ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸಿ : ಮಹಾಂತೇಶ ಲಕ್ಷ್ಮಣ ಹಟ್ಟಿ ಮನವಿ

ಚಾಮರಾಜನಗರ: ಮೈಸೂರು –ಕೊಡುಗು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ ಹಾಗೂ ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸುನೀಲ್ ಬೋಸ್ ಅವರನ್ನು ಅತ್ಯಧಿಕ ಬಹುಮತಗಳಿಂದ ಗೆಲ್ಲಿಸಬೇಕೆಂದು ಕೆಪಿಸಿಸಿ ರಾಜ್ಯ ವಕ್ತಾರ ಮಹಾಂತೇಶ ಲಕ್ಷ್ಮಣ ಹಟ್ಟಿ ಮನವಿ ಮಾಡಿದರು.

ನಗರದ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ. ಲಕ್ಷ್ಮಣ ಹಾಗೂ ಸುನೀಲ್ ಬೋಸ್ ಅವರು ಯುವಕರಾಗಿದ್ದು, ಒಳ್ಳೆಯ ಕೆಲಸವನ್ನು ಮಾಡುವ ಪ್ರಬುದ್ದತೆಯನ್ನು ಹೊಂದಿದ್ದಾರೆ. ಈ ಎರಡು ಕ್ಷೇತ್ರಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಕ್ಷೇತ್ರವಾಗಿದೆ. ಸಮಾಜ ಕಲ್ಯಾಣ ಸಚಿವರಾಗಿರುವ ಎಚ್.ಸಿ. ಮಹದೇವಪ್ಪ ಅವರು ಪುತ್ರ ಸುನೀಲ್ ಬೋಸ್ ಚಾ.ನಗರ ಕ್ಷೇತ್ರದ ಅಭ್ಯರ್ಥಿಯಾಗಿದ್ದು, ಇವರಿಬ್ಬರ ಗೆಲುವಿನ ಮೂಲಕ ಮುಖ್ಯಮಂತ್ರಿಗಳ ಕೈ ಬಲಪಡಿಸಲು ಕ್ಷೇತ್ರದ ಮತದಾರರು ಏ. 26 ರಂದು ನಡೆಯುವ ಮತದಾನದಲ್ಲಿ ಕಾಂಗ್ರೆಸ್‍ಗೆ ಅಧಿಕ ಮತಗಳನ್ನು ಹಾಕುವ ಮೂಲಕ ಶಕ್ತಿ ತುಂಬುವ ಕೆಲಸವಾಗಬೇಕು ಎಂದರು.

ಬಿಜೆಪಿ ನಾಯಕರು ಕಾಂಗ್ರೆಸ್ ಪಕ್ಷದದಲಿತ ನಾಯಕರನ್ನು ದಾರಿ ತಪ್ಪಿಸುತ್ತದೆ ಎಂಬ ಹೇಳಿಕೆ ಬಾಲಿಶವಾಗಿದ್ದು, ಇದರಲ್ಲಿ ಯಾವುದೇ ಹುರುಳಿಲ್ಲ. ಬಿಜೆಪಿ ಸರ್ಕಾರ ಮತ್ತೇ ಅಧಿಕಾರಕ್ಕೆ ಬಂದರೆ ದೇಶದಲ್ಲಿ ಅರಾಜುಕತೆ ಸೃಷ್ಠಿಯಾಗುತ್ತದೆ. ಸಂವಿಧಾನದ ಆಶಯಗಳಿಗೆ ಧಕ್ಕೆಯಾಗುತ್ತದೆ. ಈಗಾಗಲೇ ಆ ಪಕ್ಷದ ನಾಯಕರುಗಳು 400 ಸೀಟುಗಳನ್ನು ಕೊಟ್ಟರೆ ಸಂವಿಧಾನ ಬದಲಾಯಿಸುತ್ತೇವೆ ಎಂಬ ಹೇಳಿಕೆ ನೀಡಿರುವುದು ಖಂಡನೀಯ. ಇದರ ವಿರುದ್ದ ಮತದಾರರು ಜಾಗೃತರಾಗಬೇಕು. ಪ್ರತಿ ಹಳ್ಳಿ ಹಳ್ಳಿಗಳಿಗು ಈ ಬಗ್ಗೆ ಅಭಿಯಾನ ಮಾಡಿ, ಸಂವಿಧಾನ ರಕ್ಷಣೆಗೆ ಬದ್ದವಾಗಿರುವ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು ಎಂದು ಮಹಾಂತೇಶ ತಿಳಿಸಿದರು.

ಕಾಂಗ್ರೆಸ್ 60 ವರ್ಷಗಳ ಆಡಳಿತ ಸೇವೆಯಲ್ಲಿ ದಲಿತರಿಗೆ ಅನೇಕ ಯೋಜನೆಗಳನ್ನು ಜಾರಿ ಮಾಡಿ, ಅಭಿವೃದ್ದಿ ಪಡಿಸಿದೆ. ದಲಿತರು, ಹಿಂದುಳಿದವರು ಹಾಗು ಅಲ್ಪಸಂಖ್ಯಾತರ ಪರವಾಗಿರುವ ಕಾಂಗ್ರೆಸ್ ನಿಂದ ಮಾತ್ರ ಅಭಿವೃದ್ದಿ ಸಾಧ್ಯವಿದೆ. ಈಗಿನ ರಾಜ್ಯ ಸರ್ಕಾರಕ್ಕೆ ಇದಕ್ಕೆ ಪೂರಕವಾಗಿ ಕಾರ್ಯನಿರ್ವಹಿಸುತ್ತಿದ್ದು, ಗ್ಯಾರಂಟಿ ಯೋಜನೆಗಳನ್ನು ನೀಡುವ ಮೂಲಕ ಸಮ ಸಮಾಜ ವನ್ನು ನಿರ್ಮಾಣ ಮಾಡುತ್ತಿದೆ. ಈ ಎಲ್ಲಾ ಯೋಜನೆಗಳು ಕೇಂದ್ರದಲ್ಲಿ ಅನುಷ್ಠಾನಗೊಳ್ಳಲು ಮತ್ತೇ ಕಾಂಗ್ರೆಸ್‍ವನ್ನು ದೇಶದಲ್ಲಿ ಅಧಿಕಾರಕ್ಕೆ ತರಬೇಕೆಂದರು.

ಗೋಷ್ಠಿಯಲ್ಲಿ ಯುವ ಕಾಂಗ್ರೆಸ್ ಜಿಲ್ಲಾ ಕಾರ್ಯಾಧ್ಯಕ್ಷ ಹೊಸಹಳ್ಳಿ ಮಧುಸೂಧನ್, ಕಾಂಗ್ರೆಸ್ ಕಾರ್ಮಿಕ ವಿಭಾಗ ಪ್ರಧಾನ ಕಾರ್ಯದರ್ಶಿ ಹೆಗ್ಗವಾಡಿ ಕೆಂಪರಾಜು, ಮುಖಂಡರಾದ ಕಂಸಾಳೆ ರವಿ, ನಾಗರಾಜು ವಿಶ್ವಕರ್ಮ, ಅಹಿಂದ ಜವರಪ್ಪ, ಕೆರಹಳ್ಳಿ ರೇವಣ್ಣ ಇದ್ದರು.

Leave a Reply

Your email address will not be published. Required fields are marked *