ಮಾ.22 ರಂದು ಸ್ವಚ್ಛ ಚಾಮರಾಜನಗರ ಅಭಿಯಾನ : ಜಿಲ್ಲಾಧಿಕಾರಿ ಶಿಲ್ಪಾ ನಾಗ್

ಚಾಮರಾಜನಗರ: ಸ್ವಚ್ಛ ಚಾಮರಾಜನಗರ ಅಭಿಯಾನವನ್ನು ನಗರದ ವರ್ತಕರ ಸಂಘ, ಕ್ಯಾಸಿಯೊ. ಇನ್ನರ್‍ವೀಲ್ ಕ್ಲಬ್, ಚೇಂಬರ್ ಆಫ್ ಕಾಮರ್ಸ್, ಲಾರಿ ಮಾಲೀಕರ ಸಂಘ ಮುಂತಾದ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಜಿಲ್ಲಾಡಳಿತ ಹಮ್ಮಿಕೊಂಡಿದ್ದು ಇದರ ಅಂಗವಾಗಿ ಮಾರ್ಚ್ 22 ರಂದು ಬೆಳಿಗ್ಗೆ 6.30 ಗಂಟೆಗೆ ನಗರದ ಸಂತೆಮಾರಹಳ್ಳಿ ವೃತ್ತದಿಂದ ಶಾಸಕರ ನೇತೃತ್ವದಲ್ಲಿ ಸ್ವಚ್ಛತಾ ಅಭಿಯಾನ ಆಯೋಜಿಸಲಾಗಿದೆ.

ಈ ಅಭಿಯಾನದಲ್ಲಿ ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಚುನಾಯಿತ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಇಚ್ಛೆಯುಳ್ಳ ಉತ್ಸಾಹಿ ಸಾರ್ವಜನಿಕರು ಸಂಘ ಸಂಸ್ಥೆಗಳು ಈ ಅಭಿಯಾನದಲ್ಲಿ ಪಾಲ್ಗೊಳ್ಳಬಹುದಾಗಿದೆ. 

   ನಮ್ಮ ಸುತ್ತಮುತ್ತಲಿನ ವಾತಾವರಣದಲ್ಲಿ ಶುಚಿತ್ವ ಕಾಪಾಡುವುದು ನಮ್ಮಲ್ಲೆರ ಆದ್ಯ ಕರ್ತವ್ಯವಾಗಿರುತ್ತದೆ. ಚೆಲುವ ಚಾಮರಾಜನಗರದ ಸ್ವಚ್ಛತೆಗೆ ಪ್ರಥಮ ಆದ್ಯತೆ ನೀಡಿ ಸ್ವಚ್ಛ ಅಭಿಯಾನವನ್ನು ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ. ಚಾಮರಾಜನಗರದ ಮೀಡಿಯನ್‍ಗಳ ಸೌಂದರೀಕರಣ, ಗಿಡಗಳನ್ನು ನೆಡುವುದು, ಹಸರೀಕರಣ. ಚರಂಡಿ ಹಾಗೂ ರಸ್ತೆಗಳ ಸ್ವಚ್ಛತೆಗೆ ಒತ್ತು ನೀಡಲಾಗಿದೆ. 

 ಜಿಲ್ಲಾಡಳಿತದೊಂದಿಗೆ ನಗರದ ಸ್ವಚ್ಛತಾ ಅಭಿಯಾನಕ್ಕೆ ಕೈಜೋಡಿಸಲು ವಿವಿಧ ಸಂಘ ಸಂಸ್ಥೆಗಳು ಮುಂದೆ ಬಂದಿವೆÉ. ಈ ಸ್ವಚ್ಛತಾ ಅಭಿಯಾನಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರು ತಮ್ಮ ಅಮೂಲ್ಯ ಸಲಹೆ ಸೂಚನೆಗಳನ್ನು  ಇ ಮೇಲ್ ಮೂಲಕ ಞಚಿ.ಛಿhಚಿmಚಿಡಿಚಿರಿಚಿಟಿಚಿgಚಿಡಿಚಿ.ಜuಜಛಿ@gmಚಿiಟ.ಛಿom  ಕಳುಹಿಸಬಹುದಾಗಿದೆ.

ಹೆಚ್ಚಿನ ವಿವರಗಳಿಗೆ ಹೆಲ್ಪ್ ಲೈನ್ ನಂಬರ್ 7892236642 ಅನ್ನು ಸಂಪರ್ಕಿಸಲು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

Leave a Reply

Your email address will not be published. Required fields are marked *