ಚಾಮರಾಜನಗರ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ನಿಧನದ ಹಿನ್ನಲೆಯಲ್ಲಿ ಭಾರತ ಸರ್ಕಾರದ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವರಾದ ವಿ.ಸೋಮಣ್ಣ ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳು ನಗರದ ಮಾರಮ್ಮ ದೇವಸ್ಥಾನದಲ್ಲಿ ವಿಶೇಷಪೂಜೆ ಸಲ್ಲಿಸಿ, ಸಾರ್ವಜನಿಕರಿಗೆ ಲಾಡು ವಿತರರಿಸುವ ಮೂಲಕ ಸರಳವಾಗಿ ಆಚರಣೆ ಮಾಡಿದರು.
ಅಭಿಮಾನಿಗಳಾದ ತಾ.ಪಂ.ಮಾಜಿ ಉಪಾಧ್ಯಕ್ಷ ದಯಾನಿಧಿ, ಎಪಿಎಂಸಿ ನಿರ್ದೇಶಕ ವೆಂಕಟರಾವ್. ಸಾಠೆ, ಮುಖಂಡರಾದ ನಟರಾಜು, ಕೆ.ವೀರಭದ್ರಸ್ವಾಮಿ, ಸೋಮವಾರಪೇಟೆ ವಿಶ್ವ, ಗ್ರಾ.ಪಂ.ಮಾಜಿ ಉಪಾಧ್ಯಕ್ಷ ಮಹೇಶ್ ಉತ್ತುವಳ್ಳಿ ಇತರರು ನಗರದ ಮಾರಮ್ಮ ದೇವಸ್ಥಾನದಲ್ಲಿ ವಿ.ಸೋಮಣ್ಣ ಅವರ ಹೆಸರಿನಲ್ಲಿ ಆರ್ಚನೆ ಮಾಡಿಸಿ, ದೇವರಿಗೆ ವಿಶೇಷಪೂಜೆ ಸಲ್ಲಿಸಿ, ಲಾಡು ವಿತರಿಸಿದರು.
ಈ ಸಂದರ್ಭದಲ್ಲಿ ಮುಖಂಡ ನಟರಾಜು ಮಾತನಾಡಿ, ಭಾರತ ಸರ್ಕಾರದ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವರಾದ ವಿ.ಸೋಮಣ್ಣ ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳು ನಗರದಲ್ಲಿ ಅದ್ಧೂರಿ ಆಚರಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ನಿಧನದ ಹಿನ್ನಲೆಯಲ್ಲಿ ವಿ.ಸೋಮಣ್ಣ ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳಾದ ನಾವು ಭಾರತ ಸರ್ಕಾರದ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವರಾದ ವಿ.ಸೋಮಣ್ಣ ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳು ನಗರದ ಮಾರಮ್ಮ ದೇವಸ್ಥಾನದಲ್ಲಿ ವಿಶೇಷಪೂಜೆ ಸಲ್ಲಿಸಿ, ಸಾರ್ವಜನಿಕರಿಗೆ ಲಾಡು ವಿತರರಿಸುವ ಮೂಲಕ ಸರಳವಾಗಿ ಆಚರಣೆ ಮಾಡಲಾಯಿತು. ಅವರಿಗೆ ಹೆಚ್ಚಿನ ಆರೋಗ್ಯ, ಆಯಸ್ಸು ಕರಣಿಸಿ ರಾಜಕಾರಣದಲ್ಲಿ ಉನ್ನತಮಟ್ಟದ ಹುದ್ದೆ ಲಭಿಸಲಿ ಎಂದು ಭಗವಂತನಲ್ಲಿ ಪ್ರಾರ್ಥಿಸಲಾಯಿತು ಎಂದರು.