ಚಾಮರಾಜನಗರ: ಜನರಿಗೆ ಆದ್ಯತೆಯ ಮೇರೆಗೆ ವಿಬಿ ಜೀ ರಾಮ್ ಜೀ ಯೋಜನೆಯಡಿ ಉದ್ಯೋಗ ನೀಡಬೇಕು. ಮಾನವ ದಿನಗಳು ಶೂನ್ಯವಾಗದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಚಾಮರಾಜನಗರದ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿಬಿ ಜೀ ರಾಮ್ ಜೀ ಯೋಜನೆಯು ಗ್ರಾಮೀಣ ಉದ್ಯೋಗದ ವ್ಯವಸ್ಥೆಯನ್ನು ಗ್ರಾಮ ಮಟ್ಟದಿಂದ ಬಲಪಡಿಸುವ ಗುರಿ ಹೊಂದಿದೆ. ಪಾರದರ್ಶಕತೆ ಹಾಗೂ ಗ್ರಾಮೀಣ ಜನರ ಸಬಲೀಕರಣಕ್ಕೆ ಒತ್ತು ನೀಡುತ್ತಿರುವುದರಿಂದ ಅಕುಶಲ ಕೆಲಸ ನಿರ್ವಹಿಸಿದ ಕಾರ್ಮಿಕರಿಗೆ ಕೂಲಿ ಪಾವತಿಸಲು ವಿಳಂಬ ಮಾಡಿದರೆ ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ಪ್ರಸ್ತುತ ಜನರಿಗೆ ಕೂಲಿ ಅವಶ್ಯಕವಾಗಿದ್ದು, ಜನರಿಗೆ ಉದ್ಯೋಗವನ್ನು ನೀಡಬೇಕು. ಪ್ರತಿ ಗ್ರಾಮ ಪಂಚಾಯತಿಯಲ್ಲಿಯೂ ಕನಿ? ೧೦೦ ಜನರು ಕೆಲಸ ಮಾಡುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.
ಗ್ರಾಮ ಪಂಚಾಯಿತಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು. ಜಲ್ ಜೀವನ್ ಮಿ?ನ್ ಯೋಜನೆಯನ್ನು ಎಲ್ಲಾ ಗ್ರಾಮಗಳಲ್ಲಿ ಅನು?ನಗೊಳಿಸಬೇಕು. ವಸತಿ ಯೋಜನೆಯಲ್ಲಿ ಯಾವುದೇ ಲೋಪಗಳಿಗೆ ಅವಕಾಶವಾಗಬಾರದು ಎಂದರು.
ಸ್ವಚ್ಚತಾ ಹೀ ಸೇವಾ ಆಂದೋಲನವನ್ನು ಯಶಸ್ವಿಯಾಗಿ ನಿರ್ವಹಿಸುವಂತೆ ಇದೇ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅವರು ಹೇಳಿದರು.
ಮುಖ್ಯ ಲೆಕ್ಕಾಧಿಕಾರಿ ಮಹೇಂದ್ರ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಸ್. ಗಿರಿಧರ್, ಸಹಾಯಕ ನಿರ್ದೇಶಕರಾದ ಪ್ರಕಾಶ್ ಕುಮಾರ್, ಸಹಾಯಕ ಲೆಕ್ಕಾಧಿಕಾರಿ ಪ್ರಭುಸ್ವಾಮಿ, ತಾಲ್ಲೂಕು ಯೋಜನಾಧಿಕಾರಿ ಕಿರಣ್ ಕುಮಾರ್, ಇತರರು ಸಭೆಯಲ್ಲಿ ಉಪಸ್ಥಿತರಿದ್ದರು.
