಡಿದರು.

ನಗರದ ಶಿಕ್ಷಕರ ಭವನದಲ್ಲಿ ನಡೆದ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಸಮಿತಿ ಪದಾಧಿಕಾರಿಗಳು ಕಾರ್ಯಕಾರಿಣಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,  ಅಂದು ನಡೆಯುವ ಸಮಾರಂಭದಲ್ಲಿ   ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು, ಶಾಲಾ  ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧುಬಂಗಾರಪ್ಪ ಭಾಗವಹಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವ ರಾಜ್ತ ಸರ್ಕಾರ ಸಂಘದ ಅನೇಕ ಬೇಡಿಕೆಗಳ ಈಡೇರಿಸಿರುವುದಕ್ಕೆ ಸಂಘದ ವತಿಯಿಂದ ಅವರಿಗೆ ಹೃದಯಸ್ಪರ್ಶಿ ಅಭಿನಂದನೆ ಸಲ್ಲಿಸಲಾಗುತ್ತದೆ. ಈ ಸಮಾರಂಭಕ್ಕೆ  ಸಂಘದ ಪದಾಧಿಕಾರಿಗಳು, ಸದಸ್ಯ ರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.
  ಸನ್ಮಾನ: ಇದೇ ಸಂದರ್ಭದಲ್ಲಿ ಹಿರಿಯ ಮುಖ್ಯ ಶಿಕ್ಷಕರಾಗಿ ಬಡ್ತಿ ಹೊಂದಿದ್ದ ಶಿವನಂಜಯ್ಯ, ಶಿವಕುಮಾರ್ ಅವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.
   ಸಭೆಯಲ್ಲಿ ಜಿಲ್ಲಾಧ್ಯಕ್ಷ ಕೆ.ಎಸ್.ಮಾದಪ್ಪ, ಪ್ರಧಾನ ಕಾರ್ಯದರ್ಶಿ ಮಹದೇವಸ್ವಾಮಿ, ಮೈಸೂರು ವಿಭಾಗ ಕಾರ್ಯದರ್ಶಿ ಎಂ.ಡಿ.ಮಹದೇವಯ್ಯ, ಕರ್ನಾಟಕ ಸರ್ಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಭರತ್‌ಭೂಷಣ್, ಗೌರವಾಧ್ಯಕ್ಷ ಹೆಚ್.ಜಿ.ರಾಜು, ಖಜಾಂಚೆ ಕೃಷ್ಣಮೂರ್ತಿ, ತಾಲೂಕು ಪ್ರಧಾನ ಕಾರ್ಯದರ್ಶಿ ಎನ್.ಸುಧಾ, ಮುರುಗೇಶ್ ಕುಮಾರ್, ಭವಾನಿದೇವಿ, ಸಬಾನಅಜಂ, ಸಹ ಕಾರ್ಯದರ್ಶಿಗಳಾದ ಸವಿತಾರಾಣಿ, ಮಹದೇವಸ್ವಾಮಿ, ಶಿವಕುಮಾರ್‌, ಶಿವನಂಜಯ್ಯ, ಪದಾಧಿಕಾರಿಗಳು, ನಿರ್ದೇಶಕರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *