ಮೈಸೂರು: ವಿದ್ಯಾರ್ಥಿಗಳು ತಮ್ಮ ವ್ಯಾಸಂಗದ ಅವಧಿಯಲ್ಲಿ ಉತ್ತಮವಾಗಿ ಕಲಿಯುವ ಮೂಲಕ ಉನ್ನತ ಸ್ಥಾನಮಾನಗಳನ್ನು ಅಲಂಕರಿಸಬೇಕು ಎಂದು ಯುವ ಮುಖಂಡ ಕಾಂತರಾಜು ಹೇಳಿದರು.
ಅವರು ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲೂಕಿನ ಬಂಡಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ಚನ್ನoಗೆರೆ ಗ್ರಾಮ ಪಂಚಾಯಿತಿ ವತಿಯಿಂದ ಬ್ಯಾಂಡ್ ಸೆಟ್ ಮತ್ತು ಮೈಕ್ ವಿತರಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ವಿದ್ಯಾರ್ಥಿಗಳು ತಮ್ಮ ಪಠ್ಯಪುಸ್ತಕಗಳ ಜೊತೆಗೆ ಕ್ರೀಡೆ, ಸಾಂಸ್ಕೃತಿಕ ವಿಭಾಗ ಸೇರಿದಂತೆ ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿಸಿಕೊಳ್ಳುವ ಮೂಲಕ ತಮ್ಮಲ್ಲಿರುವ ಸೂಪ್ತ ಪ್ರತಿಭೆಯನ್ನು ಅನಾವರಣಗೊಳಿಸಬೇಕು.
ಶಿಕ್ಷಕರುಗಳು ಮಕ್ಕಳಲ್ಲಿನ ಕಲಿಕಾ ಸಾಮರ್ಥ್ಯವನ್ನು ಗುರುತಿಸಿ ಅವರ ಕಲಿಕಾ ಸಾಮರ್ಥ್ಯವನ್ನು ಹೆಚ್ಚಿಸಬೇಕು. ಜೊತೆಗೆ ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಿ ಅದನ್ನು ಪ್ರೋತ್ಸಾಹಿಸಬೇಕು.
ಪೋಷಕರುಗಳು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಕಳಿಸಿ ಕಡ್ಡಾಯವಾಗಿ ಶಿಕ್ಷಣವನ್ನು ಕೊಡಿಸಬೇಕು ಎಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷ ಹರೀಶ್, ಗ್ರಾಮ ಪಂಚಾಯಿತಿ ಸದಸ್ಯ ಅಶ್ವಥ್, ಪಿಡಿಓ ಸ್ವಾಮಿನಾಯಕ, ಮುಖ್ಯ ಶಿಕ್ಷಕರುಗಳಾದ ಜವರಯ್ಯ,
ಎಂ.ಆರ್.ರಘು, ಶಿಕ್ಷಕರುಗಳಾದ
ಬಿ.ಕೆ.ಚಿದಾನಂದ, ಎಸ್.ಎನ್.ಮಂಜು, ಶ್ರೀಧರ್, ಶ್ರುತಿ, ದೀಕ್ಷಾ, ಶಾಲಾ ಸಿಬ್ಬಂದಿಗಳಾದ ಪ್ರಮೋದ್, ಗುರುರಾಜ್, ಗ್ರಾಮ ಪಂಚಾಯಿತಿ ಸಿಬ್ಬಂದಿಗಳಾದ ರಘು, ಸುರೇಶ್, ವಿದ್ಯಾರ್ಥಿಗಳು ಸೇರಿದಂತೆ ಹಲವರು ಇದ್ದರು.