ಗಾನ ನಿಲ್ಲಿಸಿದ ಕೋಗಿಲೆ : ಎಸ್ ಜಾನಕಿ ಇನ್ನಿಲ್ಲ

ಮೈಸೂರು: ಗಾನ ಕೋಗಿಲೆ ಎಂದೇ ಪ್ರಖ್ಯಾತರಾಗಿದ್ದ ಗಾಯಕಿ ಎಸ್.ಜಾನಕಿ (೮೮) ನಿಧನರಾಗಿದ್ದಾರೆ.
ಅನಾರೋಗ್ಯದಿಂದ ಹಿನ್ನೆಲೆಯಲ್ಲಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಂದಿದೆ.
ಎಸ್ ಜಾನಕಿ ಅವರು ಮೈಸೂರಿನಲ್ಲಿ ವಾಸವಿದ್ದರು. ಅವರಿಗೆ ಇಂದು ಸಂಜೆ ಇದ್ದಕ್ಕಿದ್ದಂತೆ ಹೃದಯಾಘಾತ ಆಗಿದ್ದು, ತಕ್ಷಣವೇ ಅವರನ್ನು ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿತ್ತು, ಆದರೆ ಅವರು ಚಿಕಿತ್ಸೆಗೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.
೧೯೩೮ರ ಏಪ್ರಿಲ್ ೨೩ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೇ ಎಂಬ ಗ್ರಾಮದಲ್ಲಿ ಜನಿಸಿದ ಎಸ್. ಜಾನಕಿ, ತಮ್ಮ ಮೂರನೆಯ ವಯಸ್ಸಿನಲ್ಲೇ ನಾದಸ್ವರ ವಿದ್ವಾನ್ ಶ್ರೀ ಪೈದಿಸ್ವಾಮಿ ಎಂಬವರಲ್ಲಿ ಸಂಗೀತಾಭ್ಯಾಸವನ್ನು ಪ್ರಾರಂಭಿಸಿದರು.
೧೯೫೭ರಲ್ಲಿ ಪ್ರಸಿದ್ಧ ಸಂಗೀತ ನಿರ್ದೇಶಕ ಟಿ. ಚಲಪತಿ ರಾವ್ ಅವರ ತಮಿಳು ಚಿತ್ರ ವಿಧಿಯಿನ್ ವಿಳಯಾಟ್ಟು ಜಾನಕಿ ಅವರು ಹಾಡಿದ ಪ್ರಥಮ ಚಿತ್ರ. ಮುಂದೆ ತೆಲುಗಿನ ಚಿತ್ರ ಎಂ.ಎಲ್.ಎ, ಕನ್ನಡದ ಕೃಷ್ಣಗಾರುಡಿ ಇವೆಲ್ಲಾ ಒಂದಾದ ನಂತರ ಒಂದು ಎಂದು ಹರಿದು ಬರಲು ಪ್ರಾರಂಭವಾದವು. ಮಲಯಾಳಂ ಚಿತ್ರಗಳಲ್ಲಿ ಕೂಡಾ ಹಾಡಲು ಪ್ರಾರಂಭಿಸಿದರು. ಹೀಗೆ ಅವರು ತೆಲುಗು, ತಮಿಳು, ಕನ್ನಡ, ಮಲಯಾಳಂ ಸೇರಿದಂತೆ ೨೦ ಕ್ಕೂ ಹೆಚ್ಚು ಭಾಷೆಗಳಲ್ಲಿ ೪೮,೦೦೦ ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡುವ ಮೂಲಕ ಸಿನಿರಸಿಕರನ್ನು ರಂಜಿಸಿದ್ದಾರೆ.
ದಕ್ಷಿಣ ಭಾರತದ ಎಲ್ಲಾ ಪ್ರಧಾನ ಭಾಷೆಗಳ ಗಾಯಕಿಯಾದರು. ಜೊತೆಗೆ ಹಿಂದಿಯನ್ನೊಳಗೊಂಡಂತೆ ಭಾರತದ ಬಹಳಷ್ಟು ಭಾಷೆಗಳಲ್ಲಿ ತಮ್ಮ ಗಾನಮಾಧುರ್ಯವನ್ನು ಹರಿಸಿದರು.
ದೀಪವು ನಿನ್ನದೆ, ಗಾಳಿಯೂ ನಿನ್ನದೆ, ತಾಯೆ ಬಾರ ಮೊಗವ ತೋರ ಕನ್ನಡಿಗರ ಮಾತೆಯೇ’, ‘ಯುಗ ಯುಗಾದಿ ಕಳೆದರೂ’, ?ಹೇಳೇ ಗೆಳತಿ ಬಾನಲ್ಲು ನೀನೆ ಭುವಿಯಲ್ಲು ನೀನೆ?, ?ಬಿಸಿಲಾದರೇನು ಮಳೆಯಾದರೇನು? ಸೋಲೆ ಇಲ್ಲ, ಅಂತಹ ಅಸಂಖ್ಯಾತ ಸುಮಧುರ ಕನ್ನಡ ಗೀತೆಗಳಿಗೆ ಅವರು ದನಿಯಾಗಿದ್ದಾರೆ.
ಎಸ್. ಜಾನಕಿ ಅವರಿಗೆ ಹಲವು ರಾಷ್ಟ್ರಪ್ರಶಸ್ತಿಗಳು, ವಿವಿಧ ರಾಜ್ಯಗಳ ಪ್ರಶಸ್ತಿಯನ್ನು ಪಡೆದಿದ್ದಾರೆ. ಮೈಸೂರು ವಿಶ್ವವಿದ್ಯಾಲಯ ಅವರಿಗೆ ಗೌರವ ಡಾಕ್ಟರೇಟ್ ಪದವಿ ಇತ್ತು ಸನ್ಮಾನಿಸಿದೆ. ಇನ್ನು ಇತ್ತೀಚಿನ ವರ್ಷದಲ್ಲಿ ಭಾರತ ಸರ್ಕಾರದ ಪದ್ಮಭೂಷಣ ಪ್ರಶಸ್ತಿಯನ್ನು ಎಸ್. ಜಾನಕಿ ಅವರಿಗೆ ಘೋಷಿಸಿದಾಗ, ಪದ್ಮ ಪ್ರಶಸ್ತಿಗಳಲ್ಲಿ ದಕ್ಷಿಣ ಭಾರತೀಯರ ಬಗ್ಗೆ ಅಸಡ್ಡೆ ಇರುವುದನ್ನು ವಿರೋಧಿಸಿ, ಎಸ್. ಜಾನಕಿಯವರು ಈ ಪ್ರಶಸ್ತಿಯನ್ನು ತಿರಸ್ಕರಿಸಿದರು.
೧೭ ಭಾಷೆಗಳಲ್ಲಿ ೪೮ ಸಾವಿರ ಹಾಡುಗಳಿಗೆ ಧ್ವನಿ: ಕನ್ನಡ, ಹಿಂದಿ ತೆಲುಗು ಸೇರಿದಂತೆ ಸುಮಾರು ೧೭ಕ್ಕೂ ಹೆಚ್ಚು ಭಾಷೆಗಳಲ್ಲಿ ಸುಮಾರು ೪೮ ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದ ಗಾನ ಕೋಗಿಲೆ ಎಸ್ ಜಾನಕಿ ಅವರು ಇಂದು ನಿಧನರಾಗಿದ್ದಾರೆ. ೮೮ ವರ್ಷ ವಯಸ್ಸಿನ ಜಾನಕಿ ನಿಧನ ಹೊಂದಿದ್ದಾರೆ.
೧೯೫೬ರಲ್ಲಿ ಆಕಾಶವಾಣಿ ನಡೆಸಿದ ಸಂಗೀತ ಸ್ಪರ್ಧೆಯಲ್ಲಿ ರಾಷ್ಟ್ರಪತಿ ಬಾಬು ರಾಜೇಂದ್ರ ಪ್ರಸಾದ್ ಅವರಿಂದ ಬಹುಮಾನ ಸ್ವೀಕರಿಸಿದ ಜಾನಕಿ, ಮುಂದೆ ಚೆನ್ನೈಗೆ ಬಂದು ಸಂದರ್ಶನವೂಂದರಲ್ಲಿ ಲತಾ ಮಂಗೇಶ್ಕರ್ ಅವರ ರಸಿಕ್ ಬಲಮಾ ಎಂಬ ಗೀತೆಯನ್ನು ಹಾಡಿ ಪ್ರಸಿದ್ಧ ಎವಿಎಮ್ ಸಂಸ್ಥೆಯವರ ಕಾಂಟ್ರಾಕ್ಟ್ ಪಡೆದರು. ಐವತ್ತೊಂಬತ್ತು ವರ್ಷಗಳ ಅವಧಿಯಲ್ಲಿ ಅವರು ೧೭ ಭಾಷೆಗಳಲ್ಲಿ ಸುಮಾರು ೪೮ ಸಾವಿರ ಗೀತೆಗಳನ್ನು ಹಾಡಿದ್ದಾರೆ. ಭಾರತದ ಪ್ರಮುಖ ಭಾಷೆಗಳು ಸೇರಿದಂತೆ ಸಿಂಹಳ, ಜಪಾನಿ, ಲ್ಯಾಟಿನ್, ಅರೇಬಿಕ್ ಒಳಗೊಂಡಂತೆ ಹದಿನೇಳು ಭಾಷೆಗಳಲ್ಲಿ ಹಾಡಿದ ಹೆಗ್ಗಳಿಕೆ ಅವರದು.
ಆರು ದಶಕಗಳ ಹಾಡುಗಾರಿಕೆಯ ಸಾಧನೆ ಜಾನಕಿ ಅವರಿಗೆ ಹಲವು ಗೌರವಗಳನ್ನು ತಂದುಕೊಟ್ಟಿದೆ. ನಾಲ್ಕು ರಾಷ್ಟ್ರ ಪ್ರಶಸ್ತಿಗಳು, ಸುಮಾರು ಮೂವತ್ತು ರಾಜ್ಯ ಪ್ರಶಸ್ತಿಗಳು ಅವರ ಗಾಯನಕ್ಕೆ ದೊರೆತಿವೆ. ಮೈಸೂರು ವಿಶ್ವವಿದ್ಯಾಲಯ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿತ್ತು. ರಾಜ್ಯ ಸರ್ಕಾರ ೨೦೧೪ರಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡಿ ಸನ್ಮಾನಿಸಿತ್ತು.
ಭಾರತದ ಖ್ಯಾತ ಹಿನ್ನೆಲೆ ಗಾಯಕಿ ಎಸ್. ಜಾನಕಿ ಅವರಿಗೆ ೨೦೧೩ರಲ್ಲಿ ಭಾರತ ಸರ್ಕಾರವು ಪದ್ಮಭೂಷಣ ಪ್ರಶಸ್ತಿವನ್ನು ಘೋಷಿಸಿತ್ತು. ಆದರೆ, ಈ ಗೌರವ ತಮ್ಮ ಸುದೀರ್ಘ ಐದೂವರೆ ದಶಕಗಳ ವೃತ್ತಿ ಜೀವನಕ್ಕೆ ತಡವಾಗಿ ಬಂದಿದೆ. ದಕ್ಷಿಣ ಭಾರತದ ಕಲಾವಿದರಿಗೆ ಸೂಕ್ತ ಮನ್ನಣೆ ಸಿಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿ ಅವರು ಪ್ರಶಸ್ತಿಯನ್ನು ಸ್ವೀಕರಿಸಲು ತಿರಸ್ಕರಿಸಿದ್ದರು.

Leave a Reply

Your email address will not be published. Required fields are marked *