ಮೈಸೂರು: ಸುವರ್ಣ ಬೆಳಕು ಫೌಂಡೇಷನ್ ವತಿಯಿಂದ ಇಂದು ವಿಶ್ವ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಪರಿಸರ ಸಂರಕ್ಷಣೆ ಹಾಗೂ ಹಸಿರು ವಾತಾವರಣ ನಿರ್ಮಾಣದ ಸಂದೇಶ ಸಾರುವ ಉದ್ದೇಶದಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ಗಿಡ ನೆಡುವುದು ಹಾಗೂ ಪರಿಸರದ ಮಹತ್ವದ ಕುರಿತು ಜಾಗೃತಿ ಮೂಡಿಸುವ ಕಾರ್ಯ ನಡೆಯಿತು. ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ ಎಂಬ ಸಂದೇಶವನ್ನು ಕಾರ್ಯಕ್ರಮದ ಮೂಲಕ ನೀಡಲಾಯಿತು.
ಕಾರ್ಯಕ್ರಮದಲ್ಲಿ ಸುವರ್ಣ ಬೆಳಕು ಫೌಂಡೇಷನ್ ಅಧ್ಯಕ್ಷ ಮಹೇಶ್, ಮಂಜುನಾಥ್, ರಾಜು, ರಾಮಚಂದ್ರ ಹಾಗೂ ಗುರು ಬಸಯ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.
“ಗಿಡ ಬೆಳಸಿ – ಪರಿಸರ ಉಳಿಸಿ” ಎಂಬ ಸಂದೇಶದೊಂದಿಗೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.