ಸಿ.ಎಂ. ಸಿದ್ದರಾಮಯ್ಯ ಅವರು ಸರ್ವಪಕ್ಷಗಳ ನಿಯೋಗವನ್ನು ಪಿಎಂ ಬಳಿ ಕರೆದೊಯ್ಯಲು ಒತ್ತಾಯ.
ಮೀಸಲಾತಿ ವಿಚಾರದಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಸ್ಪಂದಿಸಿದ್ದರು. ಚಾಮರಾಜನಗರ: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ ಮಾಡಿರುವ 2022 ರ ಕಾಯ್ದೆಯನ್ನು ಸಂವಿಧಾನದ 9ನೇ ಶೆಡ್ಯೂಲ್ ಗೆ ಸೇರಿಸಿ ಈ ವರ್ಗಕ್ಕೆ ಆಗುತ್ತಿರುವ ಅನ್ಯಾಯ ತಡೆಯದೆ ಹೋದರೆ ಮುಂದಿನ ದಿನಗಳಲ್ಲಿ ಸಮಸ್ಯೆ ಎದುರಿಸಬೇಕಾಯಿತು ಎಂದು ವಾಲ್ಮೀಕಿ ನಾಯಕ ಸಮಾಜ ಸಿದ್ಧ ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಕರ್ನಾಟಕ ರಾಜ್ಯ ವಾಲ್ಮೀಕಿ ಸಮಾಜದ ಸಮಾನ ಮನಸ್ಕರ ವೇದಿಕೆ ಅಧ್ಯಕ್ಷರಾದ ವಿ.ಎಸ್. ಉಗ್ರಪ್ಪ ಎಚ್ಚರಿಸಿದರು. ನಗರದ ಪ್ರವಾಸಿಮಂದಿರದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು.ಮಾತನಾಡಿ, ಶೇ.56ರಷ್ಟು ಮೀಸಲಾತಿ ಸಂವಿಧಾನ 9ನೇ ಶೆಡ್ಯೂಲ್‌ಗೆ ಸೇರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ವಪಕ್ಷಗಳ ನಿಯೋಗವನ್ನು ಪ್ರಧಾನ ನರೇಂದ್ರ ಬಳಿ ಕರೆದೊಯ್ಯಬೇಕು ಒತ್ತಾಯಿಸಿದರು. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ .ಕುಮಾರಸ್ವಾಮಿ ನೀವು ನರೇಂದ್ರ ಮೋದಿ ಚೆನ್ನಾಗಿಯೇ ಇದ್ದೀರಿ ನೀವು ಅವರಿಗೆ ಹೇಳಿ ಶೇ.56ರಷ್ಟು ಮೀಸಲಾತಿ 9ನೇ ಶೆಡ್ಯೂಲ್‌ಗೆ ಸೇರಿಸಿ ಈ ನಮ್ಮ ಸಮುದಾಯಗಳಿಗೆ ನ್ಯಾಯ ಕೊಡಿಸಿಕೊಡಬೇಕು ಎಂದು ಮನವಿ ಮಾಡಿದರು. 2023-24, 2024-25ರಲ್ಲಿ ಪರಿಶಿಷ್ಠ ಜಾತಿ, ವರ್ಗ, ಹಿಂದುಳಿದ ಮತ್ತು ಅಲ್ಪಸಂಖ್ಯಾತರು ಶೇ.56ರಷ್ಟು ಮೀಸಲಾತಿ ಅಡಿಯಲ್ಲಿ ಉನ್ನತ ವಿದ್ಯಾಭ್ಯಾಸಕ್ಕೆ ಪ್ರವೇಶ ಮತ್ತು ಉದ್ಯೋಗದಲ್ಲಿ ಬಡ್ತಿ ಪಡೆದುಕೊಂಡಿದ್ದಾರೆ. ಈಗ ರಾಜ್ಯ ಹೈಕೋರ್ಟ್ ತಡೆ ನೀಡಿರುವುದರಿಂದ ಈ ಸಮುದಾಯಗಳಿಗೆ ಅನ್ಯಾಯವಾಗಿದೆ. ಸಂವಿಧಾನದ 9ನೇ ವಿಧಿಯಲ್ಲಿ ಸೇರಿಸಿದ್ದರೆ, ಬಹುಶಃ ಹೈಕೋರ್ಟ್‌ನಿಂದ ತಡೆಗೆ ಅವಕಾಶವಾಗುತ್ತಿರಲಿಲ್ಲ ಎಂದರು. ಸರ್ವೋಚ್ಛ ನ್ಯಾಯಾಲದಯದ ತೀರ್ಪಿನಂತೆ ಒಟ್ಟು ಮೀಸಲಾತಿ ಶೇ 50 ಮೀರುವಂತಿಲ್ಲ. ಆದರೆ, ಮೀಸಲಾತಿ ಹೆಚ್ಚಳಕ್ಕೆ ಮಾರ್ಗದರ್ಶನಗಳಿಗೆ ಅನುಗುಣವಾಗಿ ಏರಿಸಬಹುದು ಎಂದು ತೀರ್ಪಿನಲ್ಲಿದೆ. ಆದರೆ, ಈ ಹೆಚ್ಚಳ ಸಂವಿಧಾನದ 9ನೇ ವಿಧಿಯಲ್ಲಿ ಸೇರಿಸುವುದು ಅವಶ್ಯಕ. ಬೊಮ್ಮಾಯಿ ಸರ್ಕಾರದಲ್ಲಿ ಅಂದಿನ ಮುಖ್ಯ ಕಾರ್ಯದರ್ಶಿಗಳು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಸಂವಿಧಾನ 9ನೇ ವಿಧಿಯಲ್ಲಿ ಸೇರಿಸುವಂತೆ ಮನವಿ ಮಾಡಿದ್ದರು. ಆದರೆ, ಕೇಂದ್ರ ಸರ್ಕಾರ ಈ ಮನವಿಯನ್ನು ತಿರಸ್ಕರಿಸಲೂ ಇಲ್ಲ, ಪುರಸ್ಕರಿಸಲೂ ಇಲ್ಲ. ಇತ್ತ ರಾಜ್ಯದಲ್ಲಿ ಮೂರು ವರ್ಷಗಳ ಕಾಲ ವಿದ್ಯಾಭ್ಯಾಸದಲ್ಲಿ ಮೀಸಲಾತಿಯ ಅವಕಾಶ ಪಡೆದಿದ್ದರಿಂದ ಈ ಸಮುದಾಯದ ವಿದ್ಯಾರ್ಥಿಗಳಿಗೆ ಉನ್ನತ ವಿದ್ಯಾಭ್ಯಾಸಕ್ಕೆ ಅನುಕೂಲವಾಗಿದೆ. ಆದರೆ, ಇತ್ತೀಚೆಗೆ ಹೈಕೋರ್ಟ್ ಮೀಸಲಾತಿ ಪ್ರಮಾಣದ ಹೆಚ್ಚಳಕ್ಕೆ ತಡೆಕೊಟ್ಟಿರುವುದರಿಂದ ಸುಮಾರು 4 ಕೋಟಿ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ. ಹೀಗಾಗಿ ತಾವು ಷೆಡ್ಯೂಲ್ 9ರಲ್ಲಿ ಸೇರಿಸುವಂತೆ ಒತ್ತಾಯಿಸಿದರು. ಈ ವಿಚಾರದಲ್ಲಿ ತಾವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾಗಿ, ನ್ಯಾಯಾಲಯ ವಿಧಿಸಿರುವ ತಡೆಯ ತೆರವಿಗೆ ಒತ್ತಾಯಿಸಿರುವುದಾಗಿ ತಿಳಿಸಿದರು. ಇದರೊಟ್ಟಿಗೆ ಸುಳ್ಳು ಜಾತಿ ಪ್ರಮಾಣ ಪತ್ರಗಳನ್ನು ಪತ್ತೆ ಹಚ್ಚಿ ರದ್ದು ಮಾಡಬೇಕು. 9ನೇ ವಿಧಿಯಲ್ಲಿ ಸೇರಿಸಲು ಸರ್ವ ಪಕ್ಷಗಳ ನಿಯೋಗವನ್ನು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲು ಕರೆದೊಯ್ಯಬೇಕು ಎಂದು ಒತ್ತಾಯಿಸಲಾಗಿದೆ. ಮುಖ್ಯಮಂತ್ರಿಗಳು ಸಹ ಇದಕ್ಕೆ ಸ್ಪಂದಿಸಿದ್ದಾರೆ. ಅವರು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕು. ತಕ್ಷಣ ಕಾರ್ಯ ಪ್ರವೃತ್ತರಾಗಬೇಕು ಎಂದು ಒತ್ತಾಯಿಸಿದರು. ಮೀಸಲಾತಿ ವಿಚಾರದಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಸ್ಪಂದಿಸಿದ್ದರು. ಚಂದ್ರಶೇಖರ್ ಅವರು ಪ್ರಧಾನಿಯಾಗಿದ್ದ ವೇಳೆ ಈ ವಿಚಾರಗಳನ್ನು ಪ್ರಸ್ತಾಪಿಸಿದ್ದರಿಂದ ಮೀಸಲಾತಿ ಪ್ರಮಾಣ ಹೆಚ್ಚಿಸಲು ಸಾಧ್ಯವಾಗಿತ್ತು. ಈಗಲೂ ದೇವೇಗೌಡರು ಮನಸ್ಸು ಮಾಡಿದರೆ 9ನೇ ಷೆಡ್ಯೂಲ್‌ನಲ್ಲಿ ರಾಜ್ಯದ ಶೇ 56 ಮೀಸಲಾತಿ ನಮೂದಾಗುತ್ತದೆ. ದೇವೇಗೌಡರು ಸಹ ಈ ವಿಚಾರದಲ್ಲಿ ಮನಸ್ಸು ಮಾಡಬೇಕು ಎಂದು ಉಗ್ರಪ್ಪ ಮನವಿ ಮಾಡಿದರು. ಪತ್ರಿಕಾಗೋಷ್ಠಿಯಲ್ಲಿ ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ, ನಾಯಕ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಪು.ಶ್ರೀನಿವಾಸನಾಯಕ, ಸುರೇಶ್ ನಾಯಕ, ಕಂಡಕ್ಟರ್ ಚಾ.ಸಿ.ಸೋಮನಾಯಕ ರೇವತಿನಾಯಕ್, ರಾಜಪ್ಪ, ಜಯಶ್ರೀ , ಹನುಮಂತರಾಯಪ್ಪ, ಸೈಯದ್ ಎಂ.ಡಿ ಮುಜಾಯಿದ್ ಪಾಷ, ರಾಜಪ್ಪ ಇತರರು ಹಾಜರಿದ್ದರು.