ನಗರದಲ್ಲಿ ನಡೆದ ತಾಲೂಕು ಮಟ್ಟದ ಗ್ರಾಮೀಣ ಕ್ರೀಡಾಕೂಟ

ಚಾಮರಾಜನಗರ: 2023-24ನೇ ಸಾಲಿನ ಚಾಮರಾಜನಗರ ತಾಲೂಕು ಮಟ್ಟದ ಗ್ರಾಮೀಣ ಕ್ರೀಡಾಕೂಟ ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು ನಡೆಯಿತು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಗ್ರಾಮೀಣ ಕ್ರೀಡಾಕೂಟವನ್ನು ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರಾದ ಬಸವರಾಜು ಅವರು ಉದ್ಘಾಟಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಅವರು ಗ್ರಾಮೀಣ ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ಗ್ರಾಮೀಣ ಕ್ರೀಡಾಕೂಟ ಸಹಕಾರಿಯಾಗಿದ್ದು, ಇಂತಹ ಸ್ಪರ್ಧೆಗಳಲ್ಲಿ ಉತ್ಸಾಹದಿಂದ ಭಾಗವಹಿಸಬೇಕು ಎಂದು ಸಲಹೆ ಮಾಡಿದರು.

ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ. ಸ್ಪರ್ಧಾ ಮನೋಭಾವನೆ ಮುಖ್ಯವಾಗಲಿದೆ. ಹೀಗಾಗಿ ಕ್ರೀಡಾಕೂಟದಲ್ಲಿ ಆಸಕ್ತಿಯಿಂದ ತೊಡಗಿಕೊಳ್ಳಬೇಕು. ಇಲಾಖೆ ಆಯೋಜಿಸುವ ಕ್ರೀಡಾಕೂಟಗಳಲ್ಲಿ ಪ್ರತಿಭೆ ತೋರಬೇಕು ಎಂದು ಬಸವರಾಜು ಅವರು ತಿಳಿಸಿದರು.

ಕ್ರೀಡಾಂಗಣ ಅಭಿವೃದ್ದಿ ಸಮಿತಿ ಸದಸ್ಯರಾದ ಶ್ರೀನಿವಾಸಪ್ರಸಾದ್ ಅವರು ಮಾತನಾಡಿ ಕ್ರೀಡೆ ಬಗೆಗಿನ ಆಸಕ್ತಿ ಹೆಚ್ಚಾಗಬೇಕು. ಪಠ್ಯೇತರ ಚಟುವಟಿಕೆಗಳ ಜೊತೆ ಕ್ರೀಡಾಕೂಟಗಳಲ್ಲಿಯೂ ಪಾಲ್ಗೊಂಡು ಜಿಲ್ಲೆ, ರಾಜ್ಯ ಮಟ್ಟದಲ್ಲಿ ಕೀರ್ತಿ ತರಬೇಕು ಎಂದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಆರ್. ಶಿವಸ್ವಾಮಿ, ದೈಹಿಕ ಶಿಕ್ಷಕರಾದ ನಾಗಣ್ಣ, ಎನ್. ಜೋಸೆಫ್, ಚಿಕ್ಕಬಸವಯ್ಯ, ಕುಮಾರಸ್ವಾಮಿ, ಜಿಲ್ಲಾ ಯುವ ಪ್ರಶಸ್ತಿ ಪುರಸ್ಕøತರಾದ ಜಿ. ಬಂಗಾರು, ಇನ್ನಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *