- ಜಿಲ್ಲೆಯಲ್ಲಿ ಶಿಕ್ಷಣಕ್ಕೆ ಯಾವುದೇ ಕೊರತೆಯಾಗದಂತೆ ಎಲ್ಲಾ ಸೌಕರ್ಯಗಳನ್ನು ಕಲ್ಪಿಸಲಾಗಿದೆ
ಚಾಮರಾಜನಗರ : ಜಿಲ್ಲೆಯಲ್ಲಿ ಶಿಕ್ಷಣಕ್ಕೆ ಯಾವುದೇ ಕೊರತೆಯಾಗದಂತೆ ಎಲ್ಲಾ ಸೌಕರ್ಯಗಳನ್ನು ಕಲ್ಪಿಸಿಕೊಡಲಾಗಿದೆ.ಮಕ್ಕಳಲ್ಲಿರುವ ಸುಪ್ತ ಪ್ರತಿಭೆಗಳನ್ನು ಅನಾವರಣಗೊಳಿಸಲು ಪ್ರತಿಭಾ ಕಾರಂಜಿ ಪೂರಕವಾಗಿದೆ ಎಂದು ಎಂಎಸ್‌ಐಎಲ್ ಅಧ್ಯಕ್ಷರು, ಶಾಸಕ ಸಿ.ಪುಟ್ಟರಂಗಶೆಟ್ಟಿ ಹೇಳಿದರು.
ನಗರದ ಸಂತ ಜೋಸೆಫರ ಶಾಲೆಯಲ್ಲಿ ಜಿಲ್ಲಾಡಳಿತ ಮತ್ತು ಜಿ.ಪಂ. ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಪ್ರತಿಭಾ ಕಾರಂಜಿ ಎಂಬುದು ಕರ್ನಾಟಕದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಸಾಂಸ್ಕೃತಿಕ ಹಾಗೂ ಸಾಹಿತ್ಯಕ ಪ್ರತಿಭೆಗಳನ್ನು ಹೊರತರುವ, ಅವರ ವ್ಯಕ್ತಿತ್ವ ವಿಕಸನಕ್ಕೆ ಸಹಾಯ ಮಾಡುವ ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆಯ ಒಂದು ವಿನೂತನ ಮತ್ತು ವಿಸ್ತ್ರತ ಕಾರ್ಯಕ್ರಮವಾಗಿದ್ದು, ಕ್ಲಸ್ಟರ್, ಬ್ಲಾಕ್, ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಕವನ ವಾಚನ, ಗಾಯನ, ಚಿತ್ರಕಲೆ, ಪ್ರಬಂಧ, ಚರ್ಚೆ ಮುಂತಾದ ವಿವಿಧ ಸ್ಪರ್ಧೆಗಳನ್ನು ನಡೆಸುತ್ತದೆ. ಇದು ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಒಂದು ಸಾಮಾನ್ಯ ವೇದಿಕೆ ಒದಗಿಸಿ, ಶಿಕ್ಷಣದ
ಮನರಂಜನೆಯನ್ನು ಸಂಯೋಜಿಸುತ್ತದೆ. ವಿದ್ಯಾರ್ಥಿಗಳಲ್ಲಿರುವ ಕಲಾಭಿರುಚಿಯ ಸಾಮರ್ಥ್ಯವನ್ನು ಸಾಬೀತು ಮಾಡಲು ಇದೊಂದು ಉತ್ತಮ ವೇದಿಕೆಯಾಗಿದೆ ಎಂದರು.
ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಚಂದ್ರಪಾಟೀಲ್ ಪ್ರಾಸ್ತಾವಿಕ ವಾಗಿ ಮಾತನಾಡಿ,ಮಕ್ಕಳಲ್ಲಿರುವ ಸೂಪ್ತ ಕಲೆಗಳನ್ನು ಗುರುತಿಸಿ ಪೋತ್ಸಾಹಿಸಲು ಪ್ರತಿಭಾ ಕಾರಂಜಿ ಸಹಕಾರಿಯಾಗಿದೆ.ಅತ್ಯಂತ ಪ್ರತಿಭಾವಂತ ಶಿಕ್ಷಕರು ಇದ್ದಾರೆ ಉತ್ತಮ ರೀತಿಯಲ್ಲಿ ಭೋಧನೆ ಮಾಡುತ್ತಿದ್ದಾರೆ. ಶಿಕ್ಷಣ ಇಲಾಖೆಯ ಗುಣಮಟ್ಟದ ಹೆಚ್ಚಿಸಿ ಮಕ್ಕಳಿಗೆ ಬದುಕುವ ಕಲೆಯನ್ನು ಬೆಳಸೋಣ ಎಂದರು.
ಬಿಇಒ ಹನುಮಶೆಟ್ಟಿ ಸ್ವಾಗತ ಭಾಷಣ ಮಾಡಿದರು.
ಕಾರ್ಯಕ್ರಮದಲ್ಲಿ ಬಿಆರ್ ಸಿ ರಾಜೀವ್, ಬಿಸಿಯೂಟ ಸಮನ್ವಯ ಅಧಿಕಾರಿ ಶ್ರೀನಿವಾಸ್
ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಕ
ಶಂಕರ್, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಕೆ.ರಾಮಸ್ವಾಮಿ, ಕಾರ್ಯದರ್ಶಿ ಸುಧಾ, ಸರ್ಕಾರಿ ನೌಕರರ ಸಂಘ ಜಿಲ್ಲಾ ಕಾರ್ಯಾಧ್ಯಕ್ಷ ಮಹಾದೇವಸ್ವಾಮಿ, ಕಾರ್ಯದರ್ಶಿ ಭರತ್ ಭೂಷಣ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾ ಕಾರ್ಯದರ್ಶಿ ಕಿರಣ್ ರಾಜ್,
ಉಪಾಧ್ಯಕ್ಷ ಎಂ.ಡಿ.ಮಹದೇವಯ್ಯ, ಎಸ್ ಸಿ ಎಸ್ ಟಿ ನೌಕರರ ಸಂಘದ ಅಧ್ಯಕ್ಷ ಕೆಂಪರಾಜು,
ಬಡ್ತಿ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಮಹದೇವಮೂರ್ತಿ, ನಿರ್ದೇಶಕ ರಾಜು, ಸಿ ಆರ್ ಪಿ ಗಳು, ಶಿಕ್ಷಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.