ಅ.1 ರಂದು ಹುಬ್ಬಳ್ಳಿಯಲ್ಲಿ ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ, ಅಭಿನಂದನಾ ಸಮಾರಂಭ: ಕುಮಾರ್ ಉಪ್ಪಾರ್

ಚಾಮರಾಜನಗರ: ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾವು ಉಪ್ಪಾರ ಸಮಾಜದ ಸಮಸ್ತ ಗುರು ಹಿರಿಯರ ಆಶೀರ್ವಾದದೊಂದಿಗೆ ಹುಬ್ಬಳ್ಳಿಯ ಅಮರಗೋಳದಲ್ಲಿ ಅ. 1 ರಂದು ಭಾನುವಾರ ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ, ಉಪ್ಪಾರ ಸಮಾಜ ಮಾಜಿ ಸಚಿವರು ಹಾಗೂ ಹಾಲಿ ಶಾಸಕರಾದ ಸಿ.ಪುಟ್ಟರಂಗಶೆಟ್ಟರು ಅವರಿಗೆ ಅಭಿನಂದನಾ ಸಮಾರಂಭವನ್ನು ಅಯೋಜಿಸಲಾಗಿದೆ ಎಂದು ಉಪ್ಪಾರ ಮಹಾಸಭಾದ ರಾಜ್ಯ ಉಪಾಧ್ಗಕ್ಷ  ಕುಮಾರ್ ಉಪ್ಪಾರ್ ತಿಳಿಸಿದರು.

ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಹುಬ್ಬಳಿಯ ಅಮರಗೋಳದ  ವಿದ್ಯಾಧಿರಾಜ ಭವನ ಕಲ್ಯಾಣ ಮಂಟಪದಲ್ಲಿ ಅಂದು ಬೆಳಿಗ್ಗೆ ೧೦ಕ್ಕೆ ಕಾರ್ಯಕ್ರಮ ಉದ್ಘಾಟನೆಯಾಗಲಿದೆ.   ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಇಲಾಖೆಯ ಸಚಿವರಾದ ಸತೀಶ್ ಜಾರಕಿ,  ಹಿಂದುಳಿದ ವರ್ಗಗಳ ಇಲಾಖೆಯ ಸಚಿವರಾದ ಶಿವರಾಜ್ ತಂಗಡಗಿ  ಹಾಗೂ  ಜನಪ್ರತಿಗಳು, ಸಮಾಜದ ಮುಖಂಡರುಗಳು ಭಾಗವಹಿಸಲಿದ್ದಾರೆ. ೨೦೨೨-೨೩ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಶೇ. ೮೦ ರಷ್ಠು, ಅಧಿಕ ಅಂಕಗಳಿಸಿರುವ  ವಿದ್ಯಾರ್ಥಿಗಳಿಗೆ ಮತ್ತು ಶೈಕ್ಷಣಿಕ ವರ್ಷದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಮಾಜದ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಅಯೋಜಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಮುದಾಯದ ಮುಖಂಡರು, ವಿದ್ಯಾರ್ಥಿಗಳು ಭಾಗವಹಿಸಿ ಯಶ್ವಸಿಗೊಳಿಸಿಕೊಡಬೇಕು ಎಂದು ಮನವಿ ಮಾಡಿದರು.

ಈಗಾಗಲೇ 1350 ಕ್ಕೂ ಹೆಚ್ಚು ವಿದ್ಯಾರ್ಥಿಗಳು ನೋಂದಣಿ ಮಾಡಿಸಿದ್ದಾರೆ. ಅದರಲ್ಲಿ 280 ವಿದ್ಯಾರ್ಥಿಗಳು ನೋಂದಣಿ ಮಾಡಿಸಿದ್ದಾರೆ.
ವಿಶೇಷ ಸೂಚನೆ : ವಿದ್ಯಾರ್ಥಿಗಳು ಕಾರ್ಯಕ್ರಮಕ್ಕೆ ಬರುವಾಗ ಅಂಕಪಟ್ಟಿ, ಜಾತಿ ಪ್ರಮಾಣಪತ್ರ, ಆಧಾರ್‌ಕಾರ್ಡ್ನ ಜೆರಾಕ್ಸ್ ಪ್ರತಿಯನ್ನು ತರುವಂತೆ ತಿಳಿಸಿದ್ದಾರೆ.     ಪತ್ರಿಕಾಗೋಷ್ಠಿಯಲ್ಲಿ   ರಾಜ್ಯ ಉಪ್ಪಾರ ಎಸ್ಟಿ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಬಾಗಳಿರೇವಣ್ಣ, ಮಹಿಳಾ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ   ಲಕ್ಷ್ಮೀರಂಗರಾಮು  ಸಂಘಟನಾ ಕಾರ್ಯದರ್ಶಿ ಮಹದೇವಸ್ವಾಮಿ ಸಾಗಡೆ ಹಾಜರಿದ್ದರು.

Leave a Reply

Your email address will not be published. Required fields are marked *