ಸರ್ಕಾರಿ ಸೌಲಭ್ಯಗಳನ್ನು ಬಳಸಿಕೊಳ್ಳಿ ಎಚ್.ಎಸ್.ಬಿಂದ್ಯಾ

ಚಾಮರಾಜನಗರ: ಸರ್ಕಾರ ಹಲವಾರು ಜನಪರ ಯೋಜನೆಗಳನ್ನು ಜಾರಿ ಮಾಡಿದೆ ಅದನ್ನು ವಿದ್ಯಾರ್ಥಿಗಳು ಉಪಯೋಗಿಸಿಕೊಂಡು ಮುಖ್ಯ ವಾಹಿನಿಗೆ ಬರಬೇಕು ಎಂದು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಎಚ್ ಎಸ್ ಬಿಂದ್ಯಾ ಕರೆ ನೀಡಿದರು
ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನ ಮುಂಭಾಗ ಜಿಲ್ಲಾಡಳಿತ ,ಜಿಲ್ಲಾ ಪಂಚಾಯಿತಿ, ಕ್ರೀಡಾ ಇಲಾಖೆ. ಪೋಲಿಸ್ ಇಲಾಖೆ ಶಿಕ್ಷಣ ಇಲಾಖೆ. ಏರ್ಪಡಿಸಿದ ರಾಷ್ಟ್ರೀಯ ಕ್ರೀಡಾ ದಿನಚರಣೆ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿ ಗ್ರಾಮೀಣ ಕ್ರೀಡಾಕೂಟ ಆದ ಹಗ್ಗ ಜಗ್ಗಾಟ. ಕುಂಟೆಬಿಲ್ಲೆ. ಇನ್ನಿತರ ಗ್ರಾಮೀಣ ಆಟಗಳಿಗೆ ಹೆಚ್ಚಿನ ಕೊಡಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು
ಕ್ರೀಡೆ ಇಲಾಖೆ ಜಿಲ್ಲಾ ಯುವ ಪ್ರಶಸ್ತಿ ಪುರಸ್ಕೃತ. ಚಾಮರಾಜನಗರ ವಿಶ್ವವಿದ್ಯಾಲಯ ಕ್ರೀಡಾ ಸಮಿತಿ ಸದಸ್ಯ ಜಿ ಬಂಗಾರು ಮಕ್ಕಳಿಗೆ ಪ್ರಶಸ್ತಿ ಪತ್ರ ಬಹುಮಾನ ವಿತರಿಸಿ ಮಾತನಾಡಿ ಕ್ರೀಡಾ ಇಲಾಖೆಯಿಂದ ಹಲವಾರು ಕ್ರೀಡಾಪಟುಗಳಿಗೆ ಪ್ರಶಸ್ತಿಗಳು ಹಾಗೂ ಬಹುಮಾನಗಳು ಲಭಿಸಿದೆ. ಜಿಲ್ಲೆಯಲ್ಲಿ ಕ್ರೀಡಾಪಟು ಉತ್ತಮ ಸಾಧನೆ ಮಾಡಿದ್ದಾರೆ ಎಂದು ತಿಳಿಸಿದರು.
ಕ್ರೀಡಾಪಟು ವಿ ಶ್ರೀನಿವಾಸ್ ಪ್ರಸಾದ್. ಕ್ರೀಡಾ ಇಲಾಖೆ. ತರಬೇತಿದಾರ ಗೋಪಾಲ್. ಮಂಜುನಾಥ್, ದೊರೆಸ್ವಾಮಿ, ರಂಗಸ್ವಾಮಿ ಯಮುನಾ ಸೇರಿದಂತೆ ಕ್ರೀಡಾಪಟುಗಳು ಹಾಜರಿದ್ದರು..

Leave a Reply

Your email address will not be published. Required fields are marked *