ವಿದ್ಯಾರ್ಥಿಗಳಲ್ಲಿ ಗುರಿಯಿದ್ದಾಗ ಮಾತ್ರ ಯಶಸ್ಸು ಸಾಧ್ಯ: ಡಾ.ಪಿ.ದೇವರಾಜು

  • ಭೋಗಾಪುರ ವಸತಿಯುಕ್ತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಮತ್ತು ಸಂಚಾರಿ ನೋಂದಣಿ ಕಾರ್ಯಕ್ರಮ

ಚಾಮರಾಜನಗರ:  ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಉದ್ಯೋಗ ಮಾರ್ಗದರ್ಶನ ಕೋಶ ಮತ್ತು ಐ.ಕ್ಯೂ.ಎ.ಸಿ ಸಹಭಾಗಿತ್ವದಲ್ಲಿ   ತಾಲೂಕಿನ
ಭೋಗಾಪುರ. ವಸತಿಯುಕ್ತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಮತ್ತು ಸಂಚಾರಿ ನೋಂದಣಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು
  ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಡಾ. ಪಿ. ದೇವರಾಜು ಮಾತನಾಡಿ ವಿದ್ಯಾರ್ಥಿಗಳು ತಮ್ಮ ಆಸಕ್ತಿ ಕ್ಷೇತ್ರವನ್ನು  ಆಯ್ಕೆಮಾಡಿಕೊಂಡು  ಆ ದಾರಿಯಲ್ಲಿ ಸ್ಪಷ್ಟ ಗುರಿ ಹೊಂದಬೇಕು, ಗುರಿ ಇದ್ದಾಗ ಮಾತ್ರ ಯೋಜನೆ ರೂಪಿಸಬಹುದು, ಯೋಜನೆ ಇದ್ದಾಗ ಮಾತ್ರ ಯಶಸ್ಸು ಸಾಧ್ಯಯೆಂಬ ಕಿವಿಮಾತನ್ನು ಹೇಳಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ
 ಚಾಮರಾಜನಗರ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಆಪ್ತ ಸಮಾಲೋಚಕರು ಹಾಗೂ ತರಬೇತುದಾರರಾದ  ಮಹಾದೇವಸ್ವಾಮಿ ಮಾತನಾಡಿ,
ಮೃದುಕೌಶಲ್ಯ ಮತ್ತು ವೃತ್ತಿ ಮಾರ್ಗದರ್ಶನವನ್ನು ವಿದ್ಯಾರ್ಥಿಗಳಿಗೆ ನೀಡಿದರು ಮತ್ತು  ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಉದ್ಯೋಗ ಕಾರ್ಡ್ ನೋಂದಣಿಗೆ ಅರ್ಜಿ ಸ್ವೀಕರಿಸಲಾಯಿತು
ಕಾರ್ಯಕ್ರಮದ ಸಂಯೋಜಕರು ಹಾಗೂ ಉದ್ಯೋಗ ಮಾರ್ಗದರ್ಶನ ಕೋಶದ ಸಂಚಾಲಕ ಗಿರೀಶ್ ಟಿ. ಆರ್  ಮಾತನಾಡಿ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕೇವಲ ಪದವಿ ಪಡೆದರೆ ಸಾಕಾಗುವುದಿಲ್ಲ. ವಿದ್ಯಾರ್ಥಿಗಳು ತಮ್ಮ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಿಕೊಳ್ಳಬೇಕು, ಶಿಕ್ಷಣವು ನಮಗೆ ಜ್ಞಾನ ನೀಡುತ್ತದೆ; ಆದರೆ ಸರಿಯಾದ ವೃತ್ತಿ ಆಯ್ಕೆ ನಮ್ಮ ಜೀವನದ ದಿಕ್ಕನ್ನು ನಿರ್ಧರಿಸುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಐ.ಕ್ಯೂ.ಎ.ಸಿ ಸಂಚಾಲಕರಾದ ರಂಗಸ್ವಾಮಿ, ಪ್ರೊ. ನಂಜುಂಡಯ್ಯ, ಡಾ. ರಮೇಶ್ ಬಾಬು, ಅಧ್ಯಾಪಕರು, ಅಧ್ಯಾಪಕೇತರರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

Leave a Reply

Your email address will not be published. Required fields are marked *