ಬೂದಿತಿಟ್ಟು ಸರ್ಕಾರಿ ಶಾಲೆಯಲ್ಲಿ ಸ್ವಾಮಿವಿವೇಕಾನಂದರ ಜಯಂತಿ ಆಚರಣೆ
ಚಾಮರಾಜನಗರ: ಸ್ವಾಮಿ ವಿವೇಕಾನಂದರು ಭಾರತದ ಆಧ್ಯಾತ್ಮಿಕ ಸರ್ವ ಶ್ರೇಷ್ಠ ಗುರು ಎಂದು ತಾಲೂಕು ಉಪ್ಪಾರ ಸಂಘದ ಅಧ್ಯಕ್ಷ ಪಿ.ಲಿಂಗರಾಜು ಹೇಳಿದರು.
ತಾಲೂಕಿನ ಬೂದಿತಿಟ್ಟು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಸ್ವಾಮಿವಿವೇಕಾನಂದರ ಜಯಂತಿ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರ ಪುಷ್ಷಾರ್ಚನೆ ಮಾಡಿ ಪರಿಸರ ಕುರಿತ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಿ ಮಾತನಾಡಿದರು.
ಸ್ವಾಮಿ ವಿವೇಕಾನಂದರು ಭಾರತಕ್ಕೆ ಮಾತ್ರವಲ್ಲದೇ ಪ್ರಪಂಚದ ಇತರೆ ದೇಶಗಳಿಗೂ ಸಹ ಅವರ ತತ್ವಗಳು, ಬದುಕಿದ ಹಾದಿ, ಯುವ ಜನತೆಗೆ ನೀಡಿದ ಸ್ಫೂರ್ತಿಯ ಕರೆಗಳಿಂದ ಅವರು ಇಂದಿಗೂ ಎಂದೆಂದಿಗೂ ಪ್ರಪಂಚದ ಆಧ್ಯಾತ್ಮಿಕ ಗುರು. ಆದರ್ಶ ವ್ಯಕ್ತಿಯೇ ಆಗಿದ್ದಾರೆ ಎಂದರು.
ಯುವಜನತೆಗೆ ನೀಡಿದ ಅವರ ಕರೆ ಏಳಿ ಎದ್ದೇಳಿ, ಗುರಿ ಮುಟ್ಟುವ ತನಕ ನಿಲ್ಲದಿರಿ’ ಎಂಬುದು ಸರ್ವ ಕಾಲಕ್ಕೂ ನೆನೆಯುವ, ಯುವಕರನ್ನು ಒಳ್ಳೆಯ ಕೆಲಸಗಳಿಗೆ ಬಡಿದೆಚ್ಚರ ಮಾಡುವ ವಾಕ್ಯವಾಗಿದೆ. ಹೀಗೆ ಅವರ ಇಂತಹ ಹಲವು ಕೊಡುಗೆಗಳಿಂದ ಅವರ ಸ್ಮರಣಾರ್ಥ, ಅವರ ಕೊಡುಗೆ, ಸೇವೆಗಳ ನೆನಪಿಗಾಗಿ, ಅವರಿಂದ ಸದಾ ಸ್ಫೂರ್ತಿಯಾಗಿರಲು ಅವರ ಜನ್ಮ ದಿನವನ್ನು ‘ರಾಷ್ಟ್ರೀಯ ಯುವ ದಿನ ಎಂದು ಆಚರಣೆ ಮಾಡಲಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಶಾಲಾಭಿವೃದ್ದಿ ಸಮಿತಿ ಉಪಾಧ್ಯಕ್ಷ ಮರಿಸ್ವಾಮಿ, ಪಿಎಸಿಸಿ ಕಾರ್ಯದರ್ಶಿ ಮಹದೇವಯ್ಯ, ಮುಖ್ಯ ಶಿಕ್ಷಕಿ ಕೌಸರಿ, ಶಿಕ್ಷಕರಾದ ಯತೀಶ್, ಗಿರೀಶ್ , ಸುನೀತ ಹಾಗೂ ಮಕ್ಕಳ ಹಾಜರಿದ್ದರು.