ಚಾಮರಾಜನಗರ: ಕಾಂಗ್ರೆಸ್ ಸೇವಾ ದಳದ ರಾಜ್ಯಮಟ್ಟದ ಶತಮಾನೋತ್ಸವ ಕಾರ್ಯಕ್ರಮ ಅ. 29 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದ್ದು, ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸೇವಾ ದಳದ ಪದಾಧಿಕಾರಿಗಳು ಭಾಗವಹಿಸುವಂತೆ ರಾಜ್ಯ ಸೇವಾ ದಳದ ಅಧ್ಯಕ್ಷ ಎಂ. ರಾಮಚಂದ್ರ ಮನವಿ ಮಾಡಿದರು.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಇಂದು ನಡೆದ ಜಿಲ್ಲಾ ಮಟ್ಟದ ಸೇವಾ ದಳಗ ಪದಾಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಬ್ರಿಟೀಷರ ವಿರುದ್ದ ಹೋರಾಟ ಹಾಗೂ ಸ್ವಾತಂತ್ರ್ಯಕ್ಕಾಗಿ 1923ರಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಸೇವಾದಳ ಸ್ಥಾಪನೆಯಾಯಿತು.
ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ನಾರಾಯಣ್ ಸುಬ್ಬರಾವ್ ಹಡೇಗರ್ ಅವರು ಸೇವಾದಳವನ್ನು ಸ್ಥಾಪನೆ ಮಾಡಿದ್ದರು. ಈಗ ಸೇವಾ ದಳಕ್ಕೆ 100 ವರ್ಷಗಳು ಪೂರ್ಣಗೊಂಡಿದ್ದು, ಈ ಕಾರ್ಯಕ್ರಮದಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜನೆ ಮಾಡಲಾಗಿದೆ. ಈ ಕಾರ್ಯಕ್ರಮಕ್ಕೆ ಸೇವಾದಳದ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನಖರ್ಗೆ, ಯುವ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ರಾಜ್ಯ ಮತ್ತು ರಾಷ್ಟ್ರದ ವರಿಷ್ಟು ಭಾಗವಹಿಸಲಿದ್ದಾರೆ. ರಾಜ್ಯ ಸರ್ಕಾರದ ಸಚಿವರುಗಳು, ರಾಜ್ಯದ ಎಲ್ಲಾ ಕಾಂಗ್ರೆಸ್ ಶಾಸಕರು ಮತ್ತು ಎಲ್ಲಾ ಜಿಲ್ಲೆಗಳ ಡಿಸಿಸಿ ಅಧ್ಯಕ್ಷರು, ಪದಾಧಿಕಾರಿಗಳು ಸೇವಾ ದಳದ ಅಧ್ಯಕ್ಷರು ಮತ್ತುಪದಾಧಿಕಾರಿಗಳು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಚಾಮರಾಜನಗರ ಜಿಲ್ಲೆಯಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಮುಖಂಡರು ಭಾಗವಹಿಸಬೇಕು. ಖುದ್ದಾಗಿ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿ, ಆಹ್ವಾನ ನೀಡಲು ನಿಮ್ಮ ಜಿಲ್ಲಗೆ ಬಂದಿರುವುದಾಗಿ ರಾಮಚಂದ್ರ ತಿಳಿಸಿದರು.
ಶಾಸಕರಾದ ಎ.ಆರ್. ಕೃಷ್ಣಮೂರ್ತಿ, ಸಿ. ಪುಟ್ಟರಂಗಶೆಟ್ಟಿ ಮಾತನಾಡಿ, ಸೇವಾದಳ ಕಾಂಗ್ರೆಸ್ ಪಕ್ಷದ ಪ್ರತಿಯೊಬ್ಬರ ಕಾರ್ಯಕರ್ತರು ಹಾಗೂ ಮುಖಂಡರಲ್ಲಿ ಶಿಸ್ತು ರೂಪಿಸುವಲ್ಲಿ ಶ್ರಮಿಸುತ್ತಿದೆ. ಸೇವಾದಳದ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಇದ್ದರೆ ಒಂದು ರೀತಿಯ ಮೆರುಗು ತರುತ್ತದೆ. ಸೇವಾದಳದ ಶತಮಾನೋತ್ಸವ ಕಾರ್ಯಕ್ರಮಕ್ಕೆ ನಮ್ಮ ಕ್ಷೇತ್ರದಿಂದಲ್ಲು ಹೆಚ್ಚಿನ ಕಾರ್ಯಕರ್ತರು ತೆರಳುವಂತೆ ವ್ಯವಸ್ಥೆ ಮಾಡುವುದಾಗಿ ತಿಳಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ. ಮರಿಸ್ವಾಮಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಸೇವಾದಳದ ರಾಜ್ಯಾಧ್ಯಕ್ಷರಾದ ರಾಮಚಂದ್ರ ಅವರು ನಮ್ಮ ಜಿಲ್ಲೆಗೆ ಆಗಮಿಸಿ ಸೇವಾದಳದ ಪದಾಧಿಕಾರಿಗಳ ಪೂರ್ವಭಾವಿ ಸಭೆ ನಡೆಸಿ, ಸೇವಾದಳದ ಇತಿಹಾಸ ಮತ್ತು ಸಮಾರಂಭದ ಕುರಿತು ಮಾಹಿತಿ ನೀಡಿದ್ದಾರೆ. ಅವರ ಆಹ್ವಾನದಂತೆ ಜಿಲ್ಲೆಯ ಎಂಟು ಬ್ಲಾಕ್‍ನಿಂದಳು ಸೇವಾದಳದ ಪದಾಧಿಕಾರಿಗಳೊಂದಿಗೆ ಪಕ್ಷದ ಕಾರ್ಯಕರ್ತರು ಬೆಂಗಳೂರಿಗೆ ಹೋಗಬೇಕು ಎಂದು ಮನವಿ ಮಾಡಿದರು.
ಜಿಲ್ಲಾ ಸೇವಾದಳದ ಅಧ್ಯಕ್ಷ ಹೊಂಗನೂರು ಜಯರಾಜ್ ಪ್ರಸ್ತಾವಿಕವಾಗಿ ಮಾತನಾಡಿ, ಜಿಲ್ಲೆಯಲ್ಲಿ ಸೇವಾದಳವನ್ನು ಸಂಘಟನೆ ಮಾಡುವ ಜೊತೆಗೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಲ್ಲಿ ಶಿಸ್ತು,ಸಂಯಮ ಹಾಗೂ ಕಾಂಗ್ರೆಸ್ ತತ್ವ ಸಿದ್ದಾಂತಗಳ ಬಗ್ಗೆ ಅರಿವು ಮುಡಿಸುವುದು, ಕಾಂಗ್ರೆಸ್ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಹಾಗೂ ರಾಷ್ಟ್ರಗೀತೆಗಳನ್ನು ಹಾಡುವ ಮೂಲಕ ದೇಶಕ್ಕೆ ಗೌರವ ನೀಡುವುದು. ಮತ್ತು ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಲುವುದಾಗಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಸೇವಾದಳದ ರಾಜ್ಯಾಧ್ಯಕ್ಷ ಎಂ. ರಾಮಚಂದ್ರ, ಉಪಾಧ್ಯಕ್ಷ ಜಾಕೀರ್ ಹುಸೇನ್, ರಾಜ್ಯ ಪ್ರಧಾನಕಾರ್ಯದರ್ಶಿ ರಮೇಶ್, ರಾಜ್ಯ ಕಾರ್ಯದರ್ಶಿ ಶಿವಣ್ಣ ಅವರನ್ನು ಜಿಲ್ಲಾ ಸೇವಾದಳದಿಂದ ಸನ್ಮಾನಿಸಲಾಯಿತು.
ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆ. ರವಿಕುಮಾರ್, ಪ್ರಧಾನ ಕಾರ್ಯದರ್ಶಿಗಳಾದ ಚಿಕ್ಕಮಹದೇವ್, ಆರ್. ಮಹದೇವ್, ಬ್ಲಾಕ್ ಅಧ್ಯಕ್ಷರಾದ ಎ.ಎಸ್. ಗುರುಸ್ವಾಮಿ, ಮಹಮದ್ ಅಸ್ಗರ್, ತೋಟೇಶ್, ಜಿಲ್ಲಾ ಸೇವಾದಳದ ಉಪಾಧ್ಯಕ್ಷ ದೊಡ್ಡರಾಯಪೇಟೆ ಮೂರ್ತಿ, ತಾಲೂಕು ಅಧ್ಯಕ್ಷ ಶೇಷಣ್ಣ, ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ, ಸಹ ಕಾರ್ಯದರ್ಶಿ ಲಿಂಗಯ್ಯ, ಗುಂಡ್ಲುಪೇಟೆ ಬ್ಲಾಕ್ ಅಧ್ಯಕ್ಷ ಅಂಕಹಳ್ಳಿ ಮಹೇಂದ್ರ, ಬೇಗೂರು ಬ್ಲಾಕ್ ಅಧ್ಯಕ್ಷ ಹರವೆ ನಾಗೇಶ್, ಹನೂರು ಕೃಷ್ನ, ರಾಜು, ಕೊಳ್ಳೇಗಾಲದ ಸುರೇಶ್, ಚುಡಾ ಮಾಜಿ ಅಧ್ಯಕ್ಷ ಸುಹೇಲ್ ಆಲಿಖಾನ್, ಎಎಚ್‍ಎನ್ ಖಾನ್, ನಗರಸಭೆ ಸದಸ್ಯರಾದ ಚಿನ್ನಮ್ಮ, ನೀಲಮ್ಮ, ಜಿಲ್ಲಾ ಪತ್ರಿಕಾ ವಕ್ತಾರ ಅರುಣಕುಮಾರ್ ಮೊದಲಾದವರು ಇದ್ದರು.