ಸೇವಾ ನಿವೃತ್ತಿ ಹೊಂದಿದ್ದ ಸಬ್‌ ಇನ್ಸ್‌ಪೆಕ್ಟರ್ ಎಂ. ಧನಂಜಯ ಅವರಿಗೆ ಸನ್ಮಾನ

ಚಾಮರಾಜನಗರ: ಇಲ್ಲಿನ ಸಂಚಾರಿ ಪೊಲೀಸ್ ಠಾಣೆಯಲ್ಲಿ ಸಬ್‌ಇನ್ಸ್ ಪೆಕ್ಟರ್ ಆಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದ ಎಂ. ಧನಂಜಯ ಅವರನ್ನು ಜಿಲ್ಲಾ ರೈತ ಹಿತರಕ್ಷಣಾ ಹೋರಾಟ ಸಮಿತಿ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.
ನಗರದ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿರುವ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಯ ಕೆಳಗಡೆ ರಾಜ್ಯ ರೈತ ಹಿತರಕ್ಷಣಾ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಕಲ್ಲಂಬಳ್ಳಿ ಸೋಮನಾಯಕ, ಜಿಲ್ಲಾಧ್ಯಕ್ಷ ಆಲೂರುಮಲ್ಲು ಅವರ ನೇತೃತ್ವದಲ್ಲಿ ಧನಂಜಯ ಅವರಿಗೆ ಶಾಲು ಹೊದಿಸಿ, ಮೈಸೂರುಪೇಟಿ ತೊಡಿಸಿ, ಹಾರಹಾಕಿ ಸನ್ಮಾನಿಸಿ ಶುಭ’ ಕೋರಲಾಯಿತು.
ರಾಜ್ಯ ರೈತ ಹಿತರಕ್ಷಣಾ ಹೋರಾಟ ಸಮಿತಿ ಅಧ್ಯಕ್ಷ ಕೆಲ್ಲಂಬಳ್ಳಿ ಸೋಮನಾಯಕ ಮಾತನಾಡಿ, ಪೊಲೀಸ್ ಇಲಾಖೆಗೆ ಸೇರುವುದೇ ಕಷ್ಟ ಇರುವ ಪರಿಸ್ಥಿತಿಯ ಕಾಲದಲ್ಲಿ ಸೇರಿರುವ ಧನಂಜಯ ಅವರು ಅಂಬೇಡ್ಕರ್ ತತ್ವಗಳನ್ನು ಪಾಲಿಸಿಕೊಂಡು ಸಮಾಜದಲ್ಲಿ ನ್ಯಾಯಕ್ಕಾಗಿ ಕೆಲಸ ಮಾಡಿಕೊಂಡು ಬಂದಿದ್ದಾರೆ. ಅವರು ಸ್ನೇಹಕ್ಕೆ ಬದ್ಧರಾಗಿ
ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಇಲಾಖೆಯಲ್ಲಿ ಕೆಲಸ ಮಾಡಿದ್ದಾರೆ. ಅವರ ನಿವೃತ್ತಿ ಜೀವನ ಮುಂದಿನ ದಿನಗಳಲ್ಲೂ ಸುಖಕರವಾಗಿರಲಿ ಎಂದು ಆಶಿಸಿದರು.
ಜಿಲ್ಲಾಧ್ಯಕ್ಷ ಆಲೂರುಮಲ್ಲು ಮಾತನಾಡಿ, ಸಂಚಾರಿ ಪೊಲೀಸ್ ಠಾಣೆಯಲ್ಲಿ ಸಬ್‌ಇನ್‌ಪೆಕ್ಟರ್ ಆಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದ ಧನಂಜಯ ಅವರು ಇಲಾಖೆಯಲ್ಲಿ ದಕ್ಷ, ಪ್ರಾಮಾಣಿಕವಾಗಿ ಸೇವೆಸಲ್ಲಿಸಿದ್ದಾರೆ. ಜನಸ್ನೇಹಿಯಾಗಿ ಬಡವರಿಗೆ ನ್ಯಾಯ ಕೊಡಿಸಿಕೊಡಿಸುವ ಕೆಲಸ ಮಾಡಿದ್ದಾರೆ ಅವರಿಗೆ ಭಗವಂತ ಮುಂದಿನ ದಿನಗಳಲ್ಲೂ ಒಳ್ಳೆಯದು ಮಾಡಲಿ ಎಂದು ಶುಭ ಕೋರಿದರು.
ಈ ಸಂದರ್ಭದಲ್ಲಿ ಜಿಲ್ಲಾ ರೈತ ಹೋರಾಟ ಹಿತರಕ್ಷಣಾ ಸಮಿತಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವನಪುರ ರಾಜಶೇಖರ್, ಜಿ.ಎಂ.ಶಂಕ‌ರ್, ಮಂಗಲದ ಹೊಸೂರು ಶಿವಣ್ಣ, ಮಹೇಶ್, ಕೆಸ್ತೂರು ಮರಪ್ಪ, ಸುಂದರ್, ಸುಬ್ಬಣ್ಣಶೆಟ್ಟಿ ಇತರರು ಹಾಜರಿದ್ದರು.

Leave a Reply

Your email address will not be published. Required fields are marked *