ಸ್ವಚ್ಚತಾ ಹಿ ಸೇವಾ ಆಂದೋಲನಕ್ಕೆ ಜಿ.ಪಂ ಸಿಇಒ ಮೋನಾ ರೋತ್ ಚಾಲನೆ

ಚಾಮರಾಜನಗರ: ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಸಹಯೋಗದೊಂದಿಗೆ ಸ್ವಚ್ಛತಾ ಹಿ ಸೇವಾ 2026 ಆಂದೋಲನಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅವರು ಚಾಲನೆ ನೀಡಿದರು. 


ಚಾಮರಾಜನಗರ ತಾಲೂಕು ಪಂಚಾಯತ್ ಸಭಾಂಗಣದಲ್ಲಿಂದು ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಸಸಿ ನೆಡುವ ಮೂಲಕ ಸ್ವಚ್ಚತಾ ಹೀ ಸೇವಾ ಆಂದೋಲನಕ್ಕೆ ಚಾಲನೆ ನೀಡಿದರು.

ಇದೇ ವೇಳೆ ಮಾತನಾಡಿದ ಅವರು ಇಂದಿನಿಂದ ಅಕ್ಟೋಬರ್ 2ರವರೆಗೆ ಸ್ವಚ್ಚತೆಯಲ್ಲಿ ಸಹಭಾಗಿತ್ವ ಸ್ವಚ್ಚ ಭಾರತ ವಿಕಸಿತ ಭಾರತ ಎಂಬ ಘೋಷ ವಾಕ್ಯದೊಂದಿಗೆ ಅಭಿಯಾನ ಆಚರಿಸಲಾಗುತ್ತಿದೆ. ಅನೈರ್ಮಲ್ಯ ಮತ್ತು ಸಮಸ್ಯಾತ್ಮಕ ಕಸದ ತಾಣಗಳನ್ನು ತೆರವುಗೊಳಿಸುವತ್ತ ಗಮನಹರಿಸುವ ಬೃಹತ್ ಸ್ವಚ್ಚತಾ ಅಭಿಯಾನ, ನೈರ್ಮಲ್ಯ ಕಾರ್ಮಿಕರ ಕೊಡುಗೆಯನ್ನು ಗುರುತಿಸಿ ಸಂಪೂರ್ಣ ಸ್ವಚ್ಚತೆಗೆ ನಮ್ಮ ಬದ್ದತೆಯನ್ನು ಪುನರುಚ್ಚರಿಸಬೇಕು ಎಂದರು.

ಜಿಲ್ಲೆ, ತಾಲೂಕು ಮತ್ತು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸ್ವಚ್ಚತಾ ಕಸದ ಸ್ಥಳಗಳನ್ನು ಗುರುತಿಸಬೇಕು. ಸಫಾಯಿ ಮಿತ್ರ ಸುರಕ್ಷಾ ಶಿಬಿರಗಳ ಆಯೋಜನೆ, ಸ್ವಚ್ಚ ಹಸಿರು ಉತ್ಸವ ಆಚರಣೆ, ಶ್ರಮದಾನ, ಇನ್ನಿತರ ಕ್ರಿಯಾಶೀಲ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸರ್ವರು ಸಹಕರಿಸಬೇಕು ಎಂದು ಜಿಲ್ಲ ಆಪಂಚಾಯತ್ ಮುಖ್ಯ ಕಾರ್ಯನಿರ್ವಹಕ ಅಧಿಕಾರಿ ಮೋನಾ ರೋತ್ ಅವರು ತಿಳಿಸಿದರು.

ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಡಿ.ಸಿ ಶೃತಿ ಅವರು ಸ್ವಚ್ಛತಾ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.

ಜಿಲ್ಲಾ ಪಂಚಾಯತ್ ಸಹಾಯಕ ಕಾರ್ಯದರ್ಶಿ ಶ್ರೀಕಂಠರಾಜೇಅರಸ್, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಗಿರಿಧರ್, ಸಹಾಯಕ ನಿರ್ದೇಶಕರಾದ ಪ್ರಕಾಶ್ ಕುಮಾರ್, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *