ಚಾಮರಾಜನಗರ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಜೆಎಸ್ಎಸ್ ಮಹಾ ವಿದ್ಯಾಪೀಠ, ಜೆಎಸ್.ಎಸ್. ಮಹಿಳಾ ಪದವಿ ಕಾಲೇಜು ಸಹಯೋಗದಲ್ಲಿ ಮಹಿಳಾ ಕಾನೂನುಗಳ ಕುರಿತು ಕಾನೂನು ಅರಿವು ಕಾರ್ಯಕ್ರಮವನ್ನು ಅಕ್ಟೋಬರ್ 18ರಂದು ಬೆಳಿಗ್ಗೆ 10.15 ಗಂಟೆಗೆ ಚಾಮರಾಜನಗರ ಜೆ.ಎಸ್.ಎಸ್. ಮಹಿಳಾ ಪದವಿ ಕಾಲೇಜಿನಲ್ಲಿ ಏರ್ಪಡಿಸಲಾಗಿದೆ.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಬಿ.ಎಸ್. ಭಾರತಿ ಅವರು ಕಾರ್ಯಕ್ರಮ ಉದ್ಘಾಟಿಸುವರು. ಜೆ.ಎಸ್.ಎಸ್. ಮಹಿಳಾ ಪದವಿ ಕಾಲೇಜಿನ ಪ್ರಾಂಶುಪಾಲರಾದ ಜಿ. ಸಿದ್ದರಾಜು ಅವರು ಅಧ್ಯಕ್ಷತೆ ವಹಿಸುವರು.
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಉಮ್ಮತ್ತೂರು ಇಂದುಶೇಖರ್, ಜೆ.ಎಸ್.ಎಸ್. ಶಿಕ್ಷಣ ಸಂಸ್ಥೆಗಳ ಸಾರ್ವಜನಿಕ ಸಂಪರ್ಕ ಅಧಿಕಾರಿ ಆರ್.ಎಂ. ಸ್ವಾಮಿ, ಜೆ.ಎಸ್.ಎಸ್. ಮಹಿಳಾ ಪದವಿ ಕಾಲೇಜಿನ ರಾಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಎ.ಆರ್. ಸುಷ್ಮಾ ಜಿಲ್ಲಾ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಎನ್.ಕೆ. ವಿರೂಪಾಕ್ಷಸ್ವಾಮಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.