ಚಾಮರಾಜನಗರ: ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ಮತ್ತು ಆದಿವಾಸಿ ಹರಿಣಶಿಕಾರಿ ಪಾರ್ಧಿ
ಸಮಾಜ ಕ್ಷೇಮಾಭಿವೃದ್ಧಿ ಸಂಘದ ಸಹ ಯೋಗದಲ್ಲಿ ಆ.9 ರಂದು ಹುಬ್ಬಳ್ಳಿಯಲ್ಲಿ ರಾಜ್ಯ ಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ, ಆದಿವಾಸಿಗಳ ಕಲಾಮೇಳವನ್ನು ಆಯೋಜಿಸಲಾಗಿದೆ ಎಂದು ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ಜಿಲ್ಲಾಧ್ಯಕ್ಷ ಎನ್.ಸುರೇಶ್ ಹೇಳಿದರು.
ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ,
ಹುಬ್ಬಳ್ಳಿಯ ನೆಹರು ಕ್ರೀಡಾಂಗಣದಲ್ಲಿ ಆಯೋಜನೆ ಗೊಂಡಿರುವ ಆದಿವಾಸಿ ದಿನಾಚರಣೆ ಮತ್ತು ಆದಿವಾಸಿಗಳ ಕಲಾಮೇಳ ಕಾರ್ಯಕ್ರಮದಲ್ಲಿ ರಾಜ್ಯದ 49 ವಿವಿಧ ಬುಡಕಟ್ಟುಗಳ 30 ಸಾವಿರಕ್ಕೂ ಅಧಿಕ ಆದಿವಾಸಿಗಳು ಭಾಗವಹಿಸಲಿದ್ದಾರೆ. ಕೇಂದ್ರ ಸರ್ಕಾರದ ಹೊಸ ಮತ್ತು ನವೀಕರಿಸಬಹುದಾದ ಇಂಧನ ಇಲಾಖೆ ಹಾಗೂ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರ
ಅಂದು ಬೆಳಗ್ಗೆ 11 ಗಂಟೆಗೆ ಹುಬ್ಬಳ್ಳಿಯ ನೆಹರು ಕ್ರೀಡಾಂಗಣದಲ್ಲಿ ಕಲಾಮೇಳ ನಡೆಯಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಿ ಯಶಸ್ವಿಗೊಳಿ ಸಬೇಕು ಎಂದು ಪತ್ರಿಕಾಗೋಷ್ಠಿಯಲ್ಲಿ
ಯಲ್ಲಿ ಮನವಿ ಮಾಡಿದರು.
ಆದಿವಾಸಿಗಳಿಗೆ ಯಾವುದೇ ಸೌಲಭ್ಯ ಸಿಗುತ್ತಿಲ್ಲ. ಹಾಡಿಗಳಲ್ಲಿ ವಾಸ ಮಾಡುವ ಆದಿವಾಸಿಗಳಿಗೆ ಸೂಕ್ತ ಮನೆ, ರಸ್ತೆ ಸೇರಿದಂತೆ ಮೂಲ ಸೌಕರ್ಯಗಳಿಲ್ಲ. ಅಲ್ಲದೇ ಆದಿವಾಸಿಗಳಿಗೂ ಸರ್ಕಾರ ಒಳ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿದರು.

ಪರಿಷತ್‌ನ ರಾಜ್ಯ ನಿರ್ದೇಶಕ ಸಿದ್ದಪ್ಪಾಜಿ ಮಾತನಾಡಿ, ಬುಡಕಟ್ಟು ಜನರು ವಾಸ ಮಾಡುವ ರಾಜ್ಯದಲ್ಲಿ 49 ಬುಡಕಟ್ಟು ಹಾಡಿಗಳಲ್ಲಿ ಮೂಲ ಸೌಕರ್ಯ ಮರೀಚಿಕೆಯಾಗಿದೆ. ಆದ್ದರಿಂದ ಸರ್ಕಾರವು ಹಾಡಿಗಳಿಗೆ ರಸ್ತೆ, ನೀರು, ಮನೆ ನಿರ್ಮಾಣ ಹಾಗೂ ಪೌಷ್ಟಿಕ ಆಹಾರ ಒದಗಿಸಬೇಕು ಎಂದು ಒತ್ತಾಯಿಸಿದರು.
ಪತ್ರಿಕಾಗೋಷ್ಠಿಯಲ್ಲಿ ರಂಗಸ್ವಾಮಿ, ಮಾದೇಶ್ ಹಾಜರಿದ್ದರು.
