ನವದೆಹಲಿ: ಇಡೀ ವಿಶ್ವವೇ ಎದುರು ನೀಡುತ್ತಿದ್ದ ಚಂದ್ರಯಾನ-೩ ಗಗನ ನೌಕೆಯ ಲ್ಯಾಂಡರ್ ವಿಕ್ರಮ್ ಅನ್ನು ಇಸ್ರೋ ವಿಜ್ಞಾನಿಗಳು ಸಂಜೆ ೬:೦೪ಕ್ಕೆ ಚಂದ್ರನ ಮೇಲೆ ಸಾಫ್ಟ್ ಲ್ಯಾಂಡಿಂಗ್ ಮಾಡಿದ್ದಾರೆ.
ಈ ಮೂಲಕ ಚಂದ್ರನ ದಕ್ಷಿಣ ಧ್ರುವದಲ್ಲಿ ನೌಕೆಯನ್ನು ಯಶಸ್ವಿಯಾಗಿ ಇಳಿಸಿದ ಮೊದಲ ದೇಶವೆಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದ್ದು, ಬಾಹ್ಯಾಕಾಶ ಕ್ಷೇತ್ರದಲ್ಲಿ ಇಂದು ಭಾರತ ಐತಿಹಾಸಿಕ ಮೈಲಿಗಲ್ಲು ಸ್ಥಾಪಿಸಿದೆ.
ಇಸ್ರೋ ವಿಜ್ಞಾನಿಗಳ ಪರಿಶ್ರಮ, ಭಾರತೀಯರ ಪ್ರಾರ್ಥನೆ ಫಲವಾಗಿ ಚಂದ್ರನ ದಕ್ಷಿಣ ಧ್ರುವದಲ್ಲಿ ನಿಗದಿ ಪಡಿಸಿದ ಸಮಯಕ್ಕೆ ಸರಿಯಾಗಿ ಚಂದ್ರಯಾನ-3 ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿ ಚಂದ್ರನ ಮೇಲೆ ಕಾಲಿಟ್ಟಿತು. ಈ ಐತಿಹಾಸಿಕ ಕ್ಷಣಕ್ಕೆ ಇಡೀ ವಿಶ್ವವೇ ಸಾಕ್ಷಿಯಾಯಿತು. ಪ್ರಧಾನಿ ನರೇಂದ್ರ ಮೋದಿ ಅವರು ಶುಭಾಶಯ ಕೋರಿದರು.