ಚಾಮರಾಜನಗರ.ಮಾರ್ಚ್ 17(ಕರ್ನಾಟಕ ವಾರ್ತೆ)ಕರ್ನಾಟಕ ಜಾನಪದ ಅಕಾಡೆಮಿಯು ಹಾವೇರಿಯ ಗೊಟಗೋಡಿಯ ಜಾನಪದ ವಿಶ್ವವಿದ್ಯಾನಿಲಯ ಸಹಯೋಗದೊಂದಿಗೆ ಗಿರಿಜನ ಉಪಯೋಜನೆಯಡಿ ಕನ್ನಡ ಸಾಹಿತ್ಯ ಮತ್ತು ಸಾಂವಿಧಾನಿಕ ಮೌಲ್ಯಗಳು ಎಂಬ ಹೆಸರಿನಲ್ಲಿ ಮೂರು ದಿನಗಳ ಕಮ್ಮಟವನ್ನು ಏಪ್ರಿಲ್ 21,22,ಮತ್ತು 23 ರಂದು ಹಾವೇರಿಯ ಜಾನಪದ ವಿಶ್ವವಿದ್ಯಾನಿಲಯದಲ್ಲಿ ಆಯೋಜಿಸಿದ್ದು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತಿ ಇರುವ 21 ರಿಂದ 45 ವಯಸ್ಸಿನ ಪರಿಶಿಷ್ಠ ಪಂಗಡಕ್ಕೆ ಸೇರಿದ ರಾಜ್ಯದ ಎಲ್ಲ ಭಾಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಗೆ ಏಪ್ರಿಲ್ 5 ಕಡೆಯ ದಿನವಾಗಿದೆ.ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಸಾಹಿತ್ಯ ಅಕಾಡೆಮಿಯ ವೆಬ್ ಸೈಟ್ https://karnatakasahityaacademy.orgಇಂದ ಅರ್ಜಿ ನಮೂನೆ ಹಾಗೂ ವಿವರಗಳನ್ನು ಪಡೆಯಬಹುದೆಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.