ಚಾಮರಾಜನಗರ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವು ಕೇಂದ್ರ ಲೋಕ ಸೇವಾ ಆಯೋಗವು ನಡೆಸುವ ಐಎಎಸ್ ಹಾಗೂ ಕರ್ನಾಟಕ ಲೋಕ ಸೇವಾ ಆಯೋಗವು ನಡೆಸುವ ಕೆಎಎಸ್ ಸ್ಪಾರ್ಧಾತ್ಮಕ ಪರೀಕ್ಷೆಗಳ ತರಬೇತಿ ನೀಡಲಿದ್ದು ಆಸಕ್ತರು ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ.
ತರಬೇತಿಯು ಮೈಸೂರಿನ ಮುಕ್ತ ವಿವಿ ಕೇಂದ್ರ ಕಚೇರಿಯಲ್ಲಿ 50 ದಿನಗಳವರೆಗೆ ನಡೆಯಲಿದೆ. ಆಸಕ್ತರು ನವೆಂಬರ್ 24 ರೊಳಗಾಗಿ ಹೆಸರು ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ 0821-2515944 ಸಂಪರ್ಕಿಸುವಂತೆ ಕರಾಮುವಿ ಪ್ರಾದೇಶಿಕ ಕೇಂದ್ರ ಕಚೇರಿಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.