ಸೆ. 12ರಂದು ಕೊಳ್ಳೇಗಾಲದಲ್ಲಿ ಶಾಸಕರ ಅಧ್ಯಕ್ಷತೆಯಲ್ಲಿ ತಾಲೂಕು ಪ್ರಜಾಸೇವೆ ಆಂದೋಲನ : ಕುಂದುಕೊರತೆ ಅಹವಾಲು ಸ್ವೀಕಾರ

ಚಾಮರಾಜನಗರ: ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಅವರ ಅಧ್ಯಕ್ಷತೆಯಲ್ಲಿ ಕಂದಾಯ ಇಲಾಖೆ ಹಾಗೂ ಇತರೆ ಎಲ್ಲಾ ಇಲಾಖೆಗಳ ಸಾರ್ವಜನಿಕ ಕುಂದು ಕೊರತೆಗಳನ್ನು ಆಲಿಸಿ ಅಹವಾಲುಗಳನ್ನು ಸ್ವೀಕರಿಸಿ ಪರಿಹರಿಸಲು ತಾಲೂಕು ಮಟ್ಟದ ಪ್ರಜಾಸೇವೆ ಆಂದೋಲನ ಕಾರ್ಯಕ್ರಮವನ್ನು ಸೆಪ್ಟೆಂಬರ್ 12ರಂದು ಬೆಳಿಗ್ಗೆ 10 ಗಂಟೆಗೆ ಕೊಳ್ಳೇಗಾಲ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

   ಸಾರ್ವಜನಿಕರು ಯಾವುದೇ ಇಲಾಖೆಯ ಕುಂದು ಕೊರತೆಗಳಿದ್ದಲ್ಲಿ ಪ್ರಜಾಸೇವೆ ಆಂದೋಲನ ಕಾರ್ಯಕ್ರಮದಲ್ಲಿ ಭಾಗವಹಿಸಿ ನಿಗದಿತ ಕೌಂಟರ್‍ಗಳಲ್ಲಿ ನೋಂದಾಯಿಸಿಕೊಂಡು ಲಿಖಿತವಾಗಿ ಅಹವಾಲು ಅರ್ಜಿಗಳನ್ನು ಸಲ್ಲಿಸುವ ಮೂಲಕ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವಂತೆ ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *