ಚಾಮರಾಜನಗರ: ಚಾಮರಾಜನಗರ ವಿಧಾನಸಭಾ ಕ್ಷೇತ್ರದಿಂದ ಸತತ 4 ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಸಿ. ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನ, ವಿಧಾನ ಪರಿಷತ್ ಸದಸ್ಯರಾದ ಯತೀಂದ್ರ ಸಿದ್ದರಾಮಯ್ಯ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಡಬೇಕು ಎಂದು ತಾಲೂಕು ಕುರುಬರ ಸಂಘದ ಅಧ್ಯಕ್ಷ ಉಮೇಶ್ ಎಸ್ ಪಿಕೆ ಆಗ್ರಹಿಸಿದರು.
ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಪುಟ್ಟರಂಗಶೆಟ್ಟಿ ಅವರು ರಾಜ್ಯದ ಉಪ್ಪಾರ ಜನಾಂಗದ ಏಕೈಕ ಶಾಸಕರು. ಕಾಂಗ್ರೆಸ್ ಗೆಲುವಿಗೆ ಶ್ರಮಿಸಿದ್ದಾರೆ. ಉಪ್ಪಾರ ಸಮಾಜ ಮತದಾರರು ಹೆಚ್ಚು ಇರುವ ಕ್ಷೇತ್ರದಲ್ಲಿ ಕಾಂಗ್ರೆಸ್ ಬೆಂಬಲಿಸುವಂತೆ ಜಾಗೃತಿ ಮೂಡಿಸಿದ್ದಾರೆ. 2008ರಿಂದ ನಿರಂತರ ಆಯ್ಕೆಯಾಗಿದ್ದಾರೆ. ಜಿಲ್ಲಾ ಕೇಂದ್ರದ ಅಭಿವೃದ್ಧಿ ಗಾಗಿ ಶ್ರಮಿಸಿದ್ದಾರೆ ಎಂದರು.
ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅವರು ಕಾಂಗ್ರೆಸ್ ಪಕ್ಷದಿಂದಲ್ಲೇ ರಾಜಕೀಯ ಆರಂಭಿಸಿದರು. ಅಧಿಕಾರ ಇರಲಿ, ಇಲ್ಲದಿದ್ದ ಸಂದರ್ಭದಲ್ಲೂ ಕಾಂಗ್ರೆಸ್ ಬಿಟ್ಟು ಹೋಗಿಲ್ಲ. ಅವರಿಗೆ ಬೇರೆ ಪಕ್ಷಗಳಿಂದಲ್ಲೂ ಅಫರ್ ಬಂದರು ಕೂಡ ಪಕ್ಷಾಂತರ ಮಾಡದೆ ಕಾಂಗ್ರೆಸ್ ನಲ್ಲಿ ನಿಷ್ಠಾವಂತರಾಗಿ ಪಕ್ಷ ಬೆಳೆಸಿದ್ದಾರೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಟ್ಟ ಅಭಿಮಾನಿಯಾಗಿರುವ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನ ನೀಡಿ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಮಾಡಬೇಕು
ಅಲ್ಲದೆ ಮೈಸೂರು, ಚಾಮರಾಜನಗರ ಜಿಲ್ಲೆಯು ಒಂದೇ ಭಾವನೆ ಇಟ್ಟಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಶಯದಂತೆ ಇಲ್ಲಿಯ ತನಕ ಅನೇಕ ಅಭಿವೃದ್ಧಿ ಕಾರ್ಯಗಳಿಗೆ ಮಂಜೂರಾತಿ ನೀಡಿ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗೆ ಸಹಕಾರ ನೀಡಿರುವುದರಿಂದ ಮುಂದಿನ ಸಚಿವ ಸಂಪುಟದಲ್ಲಿ ವಿಧಾನ ಪರಿಷತ್ ಸದಸ್ಯರು, ಯವಕರ ಆಶಾಕಿರಣ ಯತೀಂದ್ರ ಸಿದ್ದರಾಮಯ್ಯ ಅವರನ್ನು ಉಪಮುಖ್ಯಮಂತ್ರಿ ಯಾಗಿ ಮಾಡಬೇಕು ಎಂದು ಕಾಂಗ್ರೆಸ್ ವರಿಷ್ಠರನ್ನು ಉಮೇಶ್ ಒತ್ತಾಯಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಕುರುಬರ ಸಂಘದ ಜಿಲ್ಲಾ ಉಪಾಧ್ಯಕ್ಷ ಬಸಪ್ಪನಪಾಳ್ಯ ನಟರಾಜು, ಸಹ ಕಾರ್ಯದರ್ಶಿ ಮಹಾದೇವಸ್ವಾಮಿ, ತಾಲೂಕು ಸಂಘಟನಾ ಕಾರ್ಯದರ್ಶಿ ಗೋವಿಂದ, ಮಂಜು, ನಿರ್ದೇಶಕರಾದ ಶಿವಸ್ವಾಮಿ, ಮರಿಸ್ವಾಮಿ, ರಾಜುಕೆಲ್ಲಂಬಳ್ಳಿ, ಸುಬ್ಬೇಗೌಡ ಹಾಜರಿದ್ದರು.