ವಿದ್ಯಾರ್ಥಿಗಳು ಚೆನ್ನಾಗಿ ಓದಿ ಉತ್ತಮ ಉದ್ಯೋಗ ಪಡೆದುಕೊಳ್ಳಿ: ಸಚಿವ ಪುಟ್ಟರಂಗಶೆಟ್ಟಿ

ಚಾಮರಾಜನಗರ: ವಿದ್ಯಾರ್ಥಿಗಳು ಚೆನ್ನಾಗಿ ಓದಿ ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿ, ಉತ್ತಮ ಉದ್ಯೋಗ ಪಡೆದುಕೊಳ್ಳುವ ಮೂಲಕ ತಮ್ಮ ಭವಿಷ್ಯವನ್ನು ಉಜ್ವಲವಾಗಿಸಿಕೊಳ್ಳಬೇಕು ಎಂದು ಪಶುಸಂಗೋಪನೆ ಹಾಗೂ ರೇಷ್ಮೆ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ಹೇಳಿದರು.

ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ವತಿಯಿಂದ ಆಯೋಜಿಸಿದ್ದ ಸಾಂಸ್ಕೃತಿಕ, ಕ್ರೀಡಾ, ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್), ಸ್ಕೌಟ್ಸ್ ಮತ್ತು ಗೈಡ್ಸ್, ರೆಡ್‌ಕ್ರಾಸ್ ಹಾಗೂ ವಿವಿಧ ಸಮಿತಿಗಳ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಶಿಕ್ಷಣದ ಜೊತೆಗೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳು ಹಾಗೂ ಸಾಮಾಜಿಕ ಸೇವಾ ಕಾರ್ಯಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವುದರಿಂದ ವ್ಯಕ್ತಿತ್ವ ವಿಕಸನವಾಗುತ್ತದೆ. ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆ ಹಾಗೂ ಕೌಶಲ್ಯಗಳನ್ನು ಬೆಳೆಸಿಕೊಂಡು ಭವಿಷ್ಯದಲ್ಲಿ ಉತ್ತಮ ಸಾಧನೆ ಮಾಡಬೇಕು ಎಂದು ಸಚಿವರು ಸಲಹೆ ನೀಡಿದರು.

ಸರ್ಕಾರಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ. ವಿದ್ಯಾರ್ಥಿಗಳು ಲಭ್ಯವಿರುವ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಉನ್ನತ ಶಿಕ್ಷಣ ಪಡೆದು ಸಮಾಜಕ್ಕೆ ಕೊಡುಗೆ ನೀಡಬೇಕು ಎಂದು ಅವರು ಹೇಳಿದರು.

Leave a Reply

Your email address will not be published. Required fields are marked *