ಅಂತರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ವಿವಿಧ ಸ್ಪರ್ಧೆಗಳ ಆಯೋಜನೆ

  • ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಂದ ರಂಗೋಲಿ ಸ್ಪರ್ಧೆ ವೀಕ್ಷಣೆ-ಮೆಚ್ಚುಗೆ
ಚಾಮರಾಜನಗರ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿಂದು ಮಹಿಳೆಯರಿಗಾಗಿ ರಂಗೋಲಿ ಸ್ಪರ್ಧೆ, ಹಗ್ಗ-ಜಗ್ಗಾಟ, ಲೆಮನ್ ಆಂಡ್ ಸ್ಪೂನ್ ಮತ್ತು ಮ್ಯೂಸಿಕಲ್ ಚೇರ್ ಇನ್ನಿತರ ಸ್ಪರ್ಧೆಗಳು ನಡೆದವು.

ಇದೇ ತಿಂಗಳ ಮಾರ್ಚ್ 10ರಂದು ನಡೆಯಲಿರುವ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿವಿಧ ಸ್ಪರ್ಧೆಗಳಲ್ಲಿ ಮಹಿಳೆಯರು ಬಹಳ ಉತ್ಸುಕತೆಯಿಂದ ಪಾಲ್ಗೊಂಡು ಗಮನ ಸೆಳೆದರು.

ಜಿಲ್ಲಾಡಳಿತ ಭವನದ ಆವರಣದಲ್ಲಿ ಬೆಳಿಗ್ಗೆ ಆಕರ್ಷಕವಾಗಿ ಬಿಡಿಸಿದ್ದ ರಂಗೋಲಿಯನ್ನು ಜಿಲ್ಲಾಧಿಕಾರಿ ಶ್ರೀರೂಪ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ, ಅವರು ವೀಕ್ಷಿಸಿದರು.

ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರತಿ ಸ್ಪರ್ಧಿಗಳು ಬಿಡಿಸಿದ್ದ ರಂಗೋಲಿಗಳನ್ನು ಆಸಕ್ತಿಯಿಂದ ವೀಕ್ಷಿಸುವುದರ ಜೊತೆಗೆ ರಂಗೋಲಿ ಸ್ಪರ್ಧೆಯ ತೀರ್ಪುಗಾರರಾಗಿಯೂ ಕಾರ್ಯ ನಿರ್ವಹಿಸಿದರು. ಮಹಿಳೆಯರ ರಂಗೋಲಿ ಕಲೆಗೆ ಜಿಲ್ಲಾಧಿಕಾರಿ ಶ್ರೀರೂಪ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅವರು ತೀವ್ರ ಮೆಚ್ಚುಗೆ ವ್ಯಕ್ತಪಡಿಸಿದರು. 

ಮಧ್ಯಾಹ್ನದ ವೇಳೆ ಮ್ಯೂಸಿಕಲ್ ಚೇರ್, ಹಗ್ಗ-ಜಗ್ಗಾಟ ಲೆಮನ್ ಆಂಡ್ ಸ್ಪೂನ್ ಸ್ಪರ್ಧೆಗಳು ನಡೆದವು. ಮಹಿಳೆಯರು ಉತ್ಸಾಹದಿಂದ ಪಾಲ್ಗೊಂಡರು. 

ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಡಿ.ಸಿ. ಶೃತಿ, ಜಿಲ್ಲಾ ಖಜಾನೆಯ ಉಪ ನಿರ್ದೇಶಕರಾದ ರಾಜೇಶ್ವರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ಸುರೇಶ್, ಜಿಲ್ಲಾ ಪಂಚಾಯತ್ ಮೌಲ್ಯಮಾಪನ ಅಂದಾಜು ಅಧಿಕಾರಿ ದೀಪಾ, ಸಹಾಯಕ ಕಾರ್ಯದರ್ಶಿ ಶ್ರೀಕಂಠರಾಜೇ ಅರಸ್, ವಾರ್ತಾ ಇಲಾಖೆಯ ವಾರ್ತಾ ಸಹಾಯಕರಾದ ಸುರೇಶ್‍ಕುಮಾರ್, ಜಿಲ್ಲಾಧಿಕಾರಿ ಕಚೇರಿಯ ಶಿರಸ್ತೇದಾರರಾದ ರಂಗರಾಜು, ಸಿ.ಎಸ್.ಆರ್. ಸಂಯೋಜಕರು ಹಾಗೂ ಪಾಲಿಸಿ ಅಡ್ವೈಸರ್ ರಕ್ಷಿತಾ, ಇತರರು ಇದ್ದರು.

Leave a Reply

Your email address will not be published. Required fields are marked *