ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಸಿ.ಪುಟ್ಟರಂಗಶೆಟ್ಟಿ ಅವರಿಂದ ಸುವರ್ಣಬೆಳಕು ಪತ್ರಿಕೆ ಲೋಕಾರ್ಪಣೆ

ಚಾಮರಾಜನಗರ: ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರಾದ ಸಿ.ಪುಟ್ಟರಂಗಶೆಟ್ಟಿ ಅವರು ಸುವರ್ಣ ಬೆಳಕು ತ್ರೈಮಾಸಿಕ ಪತ್ರಿಕೆಯನ್ನು ಲೋಕಾರ್ಪಣೆ ಮಾಡಿದರು.
ನಗರದ ಪರಿವೀಕ್ಷಣಾ ಮಂದಿರದಲ್ಲಿ ಸೋಮವಾರ ಬೆಳಗ್ಗೆ ಸುವರ್ಣ ಬೆಳಕು ತ್ರೈಮಾಸಿಕ ಪತ್ರಿಕೆಯನ್ನು ಬಿಡುಗಡೆಗೊಳಿಸಿದ ನಂತರ ಮಾತನಾಡಿದ ಅವರು, ಪತ್ರಿಕೆ ಉತ್ತಮವಾಗಿ ಮೂಡಿ ಬಂದಿದೆ. ಉತ್ತಮ ಸುದ್ದಿಗಳನ್ನು ಪ್ರಕಟಿಸುವ ಮೂಲಕ ನೇರ, ದಿಟ್ಟ, ನಿರಂತರವಾಗಿರಲಿ, ಜನಮನ್ನಣೆ ಗಳಿಸಿ ಇನ್ನೂ ಎತ್ತರಕ್ಕೆ ಬೆಳೆದು ಜನಮಾನಸದಲ್ಲಿ ಉಳಿಯಲಿ ಎಂದು ಶುಭಹಾರೈಸಿದರು.
ಈ ಸಂದರ್ಭದಲ್ಲಿ ಸಂಪಾದಕ ರವಿ ಭಗೀರಥ್, ಉಪಸಂಪಾದಕ ಸಿ.ಎಸ್.ನಾಗರಾಜು, ಜಿಲ್ಲಾ ಉಪ್ಪಾರ ಯುವಕರ ಸಂಘದ ಉಪಾಧ್ಯಕ್ಷ ಬಿ.ಸ್ವಾಮಿ, ನಿವೃತ್ತ ಪ್ರಾಂಶುಪಾಲ ಸೋಮಣ್ಣ ಸೇರಿದಂತೆ ಮತ್ತಿತರರಿದ್ದರು.

Leave a Reply

Your email address will not be published. Required fields are marked *