ಗ್ರಾ.ಪಂ. ಉಪ ಚುನಾವಣೆ : ಸಂತೆ, ಜಾತ್ರೆ ನಿಷೇಧ

ಚಾಮರಾಜನಗರ: ಜಿಲ್ಲೆಯ ಕೆಲವು ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆಯ ಮತದಾನವು ಜುಲೈ ೨೩ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಸದರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯೊಳಗೆ ಬರುವ ಎಲ್ಲಾ ಪ್ರದೇಶಗಳಲ್ಲಿ ಜುಲೈ ೨೩ರಂದು ಬೆಳಿಗ್ಗೆ ೫ ರಿಂದ ಸಂಜೆ ೬ ಗಂಟೆಯವರೆಗೆ ಸಂತೆ ಮತ್ತು ಎಲ್ಲಾ ತರಹದ ಜಾತ್ರೆಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರು ಆದೇಶಿಸಿದ್ದಾರೆ.

ಚಾಮರಾಜನಗರ ತಾಲೂಕಿನ ಮಸಣಪುರ ಗ್ರಾಮ ಪಂಚಾಯಿತಿಯ ಚಾಟೀಪುರ, ಚಾಮರಾಜನಗರ ತಾಲೂಕಿನ ಹೆಗ್ಗೋಠಾರ ಗ್ರಾಮ ಪಂಚಾಯಿತಿ ಹೆಗ್ಗೋಠಾರ ಕ್ಷೇತ್ರ, ಹರವೆ ಗ್ರಾಮ ಪಂಚಾಯಿತಿಯ ಕೇತಹಳ್ಳಿ, ಯಳಂದೂರು ತಾಲೂಕಿನ ಬಿಳಿಗಿರಿರಂಗನಬೆಟ್ಟ ಗ್ರಾಮ ಪಂಚಾಯಿತಿ ಯರಕನಗದ್ದೆ ಪೋಡು ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದೆ.

ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಾಗೂ ಮತದಾರರು ಮತ ಹಾಕಲು ಅನುಕೂಲ ಕಲ್ಪಿಸುವ ಹಿತದೃಷ್ಠಿಯಿಂದ ಸದರಿ ಕ್ಷೇತ್ರಕ್ಕೆ ಒಳಪಡುವ ಗ್ರಾಮ ಪಂಚಾಯಿತಿ ವ್ಯಾಪ್ತಿಯೊಳಗೆ ಬರುವ ಎಲ್ಲಾ ಪ್ರದೇಶಗಳಲ್ಲಿ ಜುಲೈ ೨೩ರಂದು ಬೆಳಿಗ್ಗೆ ೫ ರಿಂದ ಸಂಜೆ ೬ ಗಂಟೆಯವರೆಗೆ ಸಂತೆ ಮತ್ತು ಎಲ್ಲಾ ತರಹದ ಜಾತ್ರೆಗಳನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಯವರು ಆದೇಶದಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *