ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಉಚಿತ ತರಬೇತಿ ಶಿಬಿರ

ಬಿಳಿಗೆರೆ : ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳ ಮುಂದಿನ ಪರೀಕ್ಷಾ ಹಿತದೃಷ್ಠಿಯಿಂದ ಅನ್ವೇಷಣಾ ಶಿಕ್ಷಣ ಸಂಸ್ಥೆಯು ಇಂಗ್ಲೀಷ್ ಮತ್ತು ಗಣಿತ ವಿಷಯಗಳ ತರಬೇತಿ ಶಿಬಿರವನ್ನು ಆಯೋಜಿಸಿದೆ.

ಇಂಗ್ಲೀಷ್ ಮತ್ತು ಗಣಿತ ವಿಷಯಗಳ ಪರಿಣತರಿಂದ ನವೆಂಬರ್ 19 ರ ಭಾನುವಾರದಂದು ಹತ್ತನೇ ತರಗತಿ ವಿದ್ಯಾರ್ಥಿಗಳು ತಮ್ಮ ಪರೀಕ್ಷೆಯನ್ನು ಎದುರಿಸಲು ಸಹಾಯಕವಾಗುವಂತೆ ಉಚಿತ ತರಬೇತಿ ಶಿಬಿರವನ್ನು ಹಮ್ಮಿಕೊಂಡಿದೆ. ಆಸಕ್ತ ವಿದ್ಯಾರ್ಥಿಗಳು ಇದರ ಉಪಯೋಗ ಪಡೆದುಕೊಳ್ಳುವಂತೆ ಅನ್ವೇಷಣಾ ಸಂಸ್ಥೆಯು ತಿಳಿಸಿದೆ.

ತರಬೇತಿ ಶಿಬಿರದಲ್ಲಿ ಭಾಗವಹಿಸಲು ಆಸಕ್ತಿ ಇರುವ ವಿದ್ಯಾರ್ಥಿಗಳು ಮೊಬೈಲ್ ಸಂಖ್ಯೆ : 9901136782, 8495098544 ಅನ್ನು ಸಂಪರ್ಕಿಸಬಹುದು.

Leave a Reply

Your email address will not be published. Required fields are marked *