ಚಾಮರಾಜನಗರ: ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಇದುವರೆಗೂ ಹೆಸರನ್ನು ಸೇರಿಸದೇ ಇದ್ದಲ್ಲಿ ನಿಗದಿತ ನಮೂನೆ-19ರಲ್ಲಿ ಅರ್ಜಿ ಸಲ್ಲಿಸಲು ಅಕ್ಟೋಬರ್ 26 ಹಾಗೂ ಅಕ್ಟೋಬರ್ 30 ರಂದು ವಿಶೇಷ ಆಂದೋಲನ ನಡೆಸಲಾಗುತ್ತಿದೆ.
ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ತಯಾರಿಸುವ ಸಂಬಂಧ ಜಿಲ್ಲೆಯ ಶಿಕ್ಷಣ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅರ್ಹ ಶಿಕ್ಷಕರಿಂದ ನಮೂನೆ-19ರಲ್ಲಿ ಆಯಾ ತಾಲೂಕು ಕೇಂದ್ರದಲ್ಲಿನ ತಹಶೀಲ್ದಾರ್ ಕಚೇರಿಯಲ್ಲಿ ಅರ್ಜಿ ಸ್ವೀಕರಿಸಲಾಗುತ್ತಿದೆ. ಅರ್ಜಿ ಸಲ್ಲಿಕೆಗೆ ನವೆಂಬರ್ 6 ಕೊನೆಯ ದಿನವಾಗಿದೆ.
ಜಿಲ್ಲೆಯ ಶೈಕ್ಷಣಿಕ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅರ್ಹ ಶಿಕ್ಷಕರು ತಮ್ಮ ಹೆಸರನ್ನು ಮತದಾರರ ಪಟ್ಟಿಗೆ ನೋಂದಾಯಿಸುವಂತೆ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.