- ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮ
ಚಾಮರಾಜನಗರ : ಮಹಿಳೆಯರ ಸಮಾನತೆ, ಸಂರಕ್ಷಣೆಗಾಗಿ ದೇಶದಲ್ಲಿ ಅನೇಕ ಕಾನೂನುಗಳಿವೆ. ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಈಶ್ವರ್ ಸಲಹೆ ನೀಡಿದರು.
ನಗರದ ಶ್ರೀಶಿವಕುಮಾರಸ್ವಾಮಿ ಭವನದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಚಾಮರಾಜನಗರ ತಾಲೂಕು, ಪದ್ಮವಿಭೂಷಣ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಹಾಗೂ ಮಾತೃಶ್ರೀ ಡಾ. ಹೇಮಾವತಿ ವೀರೇಂದ್ರ ಹೆಗಡೆಯವರ ಮಾರ್ಗದರ್ಶನಗಳೊಂದಿಗೆ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಹಮ್ಮಿಕೊಂಡಿರುವ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಹಿಳಾ ದೌರ್ಜನ್ಯ ಕಾಯಿದೆ ಅಡಿಯಲ್ಲಿ ಇರುವ ಮಾಹಿತಿಗಳು, ನೊಂದ ಮಹಿಳೆಯರಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳ ಕುರಿತು ಮಾತನಾಡಿದರು.
ಮಹಿಳೆಯರ ಸಮಾನತೆ, ಸಂರಕ್ಷಣೆಗಾಗಿ ದೇಶದಲ್ಲಿ ಅನೇಕ ಕಾನೂನುಗಳಿದ್ದು, ಮಹಿಳೆಯರ ಹಕ್ಕುಗಳನ್ನು ರಕ್ಷಿಸಲು, ತಾರತಮ್ಮವನ್ನು ತಡೆಯಲು, ಅವರಿಗೆ ಸುರಕ್ಷಿತ ವಾತಾವರಣವನ್ನು ನಿರ್ಮಿಸಲು ಸಹಾಯ ಮಾಡುತ್ತವೆ. ಕಾನೂನಿನ ಮುಂದೆ ಎಲ್ಲರೂ ಸಮಾನರು.ಎಲ್ಲರಿಗೂ ಸಮಾನ ರಕ್ಷಣೆ ಸಿಗುತ್ತದೆ ಎಂದರು.
ಸಣ್ಣಪುಟ್ಟ ವಿಚಾರಗಳಿಗೆ ಕಾನೂನನ್ನು ದುರುಪಯೋಗಪಡಿಸಿಕೊಂಡು ಸಂಸಾರ ಹಾಳು ಮಾಡಿ ಕೊಳ್ಳಬೇಡಿ. ಮಕ್ಕಳಿಗೆ ಶಿಕ್ಷಣ ಕೊಡಿಸಿ ಅವರ ಭವಿಷ್ಯ ರೂಪಿಸಬೇಕು. ಬಾಲ್ಯವಿವಾಹ ನಿಲ್ಲಿಸಬೇಕು. ವರದಕ್ಷಿಣೆ ಕೇಳುವುದು, ಕೊಡುವುದು, ತೆಗೆದುಕೊಳ್ಳುವುದು ಅಪರಾಧವಾಗಿದೆ. ಎಂದರು.
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್‌ನ ಜಿಲ್ಲಾ ನಿರ್ದೇಶಕ ಎ.ದಿನೇಶ್ ಮಾತನಾಡಿ. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್. ಈ ಭಾಗಕ್ಕೆ ಬಂದು 12 ವರ್ಷಗಳು ಆಗಿದೆ. ಭಾರತದ ಸಂಸ್ಕೃತಿಯಲ್ಲಿ ಮಹಿಳೆಯರಿಗೆ ವಿಶೇಷ ಸ್ಥಾನಮಾನ ನೀಡಲಾಗಿದೆ. ಅನಾದಿಕಾಲದಿಂದಲ್ಲೂ ಮಹಿಳೆಯರು ಮೊದಲ ಗುರು ಎಂದರು.
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಈ ಭಾಗದಲ್ಲಿ ಅನೇಕ ಸಹಾಯ ಸಂಘಗಳನ್ನು ಮಾಡಿ, ಆರ್ಥಿಕ ವ್ಯವಹಾರಗಳನ್ನು ತಿಳಿಸಿಕೊಟ್ಟಿದೆ. ಪದ್ಮವಿಭೂಷಣ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಹಾಗೂ ಡಾ. ಹೇಮಾವತಿ ವಿರೇಂದ್ರ
ಹೆಗ್ಗಡೆಯವರು ಗ್ರಾಮೀಣ ಪ್ರದೇಶ ಹೆಣ್ಣು ಮಕ್ಕಳು ತಮ್ಮ ಜೀವನವನ್ನು ತಮ್ಮ ಕಾಲಮೇಲೆ ನಡೆಸಿ, ಆರ್ಥಿಕ ಸ್ವಾವಲಂಬಿಯಾಗಬೇಕು. ಎಂಬ ಉದ್ಧೇಶದಿಂದ ಜ್ಞಾ ವಿಕಾಸ ಕಾರ್ಯಕ್ರಮ ಮಾಡಿದರು. ತಾಲೂಕಿನಲ್ಲಿ 25 ಕೇಂದ್ರಗಳನ್ನು ಮಾಡಿ ಆರೋಗ್ಯ, ಶಿಕ್ಷಣ, ಪೌಷ್ಟಿಕ ಆಹಾರ, ಸರ್ಕಾರಿ ಸೌಲಭ್ಯಗಳು, ಕಾನೂನು, ಗ್ರಾಮ ನೈಮರ್ಲ ಕುರಿತು ಅರಿವು ಮೂಡಿಸಲಾಗುತ್ತದೆ ಎಂದರು.
ಸೈಬರ್ ಪೊಲೀಸ್ ಠಾಣೆಯ ಉಪಅಧೀಕ್ಷಕ ಎಂ.ಎಸ್.ಪ್ರವನ್‌ಕುಮಾರ್ ಸೈಬರ್ ಅಪರಾಧಗಳ ಬಗ್ಗೆ ಮಾಹಿತಿ ನೀಡಿದರು. ನಗರಸಭೆ ಸದಸ್ಯ ನೀಲಮ್ಮ ಅಧ್ಯಕ್ಷತೆ ವಹಿಸಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿದ್ದಶೆಟ್ಟಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಡಿಯಲ್ಲಿ ಸಿಗುವ ಸೌಲಭ್ಯಗಳು ಮತ್ತು ಪಡೆದುಕೊಳ್ಳುವ ವಿಧಾನಗಳ ಬಗ್ಗೆ ಮಾತನಾಡಿದರು. ಕಾರ್ಯಕ್ರಮದಲ್ಲಿ ತಾಲೂಕು ಯೋಜನಾಧಿಕಾರಿ ರವಿಚಂದ್ರ , ಪ್ರಾದೇಶಿಕ ವ್ಯಾಪ್ತಿಯ ಯೋಜನಾಧಿಕಾರಿ ಮೂಕಾಂಬಿಕ ಸಮನ್ವಯಾಧಿಕಾರಿ ಅನಿತಾ, ಮೇಲ್ವಿಚಾರಕರು ಮತ್ತು ಸೇವಾ ಪ್ರತಿನಿಧಿ ಭಾಗವಹಿಸಿದ್ದರು.
