ಚಾಮರಾಜನಗರ ತಾಲೂಕಿನ ಸಿದ್ದಯ್ಯನಪುರ ಗ್ರಾಮದಲ್ಲಿ 8 ಲಕ್ಷ ರೂ. ವೆಚ್ಚದಲ್ಲಿ ರಂಗಮಂದಿರ ನಿರ್ಮಾಣ ಕಾಮಗಾರಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಗುದ್ದಲಿಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಿದ್ದಯ್ಯನಪುರ ಗ್ರಾಮದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ಆಗಿವೆ. ರಸ್ತೆ, ಕುಡಿಯುವ ನೀರು, ಚರಂಡಿ, ಸಮುದಾಯ ಭವನ, ಬೀದಿ ದೀಪ, ಸೇತುವೆ ನಿರ್ಮಾಣ, ರೈತರಿಗೆ ಗಂಗಾ ಕಲ್ಯಾಣ, ಆಶ್ರಯ ಮನೆಗಳು ಹೀಗೆ ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ನನ್ನ ಅವಧಿಯಲ್ಲಿ ಅಭಿವೃದ್ಧಿಪಡಿಸಲಾಗಿದೆ ಎಂದರು.
ಮುಂದಿನ ದಿನಗಳಲ್ಲೂ ಕೂಡಾ ಎಲ್ಲೆಲ್ಲಿ ರಸ್ತೆಗಳು, ಕುಡಿಯುವ ನೀರಿನ ಸಮಸ್ಯೆಗಳಿವೆಯೂ ಅಲ್ಲೆಲ್ಲಾ ಭೇಟಿ ನೀಡಿ, ಸಮಸ್ಯೆ ಬಗೆಹರಿಸಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಬಸವಣ್ಣ, ಸದಸ್ಯರಾದ ಸೋಮಣ್ಣ, ಶೈಲಜಾ ಗೋವಿಂದರಾಜು, ಮಂಜು, ಮಹದೇವಮ್ಮ, ರೇಖಾ, ಯಜಮಾನರಾದ ಮೂರ್ತಿ, ಪಾಪಣ್ಣ, ಬಸವಯ್ಯ, ಮುಖಂಡರಾದ ಹನುಮಂತು, ಶಿವಬಸವಣ್ಣ, ರಮೇಶ್, ನಂಜುಂಡಸ್ವಾಮಿ, ನೀರು ಬಳಕೆದಾರರ ಸಂಘದ ಅಧ್ಯಕ್ಷ ಗೋವಿಂದರಾಜು, ನಿರ್ಮಿತಿ ಕೇಂದ್ರದ ಇಂಜಿನಿಯರ್ ಭೀಮ್ ಸಾಗರ್ ಮತ್ತಿತರರಿದ್ದರು.