ಭಗತ್‍ಸಿಂಗ್ ಯುವಸೇನೆ ವತಿಯಿಂದ ಮತದಾನದ ಅರಿವು

ಚಾಮರಾಜನಗರ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರತಿಯೊಬ್ಬರೂ ಕಡ್ಡಾಯವಾಗಿ ತಮ್ಮ ಹಕ್ಕನ್ನು ಚಲಾಯಿಸಬೇಕು ಎಂದು ಭಗತ್‍ಸಿಂಗ್ ಯುವಸೇನೆ ವತಿಯಿಂದ ಕೋಡಿಮೋಳೆ ಗ್ರಾಮದ ಜನತೆಗೆ ಅರಿವು ಮೂಡಿಸಿದರು.

ಭಗತ್‍ಸಿಂಗ್ ಯುವಸೇನೆ ಅಧ್ಯಕ್ಷ ಕಾಂತರಾಜು ಮಾತನಾಡಿ, ಕರ್ನಾಟಕ ರಾಜ್ಯದಲ್ಲಿ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಏಪ್ರಿಲ್ 26ಕ್ಕೆ ಮೊದಲ ಹಂತ, ಮೇ 7ಕ್ಕೆ 2ನೇ ಹಂತದ ಮತದಾನ ನಡೆಯಲಿದ್ದು, ಪ್ರತಿಯೊಬ್ಬರೂ ಕೂಡಾ ತಮ್ಮ ಮತದಾನ ಹಕ್ಕನ್ನು ಚಲಾಯಿಸಬೇಕು ಎಂದರು.

ಮತದಾರರು ಯಾವುದೇ ಆಸೆ, ಆಮಿಷಗಳಿಗೆ ಒಳಗಾಗದೆ ಸಮರ್ಥ ನಾಯಕರನ್ನು ಆಯ್ಕೆಮಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಸಂವಿಧಾನದಲ್ಲಿ ಪ್ರತಿಯೊಬ್ಬರಿಗೂ ಕೂಡಾ ಮತದಾನ ನೀಡುವ ಸಮಾನ ಹಕ್ಕನ್ನು ಕೊಟ್ಟಿದೆ. ಎಲ್ಲರೂ ಕೂಡಾ ತಪ್ಪದೇ ಮತದಾನ ಮಾಡುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಶಿವು, ರಂಗಸ್ವಾಮಿ, ಮಂಜು, ಮನು, ರಾಜೇಂದ್ರ, ಮಹೇಶ್ ಮತ್ತಿತರರಿದ್ದರು.

Leave a Reply

Your email address will not be published. Required fields are marked *