ಬಿಜೆಪಿ ಅಭ್ಯರ್ಥಿ ಎಸ್.ಬಾಲರಾಜು ನಾಮಪತ್ರ ಸಲ್ಲಿಕೆ

ಚಾಮರಾಜನಗರ: ಚಾಮರಾಜನಗರದ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ಬಾಲರಾಜು ಅವರು ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಜಿಲ್ಲಾಧಿಕಾರಿಯಾಗಿರುವ ಸಿ.ಟಿ.ಶಿಲ್ಪಾ ನಾಗ್ ಅವರಿಗೆ ನಾಮಪತ್ರ ಸಲ್ಲಿಸಿದರು.

ಅಭ್ಯರ್ಥಿ ಎಸ್.ಬಾಲರಾಜು ಅವರೊಂದಿಗೆ ನಾಮಪತ್ರ ಸಲ್ಲಿಸಿದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಬಿ.ವೈ.ವಿಜಯೇಂದ್ರ ಅವರು, ಕೇಂದ್ರದಲ್ಲಿ ಎನ್‍ಡಿಎ ಮೈತ್ರಿಕೂಟವು 400ಕ್ಕೂ ಹೆಚ್ಚು ಸ್ಥಾನಗಳನ್ನು ಗಳಿಸಿ, ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿಯಾಗಲಿದ್ದಾರೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರದ ಅಮಲಿನಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನಗಳು ಬರುವುದಿಲ್ಲ ಎಂದು ಹೇಳುತ್ತಿದ್ದಾರೆ. ಅಂತಹ ಭ್ರಮೆಯಲ್ಲಿ ಅವರಿದ್ದಾರೆ. ಅವರು ಏನು ಹೇಳುತ್ತಾರೆ ಎಂಬುದು ಮುಖ್ಯ ಅಲ್ಲ. ರಾಜ್ಯದ ಜನರು ಏನು ಹೇಳುತ್ತಾರೆ ಎನ್ನುವುದು ಮುಖ್ಯ. ಕಾಂಗ್ರೆಸ್‍ನ ಬಣ್ಣ ಬಣ್ಣದ ಮಾತುಗಳಿಗೆ ಮೋಸ ಹೋಗಿದ್ದೇವೆ. ಮತ್ತೊಮ್ಮೆ ಮೋದಿಯವರನ್ನು ಪ್ರಧಾನಿ ಮಾಡುವ ಸಲುವಾಗಿ ಬಿಜೆಪಿ, ಜೆಡಿಎಸ್ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದು ರಾಜ್ಯದ ಯುವಕರು, ತಾಯಂದಿರು, ಬಡವರು, ರೈತರು, ಪ್ರಜ್ಞಾವಂತರು ಮಾತನಾಡುತ್ತಿದ್ದಾರೆ. ರಾಜ್ಯದ ಎಲ್ಲ 28 ಕ್ಷೇತ್ರಗಳಲ್ಲೂ ಬಿಜೆಪಿ, ಜೆಡಿಎಸ್ ಪರವಾದ ವಾತಾವರಣ ಇದೆ ಎಂದು ಹೇಳಿದರು.

ಚಾಮರಾಜನಗರ ಕ್ಷೇತ್ರದಲ್ಲಿ ಆಡಳಿತ ಪಕ್ಷವು ಅಧಿಕಾರದ ಅಮಲಿನಲ್ಲಿ ಗೆಲ್ಲುವ ಎಂಬ ಭ್ರಮೆಯಲ್ಲಿದೆ. ಆದರೆ ಇಲ್ಲಿನ ಜನರು ಪ್ರಜ್ಞಾಂತರಿದ್ದಾರೆ. ಕಾಂಗ್ರೆಸ್ ನವರನ್ನು ಭ್ರಮೆಯಿಂದ ಹೊರತರುವ ಕೆಲಸ ಮಾಡುತ್ತೇವೆ ಎಂದು ಬಿ.ವೈ.ವಿಜಯೇಂದ್ರ ತಿಳಿಸಿದರು.

ಕಾಂಗ್ರೆಸ್‍ನ ಬಣ್ಣ ಬಣ್ಣದ ಮಾತುಗಳಿಗೆ ಮೋಸ ಹೋಗಿದ್ದೇವೆ. ಮತ್ತೊಮ್ಮೆ ಮೋದಿಯವರನ್ನು ಪ್ರಧಾನಿ ಮಾಡುವ ಸಲುವಾಗಿ ಬಿಜೆಪಿ, ಜೆಡಿಎಸ್ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದು ರಾಜ್ಯದ ಯುವಕರು, ತಾಯಂದಿರು, ಬಡವರು, ರೈತರು, ಪ್ರಜ್ಞಾವಂತರು ಮಾತನಾಡುತ್ತಿದ್ದಾರೆ. ರಾಜ್ಯದ ಎಲ್ಲ 28 ಕ್ಷೇತ್ರಗಳಲ್ಲೂ ಬಿಜೆಪಿ, ಜೆಡಿಎಸ್ ಪರವಾದ ವಾತಾವರಣ ಇದೆ ಎಂದು ಅವರು ಹೇಳಿದರು.

Leave a Reply

Your email address will not be published. Required fields are marked *