ಜೂ. 6 ರಂದು ಬೆಂಗಳೂರಿನಲ್ಲಿ ರಾಜ್ಯ ಮಟ್ಟದ  ಐಕ್ಯತಾ  ಸಮಾವೇಶ : ಡಾ.ಎಸ್.ವಿಜಯಕುಮಾ‌ರ್

  ಚಾಮರಾಜನಗರ: ಕರ್ನಾಟಕ ರಾಜ್ಯ ಸರ್ಕಾರಿ ಎಸ್‌ಸಿ, ಎಸ್‌ಟಿ ನೌಕರರ ಸಮನ್ವಯ ಸಮಿತಿಯು 6ನೇ ರಾಜ್ಯ ಮಟ್ಟದ ಐಕ್ಯತಾ ಬೃಹತ್‌ ಸಮಾವೇಶವನ್ನು ಜೂ. 6 ರಂದು ಬೆಂಗಳೂರಿನಲ್ಲಿ ಅಯೋಜಿಸಿದೆ ಎಂದು ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ಎಸ್.ವಿಜಯಕುಮಾರ್ ತಿಳಿಸಿದರು.
  ನಗರದ ನ್ಯಾಯಾಲಯದ ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಕಚೇರಿಯ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಎಸ್‌ಸಿ, ಎಸ್‌ಟಿ ನೌಕರರ ಸಮನ್ವಯ ಸಮಿತಿಯು ಐಕ್ಯತಾ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು.
   ಅಂದು ಶನಿವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಎಸ್‌ಸಿ, ಎಸ್‌ಟಿ ನೌಕರರ ಸಮನ್ವಯ ಸಮಿತಿಯು 6ನೇ ರಾಜ್ಯ ಮಟ್ಟದ ಐಕ್ಯತಾ ಬೃಹತ್ ಸಮಾವೇಶ ಅಯೋಜಿಸಲಾಗಿದೆ ಎಂದರು.
   ಐಕ್ಯತಾ ಸಮಾವೇಶವನ್ನು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಗೃಹ ಸಚಿವರಾದ ಜಿ.ಪರಮೇಶ್ವರ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಸಚಿವರಾದ ಸತೀಶ್ ಜಾರಕಿಹೊಳಿ, ಕೆ.ಎಚ್.ಮುನಿಯಪ್ಪ, ಶಿವರಾಜ್
ತಂಗಡಗಿ, ಪ್ರಿಯಾಂಕಖರ್ಗೆ, ಹೆಚ್.ಸಿ.ಮಹದೇವಪ್ಪ ಭಾಗವಹಿಸಲಿದ್ದಾರೆ. ಸಮಾರೋಪ ಸಮಾರಂಭದಲ್ಲಿ ವಿರೋಧ ಪಕ್ಷದ ನಾಯಕರು ಭಾಗವಹಿಸಲಿದ್ದಾರೆ’ ಎಂದರು. ವಿಚಾರ ಸಂಕಿರಣದಲ್ಲಿ ವಿವಿಧ ಇಲಾಖೆಯ ಐಎಎಸ್ ಅಧಿಕಾರಿಗಳು ವಿಚಾರ ಮಂಡಿಸಲಿದ್ದಾರೆ. ಅಂದು ದಿನಪೂರ್ತಿ ಕಾರ್ಯಕ್ರಮ ನಡೆಯುತ್ತದೆ. ಎರಡು ದಿನಗಳು ಒ.ಒ.ಡಿ ಸೌಲಭ್ಯವನ್ನು ರಾಜ್ಯ ಸರ್ಕಾರ ಮಂಜೂರು ಮಾಡುತ್ತದೆ. ಈ ಸಮಾವೇಶಕ್ಕೆ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಇಲಾಖೆಯ ವಿಶ್ವವಿದ್ಯಾಲಯಗಳ, ಅರೆ ಸರ್ಕಾರಿ, ಅನುದಾನಿತ ಸಂಸ್ಥೆಗಳ ಎಸ್‌ಸಿ, ಎಸ್‌ಟಿ ನೌಕರರೆಲ್ಲರೂ ಕೂಡ ಭಾಗವಹಿಸಿ ಯಶ್ವಸಿಗೊಳಿಸಿಕೊಡಬೇಕು ಎಂದು ಮನವಿ ಮಾಡಿದರು.
ಈ ಐಕ್ಯತಾ ಸಮಾವೇಶದ ಮುಖ್ಯ ಉದ್ದೇಶ ಶೇ. 8ರಷ್ಟು ಮಾತ್ರ ಎಸ್‌ಸಿ, ಎಸ್‌ಟಿ ನೌಕರರಿಗೆ ಸಿಗುತ್ತಿದೆ. ಉಳಿದ ಸೇವಾ ವಲಯಗಳಲ್ಲಿ ಮೀಸಲಾತಿ ಇಲ್ಲ. ಆಗಾಗಿ ಈ ವಲಯದಲ್ಲೂ ಮೀಸಲಾತಿ ಕೊಡಬೇಕು ಎಂದು ಈ ಸಮಾವೇಶದ ಮೂಲಕ ಸರ್ಕಾರ ಗಮನ ಸೆಳೆಯಲಾಗುವುದು. ಈ ಸಮಾವೇಶದಲ್ಲಿ ಸುಮಾರು 30 ಸಾವಿರ ನೌಕರರು ಭಾಗವಹಿಸಲಿದ್ದಾರೆ. ಶೇ 40 ರಷ್ಟು ಮಹಿಳಾ ನೌಕರರು ಭಾಗವಹಿಸಲಿದ್ದಾರೆ ಎಂದರು.
ಚಾಮರಾಜನಗರ ಜಿಲ್ಲೆಯ ಎಲ್ಲಾ ತಾಲೂಕಿನ ಎಸ್ ಸಿ, ಎಸ್ ಟಿ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಕೋರಿದರು.
ಸಭೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಎಸ್ ಸಿ, ಎಸ್ ಟಿ ನೌಕರರ ಸಮನ್ವಯ ಸಮಿತಿ ಜಿಲ್ಲಾಧ್ಯಕ್ಷ
  ಸಿ.ಕೆ.ರಾಮಸ್ವಾಮಿ, ಪ್ರಧಾನ ಕಾರ್ಯದರ್ಶಿ ನಂಜುಂಡಸ್ವಾಮಿ, ಹಿರಿಯ ಉಪಾಧ್ಯಕ್ಷ ಶ್ರೀನಿವಾಸಮೂರ್ತಿ, ಸರ್ಕಾರಿ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ಮಹಾದೇವಸ್ವಾಮಿ, ಸಂಘದ ಉಪಾಧ್ಯಕ್ಷ ರಾದ ಮಹೇಂದ್ರ, ರವಿಕುಮಾರ್, ಜಯಶಂಕರ್, ಮುರುಗೇಶ್ ಕುಮಾರ್, ನಂಜುಂಡಸ್ವಾಮಿ, ಶಾಂತರಾಜು,ನಂದೀಶ್, ವೇಲುಕುಮಾರ್, ಸುಬ್ರಹ್ಮಣ್ಯ ಇತರರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *