ಮಹಿಳೆಯರು ತಮ್ಮ ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸಿ : ಸಚಿವ ಪುಟ್ಟರಂಗಶೆಟ್ಟಿ

ಚಾಮರಾಜನಗರ ಆ.೩೦ :- ಮಹಿಳೆಯರು ತಮ್ಮ ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸುವ ನಿಟ್ಟಿನಲ್ಲಿ ಹೆಚ್ಚಿನ ಗಮನಹರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ. ಪುಟ್ಟರಂಗಶೆಟ್ಟಿ ಹೇಳಿದರು.
ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಮೇಲ್ ಮರುವತ್ತೂರು ಆದಿಪರಾಶಕ್ತಿ ಆಧ್ಯಾತ್ಮಿಕ ಸಮಿತಿ ವತಿಯಿಂದ ಆಡುಪೂರಂ ಗಂಜಿ ಮಡಿಕೆ ಮೆರವಣಿಗೆ ಉತ್ಸವದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಚಿವ ಸಿ. ಪುಟ್ಟರಂಗಶೆಟ್ಟಿ ಭಾಗವಹಿಸಿ ಆದಿಪರಾಶಕ್ತಿ ದೇವಿಗೆ ವಿಶೇ? ಪೂಜೆ ಸಲ್ಲಿಸಿದರು.
ಬಳಿಕ ಮಾತನಾಡಿದ ಸಚಿವರು, ಮಹಿಳೆಯರು ಶ್ರದ್ಧಾ-ಭಕ್ತಿಯಿಂದ ಓಂ ಶಕ್ತಿ ತಾಯಿಯನ್ನು ಸ್ಮರಿಸಬೇಕು. ಭಕ್ತಿಯಿಂದ ಗಂಜಿ ಮಡಿಕೆ ಉತ್ಸವ ಆಚರಿಸುತ್ತಿರುವ ಎಲ್ಲರಿಗೂ ಆದಿಪರಾಶಕ್ತಿ ತಾಯಿ ಉತ್ತಮ ಆರೋಗ್ಯ ಹಾಗೂ ನೆಮ್ಮದಿ ಕರುಣಿಸಲಿ ಎಂದು ಪ್ರಾರ್ಥಿಸಿದರು.
ತಾಯಂದಿರು ತಮ್ಮ ಮಕ್ಕಳಿಗೆ ಉತ್ತಮ ಹಾಗೂ ಉನ್ನತ ಶಿಕ್ಷಣ ಕೊಡಿಸುವ ಬಗ್ಗೆ ಚಿಂತನೆ ನಡೆಸಬೇಕು. ಇಂದಿನ ದಿನಗಳಲ್ಲಿ ಮಹಿಳೆಯರು ಶಿಕ್ಷಣದ ಬಗ್ಗೆ ಹೆಚ್ಚಿನ ಆಸಕ್ತಿ ತೋರಿ ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಿದರೆ ಮಾತ್ರ ಅವರ ಭವಿ? ಉತ್ತಮವಾಗಲು ಸಾಧ್ಯ. ಮಕ್ಕಳ ಶಿಕ್ಷಣಕ್ಕೆ ಪೋ?ಕರು ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸಚಿವರು ತಿಳಿಸಿದರು.
ಈ ಸಂದರ್ಭದಲ್ಲಿ ಸಮಿತಿಯ ಸದಸ್ಯರು ಹಾಗೂ ಸಾವಿರಾರು ಸಂಖ್ಯೆಯಲ್ಲಿ ಓಂ ಶಕ್ತಿ ಮಾಲಾಧಾರಿಗಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *