ಚಾಮರಾಜನಗರ: ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ವತಿಯಿಂದ ಕೊಡಲ್ಪಡುವ ರಾಜ್ಯಮಟ್ಟದ ಕಾಯಕಯೋಗಿ ಪ್ರಶಸ್ತಿಯನ್ನು ತಾಲೂಕಿನ ನಂಜೇದೇವನಪುರ ಸರ್ಕಾರಿ ಪ್ರೌಢ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಎಸ್.
ಮಹದೇವಸ್ವಾಮಿ ಕೊತ್ತಲವಾಡಿ ಅವರಿಗೆ
ಪ್ರದಾನ ಮಾಡಲಾಯಿತು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲೆಬೆಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ವೈಜ್ಞಾನಿಕ ಪರಿಷತ್ ನ ಸಂಸ್ಥಾಪಕ ಅಧ್ಯಕ್ಷ ಹುಲಿಕಲ್ ನಟರಾಜ್, ಇಸ್ರೋ ಮಾಜಿ ಅಧ್ಯಕ್ಷ ಕಿರಣ್ ಕುಮಾರ್, ಡಾ.ಅಂಜನಪ್ಪ ಪ್ರಶಸ್ತಿ ಪ್ರಧಾನ ಮಾಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ನ ಜಿಲ್ಲಾಧ್ಯಕ್ಷ ಕಿರಣ್ ರಾಜ್, ಎಂ, ವೀರಶೈವ ಲಿಂಗಾಯಿತ ನೌಕರ ಸಂಘದ ಅಧ್ಯಕ್ಷರಾದ ಸಿದ್ದಮಲ್ಲಪ್ಪ,ಸರ್ಕಾರಿ ನೌಕರರ ಸಂಘ ದ ಉಪಾಧ್ಯಕ್ಷರಾದ ನಾಗರಾಜು, ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾ ಸಹಕಾರ್ಯದರ್ಶಿ ಗಳಾಗಿದ್ದ ದೊಡ್ಡರಸಯ್ಯ, ಜಿಲ್ಲಾ ಸಹ ಕಾರ್ಯದರ್ಶಿ ಮಲ್ಲೇಶ್, ಸಂಘಟನಾ ಕಾರ್ಯದರ್ಶಿ ಮಹೇಶ್, ಗುಂಡ್ಲುಪೇಟೆ ತಾಲ್ಲೂಕು ಮಾಜಿ ಅಧ್ಯಕ್ಷರಾದ ಗುರುಪ್ರಸಾದ್,ವಾಗ್ಮಿ ಮಹೇಂದ್ರ ಪಟೇಲ್, ಎನ್ ಪಿ ಎಸ್ ಸಂಘಟನಾ ಕಾರ್ಯದರ್ಶಿ ಪ್ರಭುಸ್ವಾಮಿ ಮರಿಸಿದ್ದಶೆಟ್ಟರು ಹಾಜರಿದ್ದು ಅಭಿನಂದಿಸಿದ್ದರು.