ಸಾಲಿಗ್ರಾಮ ಪಟ್ಟಣದ ಶಾದಿಮಹಲ್ ನಲ್ಲಿ ತಾತ್ಕಾಲಿಕ ಆಸ್ಪತ್ರೆಗೆ ಚಾಲನೆ

ವರದಿ: ಕೆ.ಟಿ.ಮೋಹನ್ ಕುಮಾರ್

ಸಾಲಿಗ್ರಾಮ (ಮೈಸೂರು ಜಿಲ್ಲೆ ): ಸಾಲಿಗ್ರಾಮ ಪಟ್ಟಣದ ಶಾದಿಮಹಲ್ ನಲ್ಲಿ ತಾತ್ಕಾಲಿಕವಾಗಿ ಆರಂಭಗೊಂಡ ಆಸ್ಪತ್ರೆಗೆ ತಹಶೀಲ್ದಾರ್ ರುಖಿಯಬೇಗಂ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರವನ್ನು ನೂರು ಹಾಸಿಗೆಯುಳ್ಳ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಿರುವ ಕಾರಣ ಪ್ರಸ್ತುತ ಇರುವ ಸಮುದಾಯ ಆರೋಗ್ಯ ಕೇಂದ್ರದ ಕಟ್ಟಡವನ್ನು ನೆಲಸಮಗೊಳಿಸಿ ನೂತನ ಕಟ್ಟಡ ನಿರ್ಮಾಣ ಮಾಡುವ ಹಿನ್ನೆಲೆಯಲ್ಲಿ ಸಮುದಾಯ ಆರೋಗ್ಯ ಕೇಂದ್ರವನ್ನು ತಾತ್ಕಾಲಿಕವಾಗಿ ಸಾಲಿಗ್ರಾಮ ಪಟ್ಟಣದಲ್ಲಿನ ಶಾದಿ ಮಹಲ್ ಗೆ ಸ್ಥಳಾಂತರ ಮಾಡಲಾಗಿದ್ದು ಇಡು ನೂತನ ಕಟ್ಟಡ ನಿರ್ಮಾಣ ಆಗುವವರೆಗೆ ಕಾರ್ಯನಿರ್ವಹಿಸಲಿದೆ ಎಂದರು.

ತಾಲೂಕು ಆರೋಗ್ಯ ಅಧಿಕಾರಿ ಡಾ.ಸಂತೋಷ್ ಮಾತನಾಡಿ ಆರೋಗ್ಯ ರಕ್ಷಾ ಸಮಿತಿ ಸದಸ್ಯರುಗಳು, ಆಸ್ಪತ್ರೆಯ ಸಿಬ್ಬಂದಿ ವರ್ಗದವರು, ಸ್ಥಳೀಯ ಸಂಸ್ಥೆಗಳವರು ಆಸ್ಪತ್ರೆಯು ತಾತ್ಕಾಲಿಕವಾಗಿ ಆರಂಭವಾಗಿರುವ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡುವ ಮೂಲಕ ಆರೋಗ್ಯ ಸೇವೆಯು ಎಲ್ಲರಿಗೂ ಲಭ್ಯವಾಗುವಂತೆ ಮಾಡಬೇಕೆಂದು ಮನವಿ ಮಾಡಿದರು.

ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ದೇವಿಕಾ ಅವರು ಮಾತನಾಡಿ ತಾತ್ಕಾಲಿಕ ಆಸ್ಪತ್ರೆಯಲ್ಲಿ ಹೊರರೋಗಿ, ಒಳರೋಗಿ, ಲ್ಯಾಬ್, ಎನ್.ಸಿ.ಡಿ, ತುರ್ತು ಸೇವೆಗಳು ಲಭ್ಯವಿರಲಿವೆ. ಹೆರಿಗೆ, ಶಸ್ತ್ರಚಿಕಿತ್ಸೆ, ದಂತ ಚಿಕಿತ್ಸೆ ಸೇವೆಗಳನ್ನು ಸಾಲಿಗ್ರಾಮ ತಾಲೂಕಿನ ಹರದನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನೀಡಲಿದ್ದು, ಸಾಲಿಗ್ರಾಮ ಪಟ್ಟಣದ ಕಾವೇರಿ ಆಸ್ಪತ್ರೆಯ ಕೆಳಭಾಗದಲ್ಲಿ ಡಯಾಲಿಸಿಸ್ ಕೇಂದ್ರವನ್ನು ಪ್ರಾರಂಭಿಸಲಾಗುವುದು. ಸಾರ್ವಜನಿಕರು ಇವುಗಳ ಸೇವೆಯನ್ನು ಪಡೆದುಕೊಳ್ಳಬೇಕೆಂದರು.

ಈ ಸಂದರ್ಭದಲ್ಲಿ ಆರೋಗ್ಯ ರಕ್ಷಾ ಸಮಿತಿ ಸದಸ್ಯರುಗಳಾದ ಎಲ್.ಎಮ್.ಸಣ್ಣಪ್ಪ, ಅಶ್ವಿನಿ ಪ್ರಭಾಕರ್, ಲಕ್ಕಿಕುಪ್ಪೆ ಮಂಜೇಗೌಡ, ಮೂರ್ತಿ, ಬಸವರಾಜು ಅವರುಗಳನ್ನು ಸನ್ಮಾನಿಸಲಾಯಿತು

ಕಾರ್ಯಕ್ರಮದಲ್ಲಿ ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಭಾಕರ್, ಬ್ಲಾಕ್ ಕಾಂಗ್ರೆಸ್ ಎಸ್ಸಿ ಘಟಕದ ಅಧ್ಯಕ್ಷ ಕಂಠಿಕುಮಾರ್, ಭೂ ನ್ಯಾಯ ಮಂಡಳಿ ಸದಸ್ಯ
ಪುರಿಗೋವಿಂದರಾಜು, ಗ್ಯಾರಂಟಿ ಯೋಜನಾ ಪ್ರಾಧಿಕಾರ ಸಮಿತಿ ಸದಸ್ಯ ವಾಸಿಮ್ ಪಾಷ, ವೈದ್ಯರಾದ ಡಾ.ಮಮತನಾಯಕ್, ಡಾ.ಕೀರ್ತಿ, ಮುಖಂಡ ನಾಗೇಶ್, ಆಸ್ಪತ್ರೆಯ ಸಿಬ್ಬಂದಿ ವರ್ಗದವರು ಹಾಗೂ ಆಶಾ ಕಾರ್ಯಕರ್ತೆಯರು ಸೇರಿದಂತೆ ಹಲವರು ಇದ್ದರು.

Leave a Reply

Your email address will not be published. Required fields are marked *