ಸ್ವಚ್ಛತೆ ಇದ್ದರೆ ಉತ್ತಮ ಆರೋಗ್ಯ : ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ವೆಂಕಟೇಶ್

ಚಾಮರಾಜನಗರ: ವಿದ್ಯಾರ್ಥಿಗಳು ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿದರೆ ಆರೋಗ್ಯ ಸಹ ಉತ್ತಮವಾಗಿ ಇರಲಿದೆ ಎಂದು ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ವೆಂಕಟೇಶ್ ಅವರು ತಿಳಿಸಿದರು.

ನಗರದ ಪಿಡಬ್ಲ್ಯೂಡಿ ಕಾಲೋನಿಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಗರಸಭೆ ವತಿಯಿಂದ ಏರ್ಪಡಿಸಿದ್ದ ಸ್ವಚ್ಛತೆ ಅಭಿಯಾನ ಕಾರ್ಯಕ್ರಮಕ್ಕೆ ಗಿಡಕ್ಕೆ ನೀರೆರೆಯುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಶಾಲಾ-ಕಾಲೇಜುಗಳು ಹಾಗೂ ಮನೆಯ ಸುತ್ತಮುತ್ತ ಸ್ವಚ್ಛತೆ ಬಗ್ಗೆ ವಿದ್ಯಾರ್ಥಿಗಳು ಅರಿವು ಮೂಡಿಸಬೇಕು. ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ತ್ಯಜಿಸಬೇಕು. ಪರಿಸರ ಸ್ನೇಹಿ ವಸ್ತುಗಳಿಗೆ ಉತ್ತೇಜನ ನೀಡಬೇಕು. ಪ್ಲಾಸ್ಟಿಕ್ ಕವರ್ ಬದಲಿಗೆ ಬಟ್ಟೆ ಬ್ಯಾಗ್ ಗಳನ್ನು ಉಪಯೋಗಿಸಲು ವಿದ್ಯಾರ್ಥಿಗಳು ಜಾಗೃತಿ ಮೂಡಿಸಬೇಕು ಎಂದು ವೆಂಕಟೇಶ್ ಅವರು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನಗರಸಭೆ ಆಯುಕ್ತರಾದ ಪರಶುರಾಮ್ ಛಲವಾದಿ ಅವರು ಮಾತನಾಡಿ ವಿದ್ಯಾರ್ಥಿಗಳು ತಮ್ಮ ಪೆÇೀಷಕರಿಗೆ ಸ್ವಚ್ಚತೆಯ ಮಹತ್ವದ ಬಗ್ಗೆ ತಿಳಿವಳಿಕೆ ನೀಡಬೇಕು. ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ಸ್ವಚ್ಛತೆಗೆ ಸಮಯ ಮೀಸಲಿಡುವುದಾಗಿ ಹಾಗೂ ನಿಗದಿತ ಸೂಚಿತ ಸ್ಥಳದಲ್ಲಿಯೇ ತ್ಯಾಜ್ಯವನ್ನು ಹಾಕುತ್ತೇನೆ ಎಂಬ ಸಂಕಲ್ಪ ಮಾಡಬೇಕು ಎಂದರು.

ನಗರಸಭೆ ಪರಿಸರ ಅಭಿಯಂತರರಾದ ಎಲ್. ರೂಪ ಮಾತನಾಡಿ ನಗರ ಸ್ವಚ್ಚತೆಗೆ ಸಾರ್ವಜನಿಕರ ಸಹಕಾರವು ಮುಖ್ಯವಾಗಿದೆ. ಕಸದ ವಾಹನಗಳಿಗೆ ಹಸಿ ಕಸ ಹಾಗೂ ಒಣ ಕಸವನ್ನು ವಿಂಗಡಿಸಿ ಪ್ರತ್ಯೇಕವಾಗಿ ನೀಡಬೇಕು ಎಂದರು.

ನಗರಸಭೆ ಆರೋಗ್ಯ ಅಧಿಕಾರಿ ಮಂಜುನಾಥ್ ಮಾತನಾಡಿ ಪರಿಸರ ಜಾಗೃತಿ ಮೂಡಿಸಲು ರಂಗೋಲಿ, ಚಿತ್ರಕಲೆ ಚರ್ಚಾ ಸ್ಪರ್ಧೆಗಳನ್ನು ನಗರಸಭೆ ವ್ಯಾಪ್ತಿಯಲ್ಲಿ ಹಮ್ಮಿಕೊಂಡು ಬರಲಾಗುತ್ತಿದೆ ಎಂದರು.

ಪಿಡಬ್ಲ್ಯೂಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕರಾದ ವಿ. ಮಹದೇವಯ್ಯ, ಶ್ರೀ ವರಮಹಾಲಕ್ಷ್ಮಿ ಸಾಂಸ್ಕøತಿಕ ಕ್ರೀಡಾ ಸೇವಾ ಸಂಸ್ಥೆ ಅಧ್ಯಕ್ಷರಾದ ಜಿ ಬಂಗಾರು, ಚಾಮರಾಜನಗರ ಅರಣ್ಯ ಸಂಚಾರಿ ದಳ ಪೆÇೀಲಿಸ್ ಸಬ್ ಇನ್ಸ್ಪೆಕ್ಟರ್ ಯಾಸ್ಮಿನ್ ತಾಜ್, ನಗರಸಭೆ ಆರೋಗ್ಯಧಿಕಾರಿ ಪುಷ್ಪ, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *