- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಕಾರ್ಯಕ್ರಮಕ್ಕೆ ಚಾಲನೆ
ಚಾಮರಾಜನಗರ: ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿ, ಸಂವಿಧಾನ ಜನಾಂದೋಲನ ಸಮಿತಿ ವತಿಯಿಂದ ನ.26ರಂದು ಮೈಸೂರಿನಲ್ಲಿ ಒಂದು ವರ್ಷದ ಜನಜಾಗೃತಿ ಸಂವಿಧಾನದ ಧ್ವನಿ…ಜನರ ಧ್ವನಿ ಕಾರ್ಯಕ್ರಮ ಆಯೋಜಿಸಿಲಾಗಿದೆ ಎಂದು ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ರಾಜ್ಯ ಸಂಘಟನಾ ಕಾರ್ಯದರ್ಶಿ ದೊಡ್ಡಿಂದುವಾಡಿ ಸಿದ್ದರಾಜು ಹೇಳಿದರು.
ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, 2026ರ ನ.26 ರಿಂದ 2027ರ ನ.26ರ ತನಕ ಒಂದು ವರ್ಷಗಳ ಕಾಲ ಜನಜಾಗೃತಿ ಕಾರ್ಯಕ್ರಮ ನಡೆಯಲಿದ್ದು ಜಿಲ್ಲೆ, ತಾಲೂಕು, ಹೋಬಳಿ ಹಾಗೂ ಗ್ರಾಮಗಳ ಮಟ್ಟದಲ್ಲಿ ಸಂವಾದ, ಜಾಥಾ ಕಾರ್ಯಕ್ರಮ ನಡೆಯಲಿದ್ದು ಜನರಿಗೆ ಸಂವಿಧಾನದ ಆಶಯಗಳನ್ನು ತಲುಪಿಸುವ ಕೆಲಸವಾಗಲಿದೆ ಎಂದು ತಿಳಿಸಿದರು.
ಅಂದು ಮಧ್ಯಾಹ್ನ 3 ಗಂಟೆಗೆ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಘಟಿಕೋತ್ಸವ ಭವನದಲ್ಲಿ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.ಮಾಜಿ ಸಚಿವ ಎಚ್.ಸಿ.ಮಹದೇವಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ.
ಭಾರತ ಚುನಾವಣಾ ಆಯೋಗದ ವಿಶ್ರಾಂತ ಮುಖ್ಯ ಆಯಕ ರಾದ ಡಾ.ಎಸ್.ವೈ.ಖುರೇಶಿ ವಿಶೇಷ ಉಪನ್ಯಾಶ ನೀಡುವವರು. ಹಿರಿಯ ಸಾಹಿತಿ ಪ್ರೊ.ಬರಗೂರು ರಾಮಚಂದ್ರಪ್ಪ ಆಶಯ ಭಾಷಣ ಮಾಡುವವರು. ಹಿರಿಯ ದಲಿತಪರ ಹೋರಾಟಗಾರ ಇಂದೂಧರ ಹೊನ್ನಾಪುರ ಪ್ರಾಸ್ತಾವಿಕ ಭಾಷಣ ಮಾಡುವವರು. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ಅನೇಕರು ಭಾಗವಹಿಸ ಭಾಗವಹಿಸಲಿದ್ದಾರೆ ಎಂದರು.
ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಿಕೊಡಬೇಕು ಎಂದು ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ದಲಿತ ಸಂಘರ್ಷ ಸಮಿತಿ ಡಿ.ಜಿ.ಸಾಗರಬಣದ ಜಿಲ್ಲಾ ಸಂಚಾಲಕ ಸಿ.ಎಂ.ಶಿವಣ್ಣ ಮಾತನಾಡಿ, ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂದೇಶಗಳನ್ನು ಮನೆಮನೆಗ ತಲುಪಿಸುವ ಸಲುವಾಗಿ ಈ ಕಾರ್ಯಕ್ರಮ ನಡೆಯುತ್ತಿದೆ. ಸರ್ಕಾರ ಸಂವಿಧಾನ ಜಾಗೃತಿ ಕಾರ್ಯಕ್ರಮ ಮಾಡುತ್ತಿರುವ ಸ್ವಾಗತಾರ್ಹವಾಗಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಹೆಚ್.ಸಿ.ಮಹದೇವಪ್ಪ ಅಭಿಮಾನಿ ಬಳಗದ ಅಧ್ಯಕ್ಷ ಮಹದೇವಯ್ಯ,
ರವಿಕುಮಾರ್, ಮುರುಗೇಶ್, ಸಿದ್ದರಾಜು, ಸೋಮಸುಂದರ್ ಹಾಜರಿದ್ದರು.
