ಚಾಮರಾಜನಗರ: ಡಾ.ಬಾಬು ಜಗಜೀವನರಾಂ ಸಂಘಟನೆಗಳ ಒಕ್ಕೂಟವು ಎಸ್‌ಎಸ್ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.60 ರಷ್ಟು ಅಂಕ ಪಡೆದಿರುವ ಸಮುದಾಯದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಬರುವ ಜೂ.7 ರಂದು ನಗರದಲ್ಲಿ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ ಎಂದು ಒಕ್ಕೂಟದ ಗೌರವ ಜಿಲ್ಲಾಧ್ಯಕ್ಷ ಬಸವನಪುರ ರಾಜಶೇಖರ ತಿಳಿಸಿದರು.
ನಗರಸ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಅಂದು ನಗರದ ಡಾ.ರಾಜ್ ಕುಮಾರ್ ರಂಗಮಂದಿರದಲ್ಲಿ ಬೆಳಿಗ್ಗೆ 11 ಗಂಟೆಗೆ ಕಾರ್ಯಕ್ರಮ ಆರಂಭವಾಗುತ್ತದೆ. ನಮ್ಮ ಸಂಘಟನೆ ಮೂಲ ಉದ್ದೇಶ ಸಮುದಾಯ ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡುವುದು ಮೊದಲ ಆದ್ಯತೆ ಯಾಗಿದ್ದು, ಅದರಂತೆ ಸಮುದಾಯ ಪ್ರತಿಭಾ ವಿದ್ಯಾರ್ಥಿಗಳಿಗೆ ಒಕ್ಕೂಟದ ವತಿಯಿಂದ ಪ್ರತಿಭಾ ಪುರಸ್ಕಾರ ಆಯೋಜಿಸಲಾಗಿದೆ. ಸಮುದಾಯದ ವಿದ್ಯಾರ್ಥಿಗಳ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.
ಒಕ್ಕೂಟದ ಜಿಲ್ಲಾಧ್ಯಕ್ಷ ಹೆಚ್.ಹೆಚ್.ನಾಗರಾಜು ಮಾತನಾಡಿ, ನಮ್ಮ ಒಕ್ಕೂಟವು ಸಮುದಾಯ ಎಸ್ ಎಸ್ ಎಲ್ ಸಿ, ಪಿಯುಸಿ ಪರೀಕ್ಷೆ ಯಲ್ಲಿ ಶೇ .60 ರಷ್ಟು ಅಂಕಪಡೆದಿರುವ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸುವುದರ ಜೊತೆಗೆ ನೀಟ್ , ಸಿಇಟಿ ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುವ ಉದ್ದೇಶ ಹೊಂದಲಾಗಿದೆ. ಇಂತಹ ಅವಕಾಶವನ್ನು ಸಮುದಾಯದ ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕೋರಿದರು.
ಹೆಚ್ಚಿನ ಮಾಹಿತಿಗಾಗಿ : ಗುಂಡ್ಲುಪೇಟೆ ತಾಲೂಕು
ಹಸಗೂಲಿ ಸಿದ್ದಯ್ಯ- 9591930446, ಚಾಮರಾಜನಗರ ತಾಲೂಕು ಶಿವಕುಮಾರ್ -7483934405, ಯಳಂದೂರು ತಾಲೂಕು ಬಸವರಾಜು-9986216352, ಕೊಳ್ಳೇಗಾಲ ತಾಲೂಕು ಗೋಪಾಲ್- 6360318044, ಹನೂರು ತಾಲೂಕು ಬಿ.ಸಿ.ಸುರೇಶ್- 9945622014 ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬಹುದು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಡಾ.ಬಾಬು ಜಗಜೀವನರಾಂ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಹೆಚ್.ಹೆಚ್.ನಾಗರಾಜು, ಗೌರವಾಧ್ಯಕ್ಷ ಬಸವನಪುರ ರಾಜಶೇಖರ, ಗೌರವ ಸಲಹೆಗಾರ ಅರಕಲವಾಡಿ ಜವರಯ್ಯ, ಜಿಲ್ಲಾ ಉಪಾಧ್ಯಕ್ಷರಾದ ಹಸಗೂಲಿ ಸಿದ್ದಯ್ಯ, ಸಿ.ಚನ್ನಬಸವಯ್ಯ, ಬಿ.ಸಿ.ಸುರೇಶ್, ಕೊಳ್ಳೇಗಾಲ ತಾಲ್ಲೂಕು ಅಧ್ಯಕ್ಷ ಗೋಪಾಲ್, ಸಹ ಕಾರ್ಯದರ್ಶಿ ಶಿವಕುಮಾರ್ ರಾಮಸಮುದ್ರ ಹಾಜರಿದ್ದರು.