ಕೊಳ್ಳೇಗಾಲ ಹಾಗೂ ಹನೂರು ವಿಧಾನಸಭಾ ಕ್ಷೇತ್ರಗಳ ಪಾಲಿಗೆ ಇಂದು ಸುದಿನ : ಎಆರ್‌ಕೆ

ಚಾಮರಾಜನಗರ: ಕೊಳ್ಳೇಗಾಲ ಹಾಗೂ ಹನೂರು ವಿಧಾನಸಭಾ ಕ್ಷೇತ್ರಗಳ ಪಾಲಿಗೆ ಇಂದು ಸುದಿನವಾಗಿದೆ. ಅಭಿವೃದ್ಧಿಪರ ದೂರದೃಷ್ಠಿ ಹೊಂದಿರುವ ಮುಖ್ಯಮಂತ್ರಿಗಳು ಇಂದು 1500 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿದ್ದಾರೆ ಎಂದು ಕೊಳ್ಳೇಗಾಲ ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಸಂತಸ ವ್ಯಕ್ತಪಡಿಸಿದರು.

ಕೊಳ್ಳೇಗಾಲ ಪಟ್ಟಣದ ಎಂಜಿಎಸ್ ವಿ ಪದವಿಪೂರ್ವ ಕಾಲೇಜು ಆವರಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಜಿಲ್ಲೆಯ ಕೊಳ್ಳೇಗಾಲ, ಹನೂರು ವಿಧಾನಸಭಾ ಕ್ಷೇತ್ರಗಳ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೊಳ್ಳೇಗಾಲ ಹಾಗೂ ಹನೂರು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಅನೇಕ ವರ್ಷಗಳ ಬೇಡಿಕೆಯಾಗಿತ್ತು. ಮುಖ್ಯಮಂತ್ರಿಗಳು ಈ ಭಾಗದ ನೀರಾವರಿ ಯೋಜನೆಗಳಿಗೆ ಒತ್ತು ನೀಡಿ ಅನುದಾನ ಬಿಡುಗಡೆ ಮಾಡಿದ್ದಾರೆ. ಇದರಿಂದ ರೈತರ ಬದುಕು ಹಸನಾಗಲಿದೆ ಎಂದು ತಿಳಿಸಿದರು.

ಯಳಂದೂರಿನಲ್ಲಿ ಸುಸಜ್ಜಿತ ಆಸ್ಪತ್ರೆ, ಅಗರ-ಮಾಂಬಳ್ಳಿ ಕೆರೆ ಅಭಿವೃದ್ಧಿ, ಸಿಲ್ಕ್ ಪಾರ್ಕ್ ನಿರ್ಮಾಣ, ಸಿಲ್ಕ್ ರೀಲರ್ಸ್ಗಳಿಗೆ ಸಹಾಯಧನ ಸೇರಿದಂತೆ ಇನ್ನಿತರೆ ಅಭಿವೃದ್ದಿಗೆ ಪೂರಕವಾದ ಕೊಡುಗೆಗಳನ್ನು ಮುಖ್ಯಮಂತ್ರಿಗಳು ನೀಡಿದ್ದಾರೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಹನೂರು ಶಾಸಕರಾದ ಎಂ.ಆರ್. ಮಂಜುನಾಥ ಅವರು ಮಾತನಾಡಿ ಹನೂರು ವಿಧಾನಸಭಾ ಕ್ಷೇತ್ರದ ಪಾಲಿಗೆ ಇಂದು ಐತಿಹಾಸಿಕ ದಿನವಾಗಿದೆ. ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿದೆ.

ಹನೂರು ಭೌಗೋಳಿಕವಾಗಿ ಹೆಚ್ಚಿನ ವಿಸ್ತಾರ ಹೊಂದಿರುವ ಕ್ಷೇತ್ರವಾಗಿದೆ. ಶೇ. 65ರಷ್ಟು ಅರಣ್ಯ ಪ್ರದೇಶದಿಂದ ಕೂಡಿದೆ. ಮಾನವ-ಪ್ರಾಣಿ ಸಂಘರ್ಷ, ಸೇರಿದಂತೆ ಸಾಕಷ್ಟು ಸಮಸ್ಯೆಗಳಿವೆ. ಯಾವುದೇ ಕೈಗಾರಿಕೆರಗಳಿಲ್ಲ, ಮಳೆಯಾಶ್ರಿತ ಕೃಷಿ ಬೆಳೆ ಬೆಳಯುವ ಪ್ರದೇಶವಾಗಿದ್ದು ಹೆಚ್ಚಿನ ನೀರಾವರಿ ಯೋಜನೆಗಳು ಈ ಭಾಗಕ್ಕೆ ಅವಶ್ಯವಿದೆ. ಯುವಕರಿಗೆ ಬೇರೆಡೆ ವಲಸೆ ಹೋಗದಂತೆ ಇಲ್ಲಿಯೇ ಉದ್ಯೋಗ ಸೃಷ್ಠಿಸುವ ಅಗತ್ಯವಿದೆ. ಈ ಎಲ್ಲಾ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಮುಂದಾಗಬೇಕು ಎಂದು ಮನವಿ ಮಾಡಿದರು.

Leave a Reply

Your email address will not be published. Required fields are marked *