ಸಂವಿಧಾನ ಅಧ್ಯಯನ ಪ್ರತಿಯೊಬ್ಬರ ಆದ್ಯ ಕರ್ತವ್ಯ: ವೆಂಕಟರಮಣಸ್ವಾಮಿ(ಪಾಪು)

  • ಮಲ್ಲಯ್ಯನಪುರ ಸಮೀಪದ ಸರ್ಕಾರಿ ಪದವಿಪೂರ್ವ ಕಾಲೇಜು, ಆದರ್ಶ ವಿದ್ಯಾಲಯದಲ್ಲಿ ‘ಸಂವಿಧಾನ ಅರಿವು ಕಾರ್ಯಕ್ರಮ’

ಚಾಮರಾಜನಗರ: ಸಂವಿಧಾನ ಅಧ್ಯಯನ ಮಾಡುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದ್ದು, ಸಂವಿಧಾನ ಅಧ್ಯಯನ ಮಾಡುವುದರಿಂದ ಪ್ರತಿಯೊಬ್ಬರು ಉತ್ತಮ ಬದುಕು ಕಟ್ಟಿಕೊಳ್ಳುವ ಅವಕಾಶವಿದೆ ಅದನ್ನು ರಕ್ಷಣೆ ಮಾಡುವ ಮಹತ್ವದ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ದಲಿತ ಮಹಾಸಭೆ ರಾಜ್ಯ ಉಪಾಧ್ಯಕ್ಷ ಅಂಬೇಡ್ಕರ್ ಪ್ರಶಸ್ತಿ ಪುರಸ್ಕøತ ವೆಂಕಟರಮಣಸ್ವಾಮಿ(ಪಾಪು) ಅಭಿಪ್ರಾಯಪಟ್ಟರು.

ತಾಲ್ಲೂಕಿನ ಮಲ್ಲಯ್ಯನಪುರ ಸಮೀಪದ ಸರ್ಕಾರಿ ಪದವಿಪೂರ್ವ ಕಾಲೇಜು ಆದರ್ಶ ವಿದ್ಯಾಲಯದಲ್ಲಿ ಜಿಲ್ಲಾ ಜನಹಿತಾಶಕ್ತಿ ಹೋರಾಟ ವೇದಿಕೆ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ನಡೆದ’ ಸಂವಿಧಾನ ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಅಂಬೇಡ್ಕರ್ ಅವರು ಕಷ್ಟಪಟ್ಟು ವಿದ್ಯಾಭ್ಯಾಸ ಮಾಡಿ, ವಿವಿಧ ದೇಶಗಳ ಸಂವಿಧಾನ ಅಧ್ಯಯನ ಮಾಡಿ, ಭಾರತದ ಅಭಿವೃದ್ದಿಗೆ ಪೂರಕವಾದ ಸುಭದ್ರ ಸಂವಿಧಾನ ರಚನೆಮಾಡಿ, ದೇಶಕ್ಕೆ ಅರ್ಪಣೆ ಮಾಡಿದ್ದಾರೆ. ಅಮೂಲ್ಯವಾದ ಸಂವಿಧಾನವನ್ನು 1949 ನ.26 ರಂದು ಅಂಬೇಡ್ಕರ್ ದೇಶಕ್ಕೆ ಸಮರ್ಪಣೆ ಮಾಡಿದರು. 1950 ಜ.26 ರಂದು ಅದÀನ್ನು ಅಧಿಕೃತವಾಗಿ ಜಾರಿಗೆ ತರಲಾಯಿತು.. ಮಾನವೀಯ ಮೌಲ್ಯಗಳ ಆಗರವಾಗಿರುವ ಸಂವಿಧಾನದ ಮೂಲ ಆಶಯಗಳನ್ನು ನಾವು ಪಾಲನೆ ಮಾಡುವ ಅಗತ್ಯವಿದೆ ಎಂದರು.ಶಾಲಾಕಾಲೇಜಿನ ವಿದ್ಯಾರ್ಥಿಗಳು ವಿದ್ಯಾರ್ಥಿದೆಸೆಯಲ್ಲೇ ಅಂಬೇಡ್ಕರ್ ರಚಿಸಿರುವ ಸಂವಿಧಾನದಲ್ಲಿ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳನ್ನು ಅಳವಡಿಸಲಾಗಿದೆ. ವಿದ್ಯಾರ್ಥಿಗಳು ತಮ್ಮ ವ್ಯಾಸಂಗದ ಅವಧಿಯಲ್ಲಿ ಸಂವಿಧಾನವನ್ನು ಅಧ್ಯಯನ ಮಾಡಬೇಕು, ಸಂವಿಧಾನದಲ್ಲಿ ವಿದ್ಯಾರ್ಥಿಗಳಿಗೆ ಅನೇಕ ಅಂಶಗಳಿವೆ. ಸ್ಪರ್ಧಾತ್ಮಕ ಪರೀಕ್ಷೆ ತೆಗೆದುಕೊಂಡ ವಿದ್ಯಾರ್ಥಿಗಳಿಗೆ ಸಂವಿಧಾನದ ಅರಿವು ಅತ್ಯಂತ ಉಪಯುಕ್ತವಾಗಿದೆ ಎಂದರು.

ಜಿಲ್ಲಾ ಲೇಖಕರ ಸಂಘದ ಅಧ್ಯಕ್ಷ ದುಂಡುಮಾದಯ್ಯ ಅವರು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿ, ದೇಶದ ಕಟ್ಟಕಡೆಯ ಪ್ರಜೆಗಳಿಗೂ ಸಂವಿಧಾನ ಅರಿವು ಅಗತ್ಯವಿದೆ. ವಿದ್ಯಾರ್ಥಿಗಳು ತಮ್ಮ ವ್ಯಾಸಂಗದ ಅವಧಿಯಲ್ಲಿ ಸಂವಿಧಾನವನ್ನು ಅಧ್ಯಯನ ಮಾಡಬೇಕು ವಿದ್ಯಾರ್ಥಿಗಳು ಮೌಲ್ಯಯುತ ಶಿಕ್ಷಣಪಡೆಯುವುದg À ಜೊತೆಗೆ ಸಂಸ್ಕಾರ ರೂಡಿಸಿಕೊಳ್ಳಬೇಕು, ಗುರುಹಿರಿಯರಿಗೆ ಗೌರವ ನೀಡಬೇಕು ಎಂದರು.
ಎಸ್‍ಡಿಎಂಸಿ ಸದಸ್ಯ ಎಂ.ಮಹೇಶ್ ಮಾತನಾಡಿ, ಸಂವಿಧಾನದಲ್ಲಿ ವಿದ್ಯಾರ್ಥಿಗಳಿಗೆ ಸಂವಿಧಾನದ ಅರಿವು ಅತ್ಯಂತ ಉಪಯುಕ್ತವಾಗಿದೆ. ಇಂದು ಯಾವುದೇ ಕ್ಷೇತ್ರದಲ್ಲಿ ಸಾಧನೆ ಮಾಡಬೇಕಾದರೂ ಶಿಕ್ಷಣವನ್ನೇ ಅವಲಂಬಿಸಬೇಕು, ಶಿಕ್ಷಣಕ್ಕೆ ಅಂತಹ ಮಹತ್ವದ ಸ್ಥಾನವಿದೆ. ಶಿಸ್ತು, ಸಮಯಪ್ರಜ್ಞೆ ಜೀವನದಲ್ಲಿ ಅಳವಡಿಸಿಕೊಂಡಾಗ ಯಶಸ್ಸು ತಮ್ಮದಾಗಲಿದೆ ಎಂದರು.

ಜನಹಿತಾಶಕ್ತಿ ಹೋರಾಟವೇದಿಕೆ ಜಿಲ್ಲಾಧ್ಯಕ್ಷ ರಾಮಸಮುದ್ರ ಸುರೇಶ್ ಮಾತನಾಡಿ, ಶಾಲಾಕಾಲೇಜು ವಿದ್ಯಾರ್ಥಿUಳಿಗೆ ಭಾರತದ ಸಂವಿಧಾನದ ಮಹತ್ವದ ಬಗ್ಗೆ ಅರಿವು ಮೂಡಿಸುವುದೇ ಕಾರ್ಯಕ್ರಮದ ಉದ್ದೇಶವಾಗಿದೆ. ಎಂದರು.

ಪ್ರಾಂಶುಪಾಲ ಸಿ.ಲಿಂಗಯ್ಯ ಅಧ್ಯಕ್ಷತೆ ವಹಿಸಿದ್ದರು. ಮುಖ್ಯಶಿಕ್ಷಕ ವಿ.ಜಿ, ತ್ಯಾಗರಾಜು,. ಜನಹಿತಾಶಕ್ತಿ ಹೋರಾಟವೇದಿಕೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಾಡಳ್ಳಿನಾಗರಾಜ್, ಕಾಲೇಜು ವಿದ್ಯಾರ್ಥಿಗಳು ಸಹಶಿಕ್ಷಕರು, ಉಪನ್ಯಾಸಕರು ಹಾಜರಿದರು.

Leave a Reply

Your email address will not be published. Required fields are marked *