ಚಾಮರಾಜನಗರ: ಭಾರತೀಯ ವಾಯುದಳದಲ್ಲಿ ಅಗ್ನಿಪತ್ ಯೋಜನೆಯಡಿ ಅಗ್ನಿವೀರ್ ವಾಯು ಪ್ರವೇಶಕ್ಕೆ ಭಾರತೀಯ ಅರ್ಹ ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ತಾಂತ್ರಿಕ ಮತ್ತು ತಾಂತ್ರಿಕೇತರ ಕ್ಷೇತ್ರದಲ್ಲಿ ಸೇವೆ ಸಲ್ಲಿಸಲು ಆನ್ಲೈನ್ ಮೂಲಕ ಆಯ್ಕೆ ಪರೀಕ್ಷೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ೨೦೦೩ರ ಜೂನ್ ೨೭ ರಿಂದ ೨೦೦೬ರ ಡಿಸೆಂಬರ್ ೨೭ರ ನಡುವೆ ಜನಿಸಿರಬೇಕು. (ಎರಡು ದಿನಾಂಕಗಳನ್ನು ಒಳಗೊಂಡಂತೆ). ಪಿಯುಸಿ ತೇರ್ಗಡೆ ಹೊಂದಿದ್ದು, ಪಿಯುಸಿಯಲ್ಲಿ ಗಣಿತ, ಭೌತಶಾಸ್ತ್ರ, ಇಂಗ್ಲೀಷ್ ವಿಷಯಗಳಲ್ಲಿ ಕನಿಷ್ಠ ಶೇ. ೫೦ರಷ್ಟು ಅಂಕ ಪಡೆದಿರಬೇಕು. ಇಂಗ್ಲೀಷ್ನಲ್ಲಿ ಶೇ.೫೦ರಷ್ಟು ಅಂಕಗಳೊಂದಿಗೆ ತೇರ್ಗಡೆ ಅಥವಾ ೩ ವರ್ಷದ ಡಿಪ್ಲೊಮಾದಲ್ಲಿ ತೇರ್ಗಡೆ ಹೊಂದಿರಬೇಕು. ಅದರಲ್ಲಿ ಕನಿಷ್ಠ ಶೇ. ೫೦ರಷ್ಟು ಅಂಕಗಳೊಂದಿಗೆ ತೇರ್ಗಡೆ ಮತ್ತು ಇಂಗ್ಲೀಷ್ನಲ್ಲಿ ಶೇ.೫೦ರಷ್ಟು ಅಂಕಗಳೊಂದಿಗೆ ತೇರ್ಗಡೆ ಹೊಂದಿರಬೇಕು ಅಥವಾ ಎರಡು ವರ್ಷಗಳ ವೃತ್ತಿಪರ ಶಿಕ್ಷಣದಲ್ಲಿ ಗಣಿತ, ಭೌತಶಾಸ್ತ್ರ ವಿಷಯಗಳಲ್ಲಿ ಕನಿಷ್ಠ ಶೇ.೫೦ರಷ್ಟು ಅಂಕ ಪಡೆದಿರಬೇಕು. ಇಂಗ್ಲೀಷ್ನಲ್ಲಿ ಕನಿಷ್ಠ ಶೇ.೫೦ರಷ್ಟು ಅಂಕಗಳೊಂದಿಗೆ ತೇರ್ಗಡೆ ಹೊಂದಿರಬೇಕು.
ವಿಜ್ಞಾನೇತರ ವಿಷಯದಲ್ಲಿ ಪಿಯುಸಿಯಲ್ಲಿ ಯಾವುದೇ ವಿಷಯದಲ್ಲಿ ಕನಿಷ್ಠ ಶೇ. ೫೦ರಷ್ಟು ಅಂಕ ಪಡೆದಿರಬೇಕು. ಇಂಗ್ಲೀಷ್ನಲ್ಲಿ ಶೇ.೫೦ರಷ್ಟು ಅಂಕಗಳೊಂದಿಗೆ ತೇರ್ಗಡೆ ಹೊಂದಿರಬೇಕು. ಪುರುಷ ಅಭ್ಯರ್ಥಿಗಳಾಗಿದ್ದಲ್ಲಿ ೧೫೨.೫ ಸೆಂ.ಮೀ ಎತ್ತರ, ತೂಕ ಎತ್ತರಕ್ಕೆ ಅನುಗುಣವಾಗಿ ಇರಬೇಕು. ಮಹಿಳಾ ಅಭ್ಯರ್ಥಿಗಳಾಗಿದ್ದಲ್ಲಿ ೧೫೨ ಸೆಂ.ಮೀ ಎತ್ತರ, ತೂಕ ಎತ್ತರಕ್ಕೆ ಅನುಗುಣವಾಗಿ ಇರಬೇಕು. ಅರ್ಜಿ ಶುಲ್ಕ ೨೫೦ ರೂ.ಗಳಾಗಿವೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಆಗಸ್ಟ್ ೧೭ ಕಡೆಯ ದಿನವಾಗಿದೆ. ಅರ್ಜಿಗಳನ್ನು ವೆಬ್ ಸೈಟ್ ನಲ್ಲಿ ಸಲ್ಲಿಸಬೇಕು. ವಿವರಗಳಿಗೆ ಸದರಿ ವೆಬ್ ಸೈಟ್ ನೋಡಬಹುದು. ಆನ್ಲೈನ್ ಪರೀಕ್ಷೆಯು ಅಕ್ಟೋಬರ್ ೧೩ರಿಂದ ಪ್ರಾರಂಭವಾಗಲಿದೆ.
ಹೆಚ್ಚಿನ ಮಾಹಿತಿಗಾಗಿ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ (ದೂ.ಸಂ ೦೮೨೨೬-೨೨೪೪೩೦) ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಎ. ಮಹಮದ್ ಅಕ್ಬರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.