ಚಾಮರಾಜನಗರ: ಕೊಳ್ಳೇಗಾಲ ತಾಲೂಕಿನ ಸತ್ತೇಗಾಲ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿಂದು ಜಿಲ್ಲಾಧಿಕಾರಿ ಶ್ರೀರೂಪಾ ಅವರು ಕಿದ್ವಾಯಿ ಮೆಮೋರಿಯಲ್ ಇನ್‌ಸ್ಟಿಟ್ಯೂಟ್ ಆಫ್ ಆಂಕಾಲಜಿಯ ಪಿಂಕ್ ಬಸ್ ಮೂಲಕ ನಡೆಯುತ್ತಿರುವ ಸ್ತನ, ಗರ್ಭಕಂಠ ಹಾಗೂ ಬಾಯಿ ಕ್ಯಾನ್ಸರ್ ಉಚಿತ ತಪಾಸಣಾ ಶಿಬಿರವನ್ನು ಉದ್ಘಾಟಿಸಿದರು.
ತಪಾಸಣಾ ಕಾರ್ಯ, ಆರೋಗ್ಯ ಇಲಾಖೆಯ ಸಿದ್ಧತೆಗಳನ್ನು ಪರಿಶೀಲಿಸಿ ಸ್ಥಳೀಯರೊಂದಿಗೆ ಸಂವಾದ ನಡೆಸಿದರು.
ಕ್ಯಾನ್ಸರ್ ಅನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚುವುದು ಜೀವ ಉಳಿಸುವ ಪ್ರಮುಖ ಹೆಜ್ಜೆ ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.
ಮಹಿಳೆಯರು ಉಚಿತ ತಪಾಸಣೆಯ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಅವರು ಸಲಹೆ ನೀಡಿದರು.
ಆರಂಭಿಕ ತಪಾಸಣೆ – ಆರೋಗ್ಯಕರ ಬದುಕಿನ ಭರವಸೆಯಾಗಿದ್ದುಪ್ರತಿಯೊಬ್ಬ ಮಹಿಳೆಯೂ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕೆಂದು ಜಿಲ್ಲಾಧಿಕಾರಿ ಶ್ರೀ ರೂಪ ಅವರು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಎಸ್.ರಾಜೇಶ್ ಕುಮಾರ್ ,ತಹಶಿಲ್ದಾರರಾದ ಬಸವರಾಜು ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.